ETV Bharat / state

ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು: ಸಿಎಂ ಸೂಚನೆ - REVENUE COLLECTION TARGET

ಮುಂದಿನ ಮಾರ್ಚ್​ವರೆಗೆ ಪ್ರತಿ ತಿಂಗಳು ರೂ.2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ರಾಜಸ್ವ ಸಂಗ್ರಹಣೆ ಪರಿಶೀಲನಾ ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.

CM SIDDARAMAIAH  REVENUE COLLECTION REVIEW MEETING  BENGALURU
ಸಿಎಂ ಸೂಚನೆ (IANS)
author img

By ETV Bharat Karnataka Team

Published : Oct 30, 2024, 7:11 AM IST

ಬೆಂಗಳೂರು: ಮುಂದಿನ ಮಾರ್ಚ್​ವರೆಗೆ ಪ್ರತಿ ತಿಂಗಳು ರೂ. 2,400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅವರ ಅಧ್ಯಕ್ಷತೆಯಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಇಲಾಖೆ 2024-25ರ ಸಾಲಿನ ರಾಜಸ್ವ ಸಂಗ್ರಹಣೆ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024 - 25ರ ಸಾಲಿನಲ್ಲಿ ರೂ. 26,000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದ್ದು, ಅಕ್ಟೋಬರ್ ತಿಂಗಳ ಅಂತ್ಯದವರೆಗೆ ರೂ.13,724 ಕೋಟಿ ಸಂಗ್ರಹ ಆಗಿದೆ.

ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಬೇಕು. ನೋಂದಣಿಯೇತರ ದಾಸ್ತಾವೇಜುಗಳಿಗೆ ಸರಿಯಾದ ಮುದ್ರಾಂಕ ಶುಲ್ಕವನ್ನು ಪಾವತಿಸಿಕೊoಡು ಹೆಚ್ಚಿನ ರಾಜಸ್ವ ಸಂಗ್ರಹಿಸಬೇಕು ಎನ್ನುವ ಸೂಚನೆ ನೀಡಿದರು.

ಸಾರಿಗೆ ಇಲಾಖೆ 5,569 ಕೋಟಿ ರಾಜಸ್ವ ಸಂಗ್ರಹ: 2024-25ನೇ ಸಾಲಿನಲ್ಲಿ ವಾರ್ಷಿಕ ರಾಜಸ್ವ ಸಂಗ್ರಹ ಗುರಿ ರೂ. 13000 ಕೋಟಿ ಆಗಿದ್ದು, ಸೆಪ್ಟೆಂಬರ್ ವರೆಗೆ ರೂ. 5569 ಕೋಟಿ ಸಂಗ್ರಹ ಮಾಡಲಾಗಿದೆ. ಹಿಂದಿನ ಸಾಲಿಗಿಂತ ಈ ಅವಧಿಯಲ್ಲಿ ರೂ. 308.98 ಕೋಟಿ ಹೆಚ್ಚುವರಿ ರಾಜಸ್ವ ಸಂಗ್ರಹ ಆಗಿದೆ. ಮಾಸಿಕ ಗುರಿ ನಿಗದಿಪಡಿಸಿಕೊಂಡು ಮಾರ್ಚ್ ಅಂತ್ಯದ ಒಳಗಾಗಿ ನಿಗದಿತ ಗುರಿ ಸಾಧಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಅತೀಕ್, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಓದಿ: ಮುಡಾ ಮಾಜಿ ಆಯುಕ್ತ ನಟೇಶ್ ಇ.ಡಿ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.