ETV Bharat / state

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 30 ಆರೋಪಿಗಳು ಅರೆಸ್ಟ್, ದಾವಣಗೆರೆ ಶಾಂತ - Davanagere Stone Pelting Case - DAVANAGERE STONE PELTING CASE

ದಾವಣಗೆರೆಯಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಜನರನ್ನು ಬಂಧಿಸಿದ್ದೇವೆ. ಸದ್ಯ ನಗರದಲ್ಲಿ ಶಾಂತಿ ವಾತಾವರಣವಿದೆ ಎಂದು ಪೂರ್ವ ವಲಯ ಐಜಿಪಿ ರಮೇಶ್‌ ಬಾನೋತ್ ತಿಳಿಸಿದ್ದಾರೆ.

ಕಲ್ಲು ತೂರಾಟ ಪ್ರಕರಣದ ಬಗ್ಗೆ ಪೂರ್ವ ವಲಯ ಡಿಐಜಿಪಿ ರಮೇಶ್‌ ಬಾನೋತ್ ಮಾಹಿತಿ
ಕಲ್ಲು ತೂರಾಟ ಪ್ರಕರಣದ ಬಗ್ಗೆ ಪೂರ್ವ ವಲಯ ಐಜಿಪಿ ರಮೇಶ್‌ ಬಾನೋತ್ ಮಾಹಿತಿ (ETV Bharat)
author img

By ETV Bharat Karnataka Team

Published : Sep 20, 2024, 2:03 PM IST

ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಉಂಟಾದ ಸ್ಥಳಕ್ಕೆ ಎಸ್​ಪಿ ತಕ್ಷಣವೇ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ. ದಾವಣಗೆರೆಯಲ್ಲಿ ಶಾಂತಿ ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ 30 ಜನರನ್ನು ಬಂಧಿಸಿದ್ದೇವೆ. ಮನೆಗಳ ಮೇಲೆ, ಸಾರ್ವಜನಿಕರ ಮೇಲೆ‌ ಕಲ್ಲು ತೂರಾಟ ಸೇರಿ ಒಟ್ಟು ಐದು ಕೇಸ್​ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೂರ್ವ ವಲಯ ಐಜಿಪಿ ರಮೇಶ್‌ ಬಾನೋತ್ ಮಾಹಿತಿ ನೀಡಿದ್ದಾರೆ.

ಪ್ರಕರಣ ಕುರಿತು 'ಈಟಿವಿ ಭಾರತ್' ಜೊತೆ ಮಾತನಾಡಿದ ಅವರು, ಸದ್ಯ ದಾವಣಗೆರೆಯಲ್ಲಿ ಶಾಂತಿ ವಾತಾವರಣವಿದೆ. ಗಣೇಶೋತ್ಸವ ಬಂದೋಬಸ್ತ್​ಗೆ ನಾಲ್ಕು ಠಾಣೆಗಳ ಸಿಬ್ಬಂದಿಯನ್ನು ಕರ್ತವ್ಯ ನಿರ್ವಹಣೆಗೆ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಬೇರೆ ಕಡೆಗಳಿಂದ ಮತ್ತಷ್ಟು ಸಿಬ್ಬಂದಿಯನ್ನು ಭದ್ರತೆಗಾಗಿ ಕರೆತರಲಾಗಿದೆ. ಕಲ್ಲೆಸೆದವರ ಪತ್ತೆಗೆ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ನಗರದಲ್ಲಿ ಶಾಂತಿಸಭೆ ನಡೆಸಲು ಸಿದ್ಧತೆಯೂ ಮಾಡಿಕೊಳ್ಳಲಾಗುತ್ತಿದೆ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ವಿಷಯಗಳ ಕುರಿತು ಪ್ರತಿಕ್ರಿಯಿಸಿ, ಪ್ರಚೋದನಾತ್ಮಕ ಆಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ನಗರದಲ್ಲಿ ನಿಷೇಧಾಜ್ಞೆ ಸದ್ಯಕ್ಕೆ ಅಗತ್ಯವಿಲ್ಲ. ಈ ಘಟನೆ‌ ಬಳಿಕ ಎಲ್ಲರೂ ಸಹಕರಿಸಿ ಗಣೇಶ ನಿಮಜ್ಜನ ಮಾಡಿದ್ದಾರೆ. ಪಕ್ಕಾ ಮಾಹಿತಿ ಆಧರಿಸಿ ಎಲ್ಲ ಆರೋಪಿಗಳನ್ನು ಬಂಧಿಸಿದ್ದೇವೆ. ಯಾವುದೇ ಅಮಾಯಕರನ್ನು ಬಂಧಿಸಿಲ್ಲ ಎಂದು ತಿಳಿಸಿದರು.

ಮದ್ಯದ ಬಾಟಲಿ ಸಂಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿ, ಖಾಲಿ ಬಿಯರ್ ಬಾಟಲಿ ಸಂಗ್ರಹಿಸಿದ್ದ ಹತ್ತು ಜನರನ್ನು ಬಂಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶದಲ್ಲಿ ಖುದ್ದು ಎಸ್​ಪಿ ಅವರೇ ಹಾಜರಿದ್ದರು ಎಂದು ಪೂರ್ವ ವಲಯ ಐಜಿಪಿ ಹೇಳಿದ್ದಾರೆ.

ಗಣೇಶ ಮೆರವಣಿಗೆ ವೇಳೆ ಕಲ್ಲು- ಆತಂಕದಲ್ಲಿ ಪೋಷಕರು: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಹಿನ್ನೆಲೆಯಲ್ಲಿ ಪೋಷಕರು ಇಂದು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕಿದ್ದಾರೆ. ಇದರಿಂದ ದಾವಣಗೆರೆ ನಗರದ ಎನ್.ಆರ್.ರಸ್ತೆಯಲ್ಲಿರುವ ಅಕ್ಕಮಹಾದೇವಿ ಶಾಲೆ ವಿದ್ಯಾರ್ಥಿಗಳಿಲ್ಲದೆ ಬಿಕೋ ಎನ್ನುತ್ತಿತ್ತು.

ಅಕ್ಕಮಹಾದೇವಿ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ನಾಯ್ಕ ಪ್ರತಿಕ್ರಿಯಿಸಿ, ಅಕ್ಕಮಹಾದೇವಿ ಶಾಲೆ ಪಕ್ಕದಲ್ಲೇ ಈ ಘಟನೆ ನಡೆದಿದೆ. ಅಜಾದ್ ನಗರ, ಬೇತೂರು ರಸ್ತೆ, ಅರಳಿ ಮರದ ಸರ್ಕಲ್ ಬಳಿಯಿಂದಲೇ ವಿದ್ಯಾರ್ಥಿಗಳು ಶಾಲೆಗೆ ಬರಬೇಕಿತ್ತು. ಘಟನೆ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಓದುತ್ತಿರುವ 1,250 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇಂದು ಶಾಲೆಗೆ ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಪೋಷಕರು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಗಣೇಶ ನಿಮಜ್ಜನ ಮೆರವಣಿಗೆ ವೇಳೆ ಕಲ್ಲು ತೂರಾಟ: ಅಗತ್ಯ ಬಿದ್ದರೆ ಸೆಕ್ಷನ್​ 144 ಜಾರಿ - SP - Stone Pelting

ETV Bharat Logo

Copyright © 2025 Ushodaya Enterprises Pvt. Ltd., All Rights Reserved.