ETV Bharat / state

402 ಪಿಎಸ್ಐ ನೇಮಕಾತಿ ಅಂತಿಮ ಫಲಿತಾಂಶ ಪ್ರಕಟಿಸಿದ ಕೆಇಎ

402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ.

kea
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ETV Bharat)
author img

By ETV Bharat Karnataka Team

Published : 6 hours ago

ಬೆಂಗಳೂರು: 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ತನ್ನ ವೆಬ್​ಸೈಟ್​​ನಲ್ಲಿ ಪ್ರಕಟಿಸಿದೆ.

ಅಕ್ಟೋಬರ್ 3ರಂದು ನಡೆದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಅಂತಿಮವಾಗಿ ಪಡೆದ ಅಂಕಗಳ ವಿವರಗಳನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯನ್ನು ನೇಮಕಾತಿ ವಿಭಾಗದ ಪೊಲೀಸ್ ಮಹಾನಿರ್ದೇಶಕರಿಗೆ ಹಸ್ತಾಂತರಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ತಾತ್ಕಾಲಿಕ ಅಂಕಪಟ್ಟಿಗೆ ಬಂದ ಎಲ್ಲ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. ಈಗಾಗಲೇ ಅಭ್ಯರ್ಥಿಗಳು ಪಡೆದಿರುವ ಅಂಕಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪತ್ರಿಕೆ-1ಕ್ಕೆ 313 ಹಾಗೂ ಪತ್ರಿಕೆ-2ಕ್ಕೆ 219 ಆಕ್ಷೇಪಣೆಗಳು ಸ್ವೀಕೃತವಾಗಿದ್ದವು. ಪತ್ರಿಕೆ-1ರ ಉತ್ತರ ಪತ್ರಿಕೆಗಳನ್ನು ನಿಯಮ ಪ್ರಕಾರ ಒಂದು ಮತ್ತು ಎರಡನೇ ಮೌಲ್ಯಮಾಪನಕ್ಕೆ ಒಳಪಡಿಸಲಾಗಿದೆ. ಈ ಎರಡೂ ಮೌಲ್ಯಮಾಪನದ ಸಂದರ್ಭದಲ್ಲಿ 8 ಅಥವಾ 8ಕ್ಕಿಂತ ಹೆಚ್ಚಿನ ಅಂಕಗಳ ವ್ಯತ್ಯಾಸ ಕಂಡುಬಂದಲ್ಲಿ ಅಂತಹ ಉತ್ತರ ಪತ್ರಿಕೆಗಳನ್ನು 3ನೇ ಮೌಲ್ಯಮಾಪನ ಮಾಡಿಸಲಾಗಿದೆ. ಆಕ್ಷೇಪಣೆ ಬಂದ ಮೇಲೆ ಇವುಗಳನ್ನು ಮತ್ತೊಮ್ಮೆ ಪರಿಶೀಲಿಸಿದ್ದು, ಈಗಾಗಲೇ ಈ ಅಭ್ಯರ್ಥಿಗಳು ಪಡೆದಿರುವುದಾಗಿ ಪ್ರಕಟಿಸಿರುವ ಅಂಕಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ ಎಂದಿದ್ದಾರೆ.

ಹಾಗೆಯೇ, ಪತ್ರಿಕೆ-2ರ ಒ.ಎಂ.ಆರ್ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಿದ್ದು, ಅಲ್ಲಿಯೂ ವ್ಯತ್ಯಾಸ ಕಂಡುಬಂದಿಲ್ಲ. ಹೀಗಾಗಿ, ಈ ಆಕ್ಷೇಪಣೆಗಳನ್ನು ಪುರಸ್ಕರಿಸಲು ಅವಕಾಶ ಇಲ್ಲ ಎಂದು ತೀರ್ಮಾನಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: 2025 ಸಾಲಿನಲ್ಲಿ 19 ಸಾರ್ವತ್ರಿಕ ರಜೆ, 20 ಪರಿಮಿತ ರಜೆ: ಹೀಗಿದೆ ರಜಾ ದಿನಗಳ ಸಂಪೂರ್ಣ ವಿವರ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.