ETV Bharat / state

ಬೆಂಗಳೂರು ದೇಶದ ಶೈಕ್ಷಣಿಕ ರಾಜಧಾನಿಯಾಗಿ ಬೆಳೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ - dcm

ಬೆಂಗಳೂರು ದೇಶದ ಶೈಕ್ಷಣಿಕ ರಾಜಧಾನಿಯಾಗಿ ಬೆಳೆಯುತ್ತಿದೆ ಎಂದು ಡಿಸಿಎಂ ಹೇಳಿದ್ದಾರೆ.

ಬೆಂಗಳೂರು ದೇಶದ ಶೈಕ್ಷಣಿಕ ರಾಜಧಾನಿಯಾಗಿ ಬೆಳೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

author img

By ETV Bharat Karnataka Team

Published : Mar 4, 2024, 7:26 PM IST

Updated : Mar 4, 2024, 7:39 PM IST

ಬೆಂಗಳೂರು: ಭಾರತದ ನಾನಾ ಮೂಲೆಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಬೆಂಗಳೂರಿಗೆ ಬರುತ್ತಿದ್ದಾರೆ. ಬೆಂಗಳೂರು ದೇಶದ ಶೈಕ್ಷಣಿಕ ರಾಜಧಾನಿಯಾಗಿ ಬೆಳೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. 54ನೇ ವಿಶ್ವ ವ್ಯಾಪಾರ ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ನಮ್ಮ ರಾಜ್ಯದಲ್ಲಿ 52 ವಿಶ್ವವಿದ್ಯಾಲಯಗಳು, 234 ಎಂಜಿನಿಯರಿಂಗ್ ಕಾಲೇಜುಗಳು, 55 ಮೆಡಿಕಲ್, 1 ಸಾವಿರಕ್ಕೂ ಹೆಚ್ಚು ಪ್ಯಾರಾ ಮೆಡಿಕಲ್ ಕಾಲೇಜುಗಳಿವೆ. ಈ ಹಿಂದೆ ಸಿಇಟಿ ಪರೀಕ್ಷೆ ಬರೆಯಲು ಇಡೀ ದೇಶದ ಮೂಲೆ, ಮೂಲೆಯಿಂದ ವಿದ್ಯಾರ್ಥಿಗಳು ಬೆಂಗಳೂರಿಗೆ ಬರುತ್ತಿದ್ದರು. ದೇಶದ 4ನೇ ದೊಡ್ಡ ಕೌಶಲ್ಯಧಾರಿತ ಮಾನವ ಸಂಪನ್ಮೂಲ ಹೊಂದಿರುವ ರಾಜ್ಯ ಕರ್ನಾಟಕದಲ್ಲಿದೆ.

ಕಳೆದ ಎರಡು ವರ್ಷಗಳಲ್ಲಿ 27ಸಾವಿರ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. 20ಸಾವಿರಕ್ಕೂ ಹೆಚ್ಚು ಆಟೋಮೋಟಿವ್ ವಿನ್ಯಾಸಕಾರರು, ಚಿಪ್ ತಂತ್ರಜ್ಞರು, 10 ಸಾವಿರ ಇತರ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ ಎಂದು ಹಾರ್ವರ್ಡ್ ಉದ್ಯಮ ಸಮೀಕ್ಷಾಕಾರರೇ ತಿಳಿಸಿದ್ದಾರೆ‌. 1 ಲಕ್ಷಕ್ಕೂ ಹೆಚ್ಚು ಪಿಎಚ್‌ ಡಿ ಪದವೀಧರರನ್ನು ಹೊಂದಿರುವ ರಾಜ್ಯ ನಮ್ಮದಾಗಿದೆ ಎಂದು ಹೇಳಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಿಂದಲೂ ಬೆಂಗಳೂರು ಶೈಕ್ಷಣಿಕವಾಗಿ ಗುರುತಿಸಿಕೊಂಡಿದೆ. ಮೈಸೂರು ಅರಸರು 1909 ರಲ್ಲಿಯೇ ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ಅನೇಕ ವಿದ್ಯಾ ಸಂಸ್ಥೆಗಳ ಸ್ಥಾಪನೆಗೆ ಭೂಮಿ ನೀಡಿದ್ದರು ಎಂದು ನೆನೆದರು. 2023ರಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ 8.4 ರಷ್ಟಿದೆ. ಕರ್ನಾಟಕ ದೇಶದ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡಿದೆ. ಸರ್ಕಾರ, ನಾಗರಿಕ ಸಂಘಟನೆಗಳು, ಉದ್ಯಮಿಗಳು ಸೇರಿಕೊಂಡು ಬೆಂಗಳೂರಿನ ಸಮಸ್ಯೆಗಳ ನಿವಾರಣೆಗೆ ಪಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

ರೋಮ್ ನಗರವನ್ನು ಒಂದೇ ದಿನ ಕಟ್ಟಲಿಲ್ಲ. ಅದೇ ರೀತಿ ಬೆಂಗಳೂರನ್ನು ವಿಶ್ವಮಾನ್ಯ ನಗರವನ್ನಾಗಿ ಹಂತ, ಹಂತವಾಗಿ ನಿರ್ಮಾಣ ಮಾಡಲಾಗುವುದು. ದೇಶದ ಅಭಿವೃದ್ಧಿಗೆ ಕರ್ನಾಟಕ ತನ್ನದೇ ಆದ ಕೊಡುಗೆ ನಮ್ಮ ನಗರ ನೀಡುತ್ತಿದೆ. ಬೆಂಗಳೂರು ಶೈಕ್ಷಣಿಕ, ಆರೋಗ್ಯ ಮತ್ತು ಔದ್ಯೋಗಿಕ ಕೇಂದ್ರವಾಗಿ ಬೆಳೆಯುತ್ತಿದೆ. ಬೆಂಗಳೂರು ತನ್ನದೇ ಆದ ಸಂಸ್ಕೃತಿ ಹೊಂದಿದೆ. ಶೈಕ್ಷಣಿಕ ನಗರವಾಗಿ ಕೂಡ ಬೆಳೆಯುತ್ತಿದೆ. ಬೆಂಗಳೂರು ಕೇವಲ ಐಟಿ ಉದ್ಯಮದ ನಗರವಾಗಿ ಮಾತ್ರ ಬೆಳೆದಿಲ್ಲ. ಅದರ ಆಚೆಗೂ ಬೆಳೆದಿದೆ ಎಂದು ಹೇಳಿದರು.

