ETV Bharat / state

ನಾಗಮಂಗಲ ಗಣೇಶ ಮೆರವಣಿಗೆ ವೇಳೆ ಗಲಾಟೆ: 52 ಜನರ ಬಂಧನ, ಪರಿಸ್ಥಿತಿ ಹತೋಟಿಗೆ- ಸಚಿವ ಪರಮೇಶ್ವರ್ - Nagamangala Clash - NAGAMANGALA CLASH

ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ 52 ಜನರನ್ನು ಬಂಧಿಸಲಾಗಿದೆ. ಸ್ಥಳದಲ್ಲೇ ಪೊಲೀಸ್ ಅಧಿಕಾರಿಗಳು ಬೀಡುಬಿಟ್ಟಿದ್ದು, ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಗೃಹ ಸಚಿವ ಪರಮೇಶ್ವರ್
ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಗಲಾಟೆ ಪ್ರಕರಣ ಕುರಿತು ಸಚಿವ ಪರಮೇಶ್ವರ್ ಪ್ರತಿಕ್ರಿಯೆ (ETV Bharat)
author img

By ETV Bharat Karnataka Team

Published : Sep 12, 2024, 12:04 PM IST

ಗೃಹ ಸಚಿವ ಡಾ.ಜಿ.ಪರಮೇಶ್ವರ್ (ETV Bharat)

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟವಾದಾಗ ಒಬ್ಬರಿಗೊಬ್ಬರು ಘರ್ಷಣೆ ಮಾಡಿಕೊಂಡಿದ್ದಾರೆ. ಆ ನಂತರ ಎಲ್ಲವೂ ಸರಿಹೋಯ್ತು ಅಂತ ವಾಪಸ್ ಹೋಗುವಾಗ, ಕೆಲವರು ವಾಹನಗಳಿಗೆ ಬೆಂಕಿ ಇಟ್ಟರು. ಅಷ್ಟರೊಳಗೆ ಪೊಲೀಸರು ಎಚ್ಚೆತ್ತುಕೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಈ ಘಟನೆ ನಡೆಯಬಾರದಿತ್ತು. ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ಅಂತ್ಯವಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರು, ಐಜಿಪಿ, ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇನೆ. ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗದು. ಇದನ್ನು ಹೆಚ್ಚು ಬೆಳೆಯಲು ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದೂ ಬೇಡ ಎಂದು ಮನವಿ ಮಾಡಿದರು.

52 ಜನ ಅರೆಸ್ಟ್: ಘಟನೆಯಲ್ಲಿ ಹೆಚ್ಚು ಜನರಿಗೆ ಗಾಯಗಳಾಗಿಲ್ಲ. ಗಲಭೆಗೆ ಸಂಬಂಧಿಸಿದಂತೆ ಎರಡು ಗುಂಪಿನ ಒಟ್ಟು 52 ಜನರನ್ನು ಬಂಧಿಸಲಾಗಿದೆ. ಸಿಸಿ ಕ್ಯಾಮರಾದಲ್ಲಿ ಘಟನೆಯ ದೃಶ್ಯಗಳು ಸೆರೆಯಾಗಿವೆ. ಅದನ್ನು ಆಧರಿಸಿ ಕಲ್ಲು ತೂರಿದವರು ಹಾಗು ಬೆಂಕಿ ಹಚ್ಚಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗೂ ಕಲ್ಲೇಟು ಬಿದ್ದಿದ್ದು, ಓರ್ವ ಎಸ್​​ಐ ಗಾಯಗೊಂಡಿದ್ದಾರೆ. ಇದರಲ್ಲಿ ರಾಜಕೀಯ ಪ್ರಚೋದನೆ ಕಾಣುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಘಟನೆಗೆ ಅತಿಯಾದ ಓಲೈಕೆಯೇ ಕಾರಣ ಎಂದಿರುವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಅವರು ಈ ಹಿಂದೆ ಯಾವ ರೀತಿ ಓಲೈಕೆ ಮಾಡುತ್ತಿದ್ದರೋ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.

ಇದರಲ್ಲಿ ರಾಜಕೀಯ ಮಾಡುವುದು ಬೇಡ. ಪೊಲೀಸರಿಗೆ ಬಿಟ್ಟರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಕಾನೂನು ಸಲಹೆ ಕೊಡುವುದಾದರೆ ಸ್ವಾಗತಿಸುತ್ತೇನೆ. ಘಟನೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.

ನಾಗಮಂಗಲದಲ್ಲಿ ಕಳೆದ ರಾತ್ರಿ ಗಣಪತಿ ಮೂರ್ತಿ ಮೆರವಣಿಗೆಯ ವೇಳೆ ಅನ್ಯ ಕೋಮಿನ ಎರಡು ಗುಂಪುಗಳ ನಡಡುವೆ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಪೊಲೀಸರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳು ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಟ್ಟಣದ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೊಷಿಸಲಾಗಿದೆ.

ಇದನ್ನೂ ಓದಿ: ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಅಂಗಡಿ, ವಾಹನಗಳಿಗೆ ಬೆಂಕಿ, ಇಬ್ಬರು ಪೊಲೀಸರಿಗೆ ಗಾಯ - Stone Pelting In Nagamangala

ನಾಗಮಂಗಲ ಪಟ್ಟಣದ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ - Nagamangala Communal Tension

ETV Bharat Logo

Copyright © 2024 Ushodaya Enterprises Pvt. Ltd., All Rights Reserved.