ETV Bharat / state

ಅನ್ನದಾತರಿಗೆ ದೀಪಾವಳಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ ; ಭತ್ತಕ್ಕೆ 2300 ರೂ. ಬೆಂಬಲ ಬೆಲೆ - ಸಚಿವ ಜೋಶಿ - PRALHAD JOSHI

ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಸರ್ಕಾರ ಭತ್ತದ ಬೆಳೆಗಾರರಿಗೆ ಬೆಂಬಲ ಬೆಲೆಯ ಗಿಫ್ಟ್​ ನೀಡಿದೆ.

Paddy
ಭತ್ತ (ETV Bharat (ಸಂಗ್ರಹ ಚಿತ್ರ))
author img

By ETV Bharat Karnataka Team

Published : Oct 27, 2024, 11:02 PM IST

ನವದೆಹಲಿ/ ಹುಬ್ಬಳ್ಳಿ : ಕೇಂದ್ರ ಸರ್ಕಾರ ಅನ್ನದಾತರಿಗೆ ದೀಪಾವಳಿ ಹಬ್ಬಕ್ಕೆ ಬೆಂಬಲ ಬೆಲೆಯ ಗಿಫ್ಟ್ ನೀಡಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಭತ್ತ ಬೆಳೆಗಾರರ ಬದುಕಿಗೆ ಬೆಳಕು ನೀಡಿದೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿ, ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿರುವ ಬಗ್ಗೆ ಮಾಹಿತಿ ನೀಡಿದರು.

pralhad-joshi
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (ETV Bharat)

2300 ರೂ.ಗೆ ಬೆಂಬಲ ಬೆಲೆ ಹೆಚ್ಚಳ : 2013-14ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ ₹1310 ಇದ್ದು, ಈಗ ಅದನ್ನು 2300 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

185 ಲಕ್ಷ ಟನ್ ಭತ್ತ, 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ: ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮವು ಪ್ರಸಕ್ತ ಮುಂಗಾರು ಹಂಗಾಮಿನ 185 ಲಕ್ಷ ಟನ್ ಭತ್ತ ಮತ್ತು 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಯೋಜನೆ ಸಹ ಹಾಕಿಕೊಂಡಿದೆ ಎಂದರು.

14 ಲಕ್ಷ ಮೆಟ್ರಿಕ್ ಟನ್ ಸಂಗ್ರಹಕ್ಕೆ ಸ್ಥಳವಿದೆ : ಭತ್ತದ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಮುಂಗಾರು ಹಂಗಾಮು ಭತ್ತ ಸಂಗ್ರಹಕ್ಕೆ ಸಾಕಷ್ಟು ಸ್ಥಳವಿದೆ. ಪ್ರಸ್ತುತ 14 LMT ಭತ್ತ ಸಂಗ್ರಹಕ್ಕೆ ಸ್ಥಳಾವಕಾಶವಿದೆ. ಪಂಜಾಬಿನಲ್ಲಿ ಸಂಗ್ರಹಿಸಿರುವ ಅಕ್ಕಿಯನ್ನು ತ್ವರಿತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದರು.

2700 ಮಂಡಿಗಳಲ್ಲಿ ಸಂಗ್ರಹ: ಅಕ್ಟೋಬರ್ 1 ರಿಂದ 2700 ಮಂಡಿಗಳಲ್ಲಿ ಭತ್ತ ಸಂಗ್ರಹಣೆ ಪ್ರಾರಂಭಿಸಿದ್ದು, ಇಂದಿಗೆ ಒಟ್ಟು 50 LMT ಭತ್ತವನ್ನು ಸಂಗ್ರಹಿಸಲಾಗಿದೆ ಎಂದರು.

ನಾಮನಿರ್ದೇಶನದ ಆಧಾರದ ಮೇಲೆ CWC/SWC ಗೋದಾಮುಗಳನ್ನು ಬಾಡಿಗೆಗೆ ತೆಗೆದುಕೊಂಡು ಶೇಖರಣೆಗೆ ವ್ಯವಸ್ಥೆ ಮಾಡಲಾಗಿದೆ. ಗೋಧಿ ದಾಸ್ತಾನು ತ್ವರಿತ ಸ್ಥಳಾಂತರ ಜೊತೆಗೆ PEG ಯೋಜನೆಯಡಿ 31 LMT ಶೇಖರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಆನ್ ಲೈನ್ ಪೋರ್ಟಲ್ : ಅಕ್ಕಿ ಗಿರಣಿದಾರರಿಗೆ ದೂರು ಪರಿಹಾರಕ್ಕಾಗಿ ಆನ್‌ಲೈನ್ ಪೋರ್ಟಲ್ ಅನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದೂ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.

ಪ್ರಮುಖಾಂಶಗಳು:

  • ಅಕ್ಟೋಬರ್ 24ಕ್ಕೆ 34.75 LMT ನ ಅಖಿಲ ಭಾರತ ಚಾಲನಾ ಯೋಜನೆಯಿಂದ ಪಂಜಾಬ್‌ಗೆ ಸುಮಾರು 40% (13.76 LMT) ಪಾಲನ್ನು ಹಂಚಲಾಗಿದೆ.
  • ಚಾಲನಾ ಯೋಜನೆ ಮತ್ತು ಶೇಖರಣಾ ಸಾಮರ್ಥ್ಯ ರಚನೆ/ನೇಮಕವನ್ನು ವಾರಕ್ಕೊಮ್ಮೆ ಮೇಲ್ವಿಚಾರಣೆ ಮಾಡಲು ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಲಾಗಿದೆ.
  • ಭತ್ತದ ಪ್ರಸ್ತುತ ಔಟ್ ಟರ್ನ್ ಅನುಪಾತ (OTR) ಮತ್ತು ಡ್ರೈಯೇಜ್ ಘಟನೆಗಳನ್ನು ಪರಿಶೀಲಿಸುವ ಅಧ್ಯಯನವನ್ನು ನಡೆಸಲು ಐಐಟಿ ಖರಗ್‌ಪುರವನ್ನು ನಿಯೋಜಿಸಲಾಗಿದೆ.
  • 15 ದಿನಗಳ ಕಾಯುವ ಅವಧಿಯನ್ನು ಮೀರಿ ಗೊತ್ತುಪಡಿಸಿದ ಡಿಪೋಗಳಲ್ಲಿ ಖಾಲಿ ಜಾಗದ ಲಭ್ಯತೆಯಿಲ್ಲದ ಸಂದರ್ಭದಲ್ಲಿ ಹೆಚ್ಚುವರಿ ಸಾರಿಗೆ ಶುಲ್ಕಗಳನ್ನು ಅನುಮತಿಸಲಾಗಿದೆ.

ಇದನ್ನೂ ಓದಿ : ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸಮ್ಮತಿ: ಕ್ವಿಂಟಾಲ್​ಗೆ ಎಷ್ಟು ದರ ನಿಗದಿ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.