ಅತ್ಯುತ್ತಮ ಯುವ ಮಾನವ ಸಂಪನ್ಮೂಲ ಬೆಂಗಳೂರಿನಲ್ಲಿದೆ. ಅತ್ಯುತ್ತಮ ಗ್ರಾಹಕ ಮಾರುಕಟ್ಟೆಯೂ ಇದೆ. ಬೆಂಗಳೂರು ಅತ್ಯಂತ ಸುರಕ್ಷಿತವಾದ ನಗರವಾಗಿದೆ. ಅಮೆರಿಕ ಭಯೋತ್ಪಾದಕ ದಾಳಿಯ ನಂತರ ಇಡೀ ಜಗತ್ತೇ ಬೆಂಗಳೂರಿನ ಕಡೆಗೆ ನೋಡುವಂತಾಗಿದೆ. ಕೋಮು ಸಂಘರ್ಷಗಳು ಇಲ್ಲಿಲ್ಲ, ಯಾವುದೇ ಸಂಘರ್ಷಗಳು ನಡೆಯುವುದಿಲ್ಲ ಎಂದರು. ಅತ್ಯಂತ ದೊಡ್ಡ ಹಾಗೂ ಶ್ರೀಮಂತಿಕೆಯ ಇತಿಹಾಸ ನಮ್ಮದಾಗಿದೆ. ಐಟಿ, ಸ್ಟಾರ್ಟ್ ಅಪ್​ಗಳ ಸ್ವರ್ಗ ಕರ್ನಾಟಕವಾಗಿದೆ ನಾವು ಶೇ 60 ರಷ್ಟು ಬಯೋ ಟೆಕ್ನಾಲಜಿಗೆ ಕ್ಷೇತ್ರಕ್ಕೆ ಕೊಡುಗೆ ನೀಡುತ್ತದೆ. ಶೇ40 ರಷ್ಟು ಸಾಫ್ಟ್‌ವೇರ್ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿದ್ದೇವೆ. ನವೋದ್ಯಮ ಸ್ಥಾಪನೆಯಲ್ಲಿ ಜಗತ್ತಿನಲ್ಲಿಯೇ 20 ನೇ ಸ್ಥಾನದಲ್ಲಿ ಇದ್ದೇವೆ ಎಂದು ಹೇಳಿದರು.

ಈ ಹಿಂದೆ ಇಂಧನ ಸಚಿವನಾಗಿದ್ದಾಗ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳದೇ 2,500 ಮೆ.ವ್ಯಾ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಿದ್ದೇನೆ. ಇನ್ನು ಕರ್ನಾಟಕ ಸಿಲ್ಕ್ ಮತ್ತು ಮಿಲ್ಕ್ ಉತ್ಪಾದನೆಯಲ್ಲಿ ಕ್ರಾಂತಿ ಮಾಡಿದೆ. ಕೃಷಿ ಉತ್ಪಾದನೆಯಲ್ಲಿ ಸಾಕಷ್ಟು ಮುಂದುವರೆದಿದೆ. ಅಲಂಕಾರಿಕ ಪುಷ್ಪಗಳು, ತರಕಾರಿಗಳು ಸೇರಿದಂತೆ ಅನೇಕ ಕೃಷಿ ಉತ್ಪನ್ನಗಳನ್ನು ಬೆಂಗಳೂರಿನಿಂದ ಇತರ ದೇಶಗಳಿಗೆ ರಫ್ತಾಗುತ್ತಿದೆ ಇದು ನಮ್ಮ ಹೆಗ್ಗಳಿಕೆಯಾಗಿದೆ ಎಂದು ನುಡಿದರು.

ನಮ್ಮ ಸರ್ಕಾರ ಬೆಂಗಳೂರನ್ನು ಪರಿಸರ, ಶೈಕ್ಷಣಿಕ, ಔದ್ಯೋಗಿಕ ಸ್ನೇಹಿ ನಗರವನ್ನಾಗಿ ನಿರ್ಮಾಣ ಮಾಡುತ್ತಿದೆ. ಪ್ರಮುಖ ಉದ್ಯಮಿಗಳು ನಮ್ಮ ಜೊತೆ ಕೈ ಜೋಡಿಸಿ ಮುನ್ನಡೆಯಬೇಕು. ಎಲ್ಲರೂ ಒಗ್ಗೂಡಿ, ಒಂದಾಗಿ, ಪ್ರಗತಿ ಸಾಧಿಸೋಣ ಎಂದು ಕರೆ ನೀಡಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಎರಡನೇ ಪಟ್ಟಿ ಅದಷ್ಟು‌ ಬೇಗ ಬಿಡುಗಡೆ ಆಗಲಿದೆ: ಬಿ.ಎಸ್. ಯಡಿಯೂರಪ್ಪ

Last Updated : Mar 4, 2024, 7:39 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.