ETV Bharat / state

ನೂತನ 17 ಮಂದಿ ಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ - New MLC Oath Taking

author img

By ETV Bharat Karnataka Team

Published : Jun 24, 2024, 1:39 PM IST

ಸಭಾಪತಿ ಹಾಗೂ ಸಿಎಂ ಸಮ್ಮುಖದಲ್ಲಿ 17 ನೂತನ ಪರಿಷತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.

ನೂತನ 17 ಮಂದಿ ಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ
ನೂತನ 17 ಮಂದಿ ಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ (ETV Bharat)

ಬೆಂಗಳೂರು: ನೂತನ 17 ವಿಧಾನ ಪರಿಷತ್​ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ವಿಧಾನಸಭೆಯಿಂದ ಆಯ್ಕೆಯಾದ 11 ಹಾಗೂ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಿಂದ ಚುನಾಯಿತರಾದ 6 ಮಂದಿ ಪರಿಷತ್ ಸದಸ್ಯರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಭಾಪತಿ ಬಸವರಾಜ್​ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 17 ಜನ ನೂತನ ಪರಿಷತ್ ಸದಸ್ಯರು ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು. ನೂರಾರು ಬೆಂಬಲಿಗರ ಮುಂದೆ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕಾರ ಮಾಡಿದರು. ಪ್ರಮಾಣ ವಚನ ಸ್ವೀಕಾರದ ವೇಳೆ ಬೆಂಬಲಿಗರು ತಮ್ಮ ನಾಯಕರ ಪರ ಘೋಷಣೆ ಕೂಗಿದರು.

ವಿಧಾನಸಭೆಯಿಂದ ಆಯ್ಕೆಯಾದ ಕಾಂಗ್ರೆಸ್ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಸಚಿವ ಬೋಸರಾಜು, ಕೆ.ಗೋವಿಂದ ರಾಜು, ವಸಂತ ಕುಮಾರ್, ಐವನ್ ಡಿಸೋಜಾ, ಬಲ್ಕೀಸ್ ಬಾನು, ಜಗದೇವ್ ಗುತ್ತೇದಾರ್, ಜೆಡಿಎಸ್​ನ ಎಂಎಲ್‌ಸಿ ಜವರಾಯಿ ಗೌಡ ಮತ್ತು ಬಿಜೆಪಿಯ ಮೂವರು ಪರಿಷತ್ ಸದಸ್ಯರಾದ ಸಿ.ಟಿ. ರವಿ, ಎನ್. ರವಿಕುಮಾರ್ ಹಾಗೂ ಎಂ.ಜಿ. ಮುಳೆ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಇನ್ನು, ಕಾಂಗ್ರೆಸ್​​ನ ಈಶಾನ್ಯ ಪದವೀಧರ ಕ್ಷೇತ್ರದ ಎಂಎಲ್​ಸಿ ಚಂದ್ರಶೇಖರ ಬಸವರಾಜ್​​ ಪಾಟೀಲ್​, ಬೆಂಗಳೂರು ಪದವೀಧರ ಕ್ಷೇತ್ರದ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದ ಡಿ.ಟಿ. ಶ್ರೀನಿವಾಸ್, ಬಿಜೆಪಿಯ ನೈರುತ್ಯ ಪದವೀಧರ ಕ್ಷೇತ್ರದ ಎಂಎಲ್‌ಸಿ ಧನಂಜಯ್​ ಸರ್ಜಿ, ಜೆಡಿಎಸ್​ನ ನೈರುತ್ಯ ಶಿಕ್ಷಕರ ಕ್ಷೇತ್ರದ ಎಸ್.ಎಲ್.ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದ ಎಂಎಲ್ ಸಿ ಕೆ.ವಿವೇಕಾನಂದ ಇದೇ ವೇಳೆ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಇದನ್ನೂ ಓದಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ: ಮೋದಿ ಸೇರಿ ನೂತನ ಸಂಸದರಿಂದ ಪ್ರಮಾಣ ವಚನ ಸ್ವೀಕಾರ! - Modi and others takes oath as MP

ETV Bharat Logo

Copyright © 2024 Ushodaya Enterprises Pvt. Ltd., All Rights Reserved.