ETV Bharat / state

ಹಾವೇರಿ ಅಪಘಾತ ಪ್ರಕರಣ: ಮೃತರ ಸಂಖ್ಯೆ ಐದಕ್ಕೇರಿಕೆ - ಕುಟುಂಬಸ್ಥರಿಗೆ ಬಸವರಾಜ್ ಬೊಮ್ಮಾಯಿ ಸಾಂತ್ವನ - HAVERI CAR ACCIDENT - HAVERI CAR ACCIDENT

ಹಾವೇರಿ ಕಾರು ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಐದಕ್ಕೇರಿದೆ. ಹೀಗಾಗಿ ಇಂದು ಮೃತರ ಗ್ರಾಮಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Basavaraja bommai
ಕಾರು ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಬಸವರಾಜ್ ಬೊಮ್ಮಾಯಿ ಸಾಂತ್ವನ ಹೇಳಿದ್ದಾರೆ (ETV Bharat)
author img

By ETV Bharat Karnataka Team

Published : Jul 14, 2024, 5:25 PM IST

ಕಾರು ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಬಸವರಾಜ್ ಬೊಮ್ಮಾಯಿ ಸಾಂತ್ವನ ಹೇಳಿದ್ದಾರೆ (ETV Bharat)

ಹಾವೇರಿ: ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ಹತ್ತಿರ ಶನಿವಾರ ಸಂಭವಿಸಿದ ಕಾರು ಡಿಕ್ಕಿ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೇರಿದೆ. ಇದೀಗ ಮೃತರ ಗ್ರಾಮಕ್ಕೆ ತೆರಳಿರುವ ಸಂಸದ ಬಸವರಾಜ್ ಬೊಮ್ಮಾಯಿ ಅವರು ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಶನಿವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಬೇವಿನಮರಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಸ್ಥಳದಲ್ಲಿ ಓರ್ವ ಸಾವನ್ನಪ್ಪಿದರೆ, ಶಿಗ್ಗಾಂವ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಅಸುನೀಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಐವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಕಿಮ್ಸ್‌ನಲ್ಲಿ ಸಹ ಚಿಕಿತ್ಸೆ ಫಲಕಾರಿಯಾಗದೆ ಮತ್ತಿಬ್ಬರು ಸಾವನ್ನಪ್ಪಿದ್ದರು. ಇಂದು ಬೆಳಗ್ಗೆ ಮತ್ತೊಬ್ಬ ಗಾಯಾಳು ಸಾವನ್ನಪ್ಪಿದ್ದರಿಂದ ಮೃತರ ಸಂಖ್ಯೆ ಐದಕ್ಕೇರಿದಂತಾಗಿದೆ.

ಸವಣೂರು ತಾಲೂಕಿನ ಏಳು ಜನ ಸ್ನೇಹಿತರು ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಮತ್ತೊಂದು ವಾಹನವನ್ನು ಓವರ್​ಟೇಕ್ ಮಾಡಲು ಹೋದ ಚಾಲಕನ ನಿಯಂತ್ರಣ ತಪ್ಪಿ ಕಾರು ಬೇವಿನಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು.

ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಅವರು ಇಂದು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳ ಜೊತೆ ಚರ್ಚಿಸಿದರು. ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ನಂತರ ಮೃತರ ಗ್ರಾಮಕ್ಕೆ ತೆರಳಿದ ಬೊಮ್ಮಾಯಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತ ಕುಟುಂಬಸ್ಥರಿಗೆ ವೈಯಕ್ತಿಕವಾಗಿ ಧನಸಹಾಯ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವ ಭರವಸೆ ನೀಡಿದರು. ಸಂಸದ ಬಸವರಾಜ್ ಬೊಮ್ಮಾಯಿ ಸಾಂತ್ವನ ಹೇಳಲು ಮನೆಗೆ ಆಗಮಿಸಿದಾಗ ಮೃತ ಕುಟುಂಬಸ್ಥರ ಹಾಗೂ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.

ಮೃತ ಪೋಷಕರಿಗೆ ಧೈರ್ಯ ತುಂಬಿದ ಸಂಸದ ಬಸವರಾಜ್ ಬೊಮ್ಮಾಯಿ ಈ ರೀತಿಯಾಗಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದರು. ಪೋಷಕರಿಗೆ ನಿಮ್ಮ ಜೊತೆ ನಾನಿರುವುದಾಗಿ ಧೈರ್ಯ ತುಂಬಿದರು.

ಇದನ್ನೂ ಓದಿ : ಶಿಗ್ಗಾವಿ ಭೀಕರ ಅಪಘಾತಕ್ಕೆ ಚಾಲಕನ ಅತಿ ವೇಗವೇ ಕಾರಣ: ಎಎಸ್​​ಪಿ - Haveri Car Accident

ETV Bharat Logo

Copyright © 2025 Ushodaya Enterprises Pvt. Ltd., All Rights Reserved.