ETV Bharat / state

ಬಸವಕಲ್ಯಾಣ: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಯುವತಿ, ಮುಳ್ಳಿನ ಪೊದೆಯಲ್ಲಿ ಶವವಾಗಿ ಪತ್ತೆ - Girl Found dead - GIRL FOUND DEAD

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ದುಷ್ಕರ್ಮಿಗಳು ಕೊಲೆ ಮಾಡಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Sep 1, 2024, 10:54 PM IST

ಬಸವಕಲ್ಯಾಣ (ಬೀದರ್): ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ 18 ವರ್ಷದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದ ಮುಳ್ಳಿನ ಪೊದೆಯಲ್ಲಿ ಯುವತಿ ಮೃತದೇಹ ಪತ್ತೆಯಾಗಿದೆ.

ಯುವತಿ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿದ್ದಾರೆ. ಆದರೆ ಯುವತಿಯ ಪೋಷಕರು ಕೆಲ ವರ್ಷಗಳಿಂದ ಗುಣತೀರ್ಥವಾಡಿ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಆದರೆ ಮೂರು ದಿನಗಳ ಹಿಂದೆ ರಾತ್ರಿ ವೇಳೆ ಯುವತಿ ನಾಪತ್ತೆಯಾಗಿದ್ದಳು.

ಯುವತಿ ತಲೆ ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ಗಾಯಗಳಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ಇದೆ. ಹೆಚ್ಚುವರಿ ಎಸ್​ಪಿ ಮಹೇಶ ಮೇಘಣ್ಣನವರ್, ಚಂದ್ರಕಾಂತ ಪೂಜಾರಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ಅಲಿಸಾಬ್, ಕೃಷ್ಣಕುಮಾರ್ ಪಾಟೀಲ್, ಶ್ರೀನಿವಾಸ ಅಲ್ಲಪೂರ, ಪಿಎಸ್ಐ ಅಂಬರೀಶ್ ವಾಗ್ಮೋಡೆ, ಸುವರ್ಣ ಮಲಶೆಟ್ಟಿ ಇತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಯುವತಿಯನ್ನು ಕೊಲೆ ಮಾಡಿ ಮುಳ್ಳು ಕಂಟಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾನ್​ ಘಟನಾ ಸ್ಥಳಕ್ಕೆ ಧಾವಿಸಿ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ ಕಾಲಿಗೆ ಗುಂಡೇಟು - Police Shot Rowdy Sheeter

ETV Bharat Logo

Copyright © 2025 Ushodaya Enterprises Pvt. Ltd., All Rights Reserved.