ETV Bharat / state

ಕೆಲಸ ಮಾಡುತ್ತಿದ್ದ ಕಚೇರಿಯಿಂದ ₹25 ಲಕ್ಷ ಕದ್ದು ಪರಾರಿ; ನಿವೃತ್ತ ಸಬ್‌ ಇನ್ಸ್‌ಪೆಕ್ಟರ್‌ ಮಗ ಸೆರೆ - Thief Arrested - THIEF ARRESTED

ಮಾರ್ಚ್​ 20ರಂದು ತಾನು ಕೆಲಸ ಮಾಡುತ್ತಿದ್ದ ಕಚೇರಿಯಿಂದ ಹಣ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ವಿಜಯನಗರ ಠಾಣಾ ಪೊಲೀಸರು ಸೆರೆ ಹಿಡಿದಿದ್ದಾರೆ.

ಕಳ್ಳತನ ಪ್ರಕರಣದ ಆರೋಪಿ ಮಹೇಶ್
ಕಳ್ಳತನ ಪ್ರಕರಣದ ಆರೋಪಿ ಮಹೇಶ್ (ETV Bharat)
author img

By ETV Bharat Karnataka Team

Published : May 14, 2024, 12:55 PM IST

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಬಂಧಿತ ಆರೋಪಿ.

ನಿವೃತ್ತ ಸಬ್‌ ಇನ್ಸ್‌ಪೆಕ್ಟರ್ ಮಗ!: ಮಾರ್ಚ್ 20ರ ರಾತ್ರಿ ವಿಜಯನಗರದ ಸರ್ವಿಸ್​ ರಸ್ತೆಯಲ್ಲಿರುವ ಕೆ.ಎನ್.ಎಸ್​.ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಕಚೇರಿಯ ಕ್ಯಾಶ್​ ಬಾಕ್ಸ್‌ನಲ್ಲಿದ್ದ 25 ಲಕ್ಷ ರೂಪಾಯಿ ನಗದು ಕದ್ದು ಆರೋಪಿ ತಲೆಮರೆಸಿಕೊಂಡಿದ್ದ. ನಿವೃತ್ತ ಸಬ್‌ಇನ್ಸ್‌ಪೆಕ್ಟರ್ ಒಬ್ಬರ ಮಗನಾಗಿರುವ ಆರೋಪಿ ಕಚೇರಿಯಲ್ಲಿ ಡಾಕ್ಯುಮೆಂಟ್ ಎಕ್ಸಿಕ್ಯುಟಿವ್​ ಕೆಲಸ ಮಾಡಿಕೊಂಡಿದ್ದ. ಇತ್ತೀಚಿಗೆ ಕಚೇರಿ ಸಿಬ್ಬಂದಿ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕಂಪನಿಯ ಮಾಲೀಕರು ವಿಜಯನಗರ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಏಪ್ರಿಲ್ 28ರಂದು ಮಧ್ಯಾಹ್ನ ಮಡಿಕೇರಿ ಟೋಲ್‌ಗೇಟ್ ಬಳಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಬೆಂಗಳೂರಿನ ಮೂಡಲಪಾಳ್ಯದಲ್ಲಿರುವ ತನ್ನ ಸ್ನೇಹಿತನ ಕೊಠಡಿಯಲ್ಲಿಟ್ಟಿದ್ದ 24.50 ಲಕ್ಷ ರೂ ಹಣವನ್ನೂ ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಅಕ್ಕನ ಮನೆಯಲ್ಲಿ ₹65 ಲಕ್ಷದ ನಗ, ನಾಣ್ಯ ದೋಚಿದ್ದ ತಂಗಿ ಅರೆಸ್ಟ್ - House Theft

ETV Bharat Logo

Copyright © 2025 Ushodaya Enterprises Pvt. Ltd., All Rights Reserved.