ETV Bharat / state

ಕ್ರೀಡಾ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ ನೀಡುವ ಬಗ್ಗೆ ಪರಿಶೀಲನೆ: ಸಿಎಂ ಭರವಸೆ

ಕ್ರೀಡಾಪಟುಗಳಿಗೆ ಸರ್ಕಾರ ಎಲ್ಲ ರೀತಿಯ ಸವಲತ್ತು ನೀಡಲು ಸಿದ್ಧವಿದೆ. ಜೊತೆಗೆ ಕ್ರೀಡಾ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಹಾಜರಾತಿ ಮತ್ತು 10 ಗ್ರೇಸ್ ಮಾರ್ಕ್ಸ್ ನೀಡುವ ಬಗ್ಗೆ ಕೂಡ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಸಿಎಂ ಸಿದ್ದರಾಮಯ್ಯ Grace marks Sports students
ಯವನಿಕಾದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ, ಗೃಹ ಸಚಿವರು ಮತ್ತು ಗಣ್ಯರು (Etv Bharat)
author img

By ETV Bharat Karnataka Team

Published : Dec 2, 2024, 6:54 AM IST

ಬೆಂಗಳೂರು: ಕ್ರೀಡಾ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಹಾಜರಾತಿ ಹಾಗೂ 10 ಗ್ರೇಸ್ ಮಾರ್ಕ್ಸ್ ನೀಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ ಒಲಂಪಿಕ್ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಸಿಎಂ ಮಾತನಾಡಿದರು.

ಇದಕ್ಕೂ ಮುಂಚೆ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಒಲಂಪಿಕ್ ಸಂಸ್ಥೆ ಅಧ್ಯಕ್ಷರಾದ ಗೋವಿಂದರಾಜು, ಶಾಲಾ ಮಕ್ಕಳು ಕ್ರೀಡೆಯಲ್ಲಿ ಹೆಚ್ಚೆಚ್ಚು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಕ್ರೀಡಾ ಮಕ್ಕಳಿಗೆ ಶೇ.25 ರಷ್ಡು ಹಾಜರಾತಿ ಮತ್ತು 10 ಗ್ರೇಸ್ ಮಾರ್ಕ್ ನೀಡುವಂತೆ ನಿಯಮ ರೂಪಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಬಗ್ಗೆ ಪ್ರಸ್ತಾಪಿಸಿದ ಸಿಎಂ, ಈ ಬೇಡಿಕೆಗಳು ನ್ಯಾಯೋಚಿತವಾಗಿವೆ. ಈ ಬಗ್ಗೆ ಗಂಭೀರವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಸಿಎಂ ಸಿದ್ದರಾಮಯ್ಯ Grace marks Sports students
ಯವನಿಕಾದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ (ETV Bharat)

ದೇಶಕ್ಕೆ ಒಂದು ಚಿನ್ನ ತನ್ನಿ: ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು - ನೆರವು ನೀಡಲು ನಾನು ಸದಾ ಸಿದ್ಧ. ರಾಜ್ಯ ಬಜೆಟ್​​ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್​​ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ. ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ಬೆಳ್ಳಿ ಪದಕ ಪಡೆದವರಿಗೆ 4 ಕೋಟಿ ಹಣ ಇಟ್ಟಿದ್ದೇವೆ. ಆದರೆ, ಯಾರೂ ಪದಕ ತರ್ತಾನೇ ಇಲ್ಲ. ದೇಶಕ್ಕೆ ಯಾರಾದರೂ ಚಿನ್ನ ತನ್ನಿ ಎಂದು ಕರೆ ನೀಡಿದರು.

ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪ್ರೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ. ಗೋವಿಂದರಾಜು ಅವರು ಒಲಂಪಿಕ್ ಸಂಸ್ಥೆ ಅಧ್ಯಕ್ಷರಾಗಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ. ನಾನು ಬಜೆಟ್ ರೂಪಿಸುವಾಗ ಚರ್ಚೆಯಲ್ಲಿ ಕುಳಿತು ಕ್ರೀಡಾಕ್ಷೇತ್ರಕ್ಕೆ ಅಗತ್ಯವಾದ ಎಲ್ಲವನ್ನೂ ಸೇರಿಸುತ್ತಾರೆ. ನಾನು ಕ್ರೀಡಾಪಟು ಅಲ್ಲದಿದ್ದರೂ ಕ್ರೀಡಾಪ್ರೇಮಿ. ನಾನು ಶಾಲಾ, ಕಾಲೇಜಿನಲ್ಲಿ ಎಲ್ಲಾ ಕ್ರೀಡೆಗಳಲ್ಲೂ ಭಾಗವಹಿಸುತ್ತಿದ್ದೆ. ಒಂದೂ ಪ್ರಶಸ್ತಿ ಬರಲಿಲ್ಲ. ಆದರೆ ಶಾಸಕರ ಕ್ರೀಡಾಕೂಟದಲ್ಲಿ ಸಿಕ್ಕಾಪಟ್ಟೆ ಪ್ರಶಸ್ತಿ ಬಂತು ಎಂದು ಸ್ಮರಿಸಿದರು.

ಕ್ರೀಡೆಯಲ್ಲಿ ಸಣ್ಣ ಪುಟ್ಟ ದೇಶಗಳೆಲ್ಲಾ ಬಹಳ‌ ಮುಂದಿವೆ. ಆದರೆ, ಭಾರತದಂತಹ ದೊಡ್ಡ ದೇಶಕ್ಕೆ ಒಲಂಪಿಕ್​ನಲ್ಲಿ ಒಂದೂ ಚಿನ್ನ ಬರಲಿಲ್ಲ ಎನ್ನುವುದು ಬೇಸರದ ಸಂಗತಿ. ಹೀಗಾಗಿ ನಾನು ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಇರುವ ಎಲ್ಲಾ ಅನುಕೂಲ ಕಲ್ಪಿಸಿಕೊಡಲು ನಾನು ಸಿದ್ಧ. ರಾಜ್ಯದ ಪಟುಗಳು ದೇಶಕ್ಕೆ ಒಲಂಪಿಕ್ಸ್ ನಲ್ಲಿ ಚಿನ್ನ ತರಲಿ ಎಂದು ಆಶಿಸಿದರು.

ಇದನ್ನೂ ಓದಿ: ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸಲು ಹಾಸನದಲ್ಲಿ ಸಮಾವೇಶ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.