ಬೆಂಗಳೂರು: ನಗರದಲ್ಲಿ ಪಟಾಕಿ ನಿಯಮಾವಳಿ ಉಲ್ಲಂಘಿಸಿದವರ ವಿರುದ್ಧ ಅ.31 ರಿಂದ ನ.1ರ ವರೆಗೆ 56 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪಟಾಕಿ ಮಾರಾಟಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. 1,500ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಈ ಪೈಕಿ 315 ಮಂದಿಗೆ ತಾತ್ಕಾಲಿಕವಾಗಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿತ್ತು. ಆದರೆ, ಪರವಾನಗಿ ಪಡೆಯದ ಕೆಲವರು ರಸ್ತೆ ಬದಿ ಹಾಗೂ ತಳ್ಳುಗಾಡಿಗಳಲ್ಲಿ ಪಟಾಕಿ ಮಾರಾಟ ನಡೆಸುತ್ತಿರುವುದು ಕಂಡುಬಂದಿದೆ. ಅಂತಹವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರಿನ ಈಶಾನ್ಯ ವಿಭಾಗದಲ್ಲಿ 19, ಉತ್ತರ, ಆಗ್ನೇಯ ಹಾಗೂ ವೈಟ್‌ಫೀಲ್ಡ್ ವಿಭಾಗದಲ್ಲಿ ತಲಾ 9, ಪೂರ್ವ ವಿಭಾಗದಲ್ಲಿ 6 ಹಾಗೂ ದಕ್ಷಿಣ ವ್ಯಾಪ್ತಿಯಲ್ಲಿ 4 ಸೇರಿದಂತೆ ಒಟ್ಟು 56 ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಪಟಾಕಿ ಅವಘಡಗಳು: ನಗರದ ಪ್ರಮುಖ ಕಣ್ಣಿನ ಆಸ್ಪತ್ರೆಗಳಲ್ಲಿ 7 ಮಕ್ಕಳು ಚಿಕಿತ್ಸೆಗೆ ದಾಖಲು