ಚಿಕ್ಕಬಳ್ಳಾಪುರ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಾಗೇಪಲ್ಲಿ ಪೊಲೀಸರು ನಾಲ್ವರು ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವರ್ಷದ ಫೆಬ್ರವರಿ 6 ಮತ್ತು ನವೆಂಬರ್ 5 ರಂದು ಬಾಗೇಪಲ್ಲಿ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣ ಸಂಬಂಧ ಪೊಲೀಸರು, ಆಂಧ್ರಪ್ರದೇಶದ ವೆಂಕಟೇಶ್ ಬಾಬು ಮತ್ತು ಸುರೇಶ್ ಎಂಬುವರನ್ನು ಬಂಧಿಸಿ 4 ಲಕ್ಷ ಮೌಲ್ಯದ 58 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬೈಕ್ ಕಳ್ಳರ ಬಂಧನ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಸಂಬಂಧ ಪೊಲೀಸರು, ಆಂಧ್ರಪ್ರದೇಶದ ಸುಮಂತ್ ಮತ್ತು ಮಣಿಕಂಠ ಎಂಬುವರನ್ನು ಬಂಧಿಸಿ 10 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರ ಮೇಲೆ ಬಾಗೇಪಲ್ಲಿ, ಯಶವಂತಪುರ, ಯಲಹಂಕ, ಕೊಪ್ಪಳ ಮತ್ತು ಮಂಚೇನಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಕಳ್ಳತನ ಪ್ರಕರಣಗಳನ್ನು ಭೇದಿಸಿದ ಬಾಗೇಪಲ್ಲಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ತಂಡದ ಕಾರ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನಟೋರಿಯಸ್ ಕ್ರಿಮಿನಲ್‌ನ ಜೈಲಿನಿಂದ ಎಸ್ಕೇಪ್ ಮಾಡಿಸಿದ ಗೋವಾ ಪೊಲೀಸ್ ಹುಬ್ಬಳ್ಳಿಯಲ್ಲಿ ಬಂಧನ