ETV Bharat / state

ಕಾರಲ್ಲಿ 2 ಕೋಟಿ ಹಣ ಪತ್ತೆ ಕೇಸ್​: ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಸೇರಿ ಮೂವರ ವಿರುದ್ಧ ಎಫ್​ಐಆರ್ - 2 CRORE CASH FOUND - 2 CRORE CASH FOUND

ಬೆಂಗಳೂರಲ್ಲಿ ಕಾರಲ್ಲಿ 2 ಕೋಟಿ ಹಣ ಪತ್ತೆ ಪ್ರಕರಣ ಸಂಬಂಧ ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೊಕೇಶ್ ಅಂಬೆಕಲ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

cash found in car
cash found in car
author img

By ETV Bharat Karnataka Team

Published : Apr 22, 2024, 10:32 AM IST

Updated : Apr 22, 2024, 12:04 PM IST

ಕಾರಲ್ಲಿ 2 ಕೋಟಿ ಹಣ ಪತ್ತೆ ಕೇಸ್​

ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ವೇಳೆ ಕಾರಿನಲ್ಲಿ 2 ಕೋಟಿ ರೂಪಾಯಿ ಹಣ‌ ಪತ್ತೆ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದ್ದು, ಹಣ ಜಪ್ತಿ ಮಾಡಿಕೊಂಡ ಇಲಾಖೆ ತನಿಖೆ ಚುರುಕುಗೊಳಿಸಿದೆ.

ಕಳೆದ ಶನಿವಾರ ಮಧ್ಯಾಹ್ನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುವಾಗ ಕಾರಿನಲ್ಲಿ 2 ಕೋಟಿ‌ ಹಣ ಪತ್ತೆ ಹಿನ್ನೆಲೆ ಚುನಾವಣಾಧಿಕಾರಿ ರವಿ ಅಸೂತಿ ಎಂಬುವರು ನೀಡಿದ ದೂರಿನ ಮೇರೆಗೆ ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೊಕೇಶ್ ಅಂಬೆಕಲ್, ಹಣ ಸಾಗಿಸುತ್ತಿದ್ದ ವೆಂಕಟೇಶ್ ಪ್ರಸಾದ್ ಹಾಗೂ ಗಂಗಾಧರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ‌. ಐಟಿ ಅಧಿಕಾರಿಗಳು ಮಾಹಿತಿ ಮೇರೆಗೆ ಹಣ ಜಪ್ತಿ ಮಾಡಿಕೊಂಡಿದ್ದು, ಇಬ್ಬರು ಆರೋಪಿತರನ್ನು ಹೆಚ್ಚಿನ ವಿಚಾರಣೆ ನಡೆಸಲು ನೊಟೀಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕಾರಿನಲ್ಲಿ‌ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಹಣ ವಶಕ್ಕೆ - Money Found In Car

ಕೋದಂಡರಾಮಪುರ ಕೆನೆರಾ ಬ್ಯಾಂಕಿನಲ್ಲಿ ಕಳೆದ ಮಾರ್ಚ್ 27ರಂದು 5 ಕೋಟಿ ರೂಪಾಯಿ ಹಣ ವಿತ್ ಡ್ರಾ ಮಾಡಲಾಗಿದ್ದು, ಈ ಪೈಕಿ 2 ಕೋಟಿ ಹಣವನ್ನು ಮೈಸೂರು - ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಬೂತ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕ್ರಮಗಳಿಗೆ ಹಣ ಹಂಚಲು ಹೋಗುತ್ತಿರುವುದಾಗಿ ಆರೋಪಿತರು ಪ್ರಾಥಮಿಕ ತನಿಖೆಯಲ್ಲಿ ಒಪ್ಪಿಕೊಂಡಿದ್ದರು. ಈ ವೇಳೆ, ಪತ್ತೆಯಾದ ಪತ್ರದಲ್ಲಿ ಮೇಲಿನ ಲೋಕಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರಿಗೆ ಹಣ ಹಂಚಲು ವೆಂಕಟೇಶ್ ಮೂಲಕ ಹಣ ಸಾಗಿಸುತ್ತಿರುವ ಬಗ್ಗೆ ಉಲ್ಲೇಖವಾಗಿತ್ತು ಎಂದು ಚುನಾವಣಾಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ. ಈ ಸಂಬಂಧ ಪೊಲೀಸರ ಸಮಕ್ಷಮದಲ್ಲಿ ಹಣ ಎಣಿಕೆ ಮಾಡಿ ವಶಕ್ಕೆ ಪಡೆದುಕೊಂಡು ತನಿಖೆಯನ್ನ ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ಧಾರವಾಡದ ಅಪಾರ್ಟ್​​​ಮೆಂಟ್​​ನಲ್ಲಿ ₹17 ಕೋಟಿ 98 ಲಕ್ಷ ರೂ ಪತ್ತೆ: ಮುಂದುವರಿದ ತನಿಖೆ - Cash Found

Last Updated : Apr 22, 2024, 12:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.