ETV Bharat / state

ಬಿಯರ್ ಬಾಟಲ್ ಕಿತ್ತುಕೊಂಡ ಸ್ನೇಹಿತನ ಹತ್ಯೆ ಮಾಡಿದ್ದ 7 ಜನರ ಬಂಧನ - MURDER ACCUSED ARRESTED

ಪಾರ್ಟಿ ವೇಳೆ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಕಾರಣವಾಗಿದ್ದ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ ಪ್ರಕರಣ
ಕೊಲೆಯಾದ ಕುಶಾಲ್ (ETV Bharat)
author img

By ETV Bharat Karnataka Team

Published : 4 hours ago

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಸಾವಿಗೆ ಕಾರಣರಾಗಿದ್ದ 7 ಜನ ಆರೋಪಿಗಳನ್ನು ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕುಶಾಲ್ (24) ಎಂಬಾತನ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿ ಆತನ ಸಾವಿಗೆ ಕಾರಣರಾಗಿದ್ದ ಆರೋಪದಡಿ ಸಾಗರ್, ದಿಲೀಪ್, ಗಂಗಾಧರ್, ವಿಜಯ್, ಮಾದೇಶ್ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಬಂಧಿಸಲಾಗಿದೆ.

ಡಿಸೆಂಬರ್ 31ರಂದು ರಾತ್ರಿ ಕುಶಾಲ್ ಹಾಗೂ ಆರೋಪಿಗಳು ಭುವನೇಶ್ವರಿ ನಗರದ ಗಾಂಧಿ ಬ್ರಿಡ್ಜ್ ಬಳಿ ಮದ್ಯಪಾನ ಮಾಡಿದ್ದರು. ಆ ಸಂದರ್ಭದಲ್ಲಿ ಪಾನಮತ್ತನಾಗಿದ್ದ ಕುಶಾಲ್ ಆರೋಪಿಗಳ ಕೈಯಲ್ಲಿದ್ದ ಬಿಯರ್ ಬಾಟಲ್‌ಗಳನ್ನು ಪದೇ ಪದೆ ಕಿತ್ತುಕೊಳ್ಳುವ ಮೂಲಕ ಕಿರಿಕಿರಿಯುಂಟು ಮಾಡುತ್ತಿದ್ದ.

ಕೊಲೆ ಪ್ರಕರಣ
ಆರೋಪಿಗಳು (ETV Bharat)
ಇದರಿಂದ ಸಿಟ್ಟಿಗೆದ್ದ ಆರೋಪಿಗಳು, ಕುಶಾಲ್‌ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ತದನಂತರ ರಕ್ತದ ಮಡುವಿನಲ್ಲಿದ್ದ ಕುಶಾಲ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಶಾಲ್ ತಾಯಿ ಶಾಂತಮ್ಮ ನೀಡಿದ್ದ ದೂರಿನ ಅನ್ವಯ ಕೆ.ಪಿ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಎಂಟು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಕುಶಾಲ್ ಮೃತಪಟ್ಟಿದ್ದ. ತನಿಖೆ ನಡೆಸಿದ್ದ ಕೆ.ಪಿ ಅಗ್ರಹಾರ ಠಾಣೆ ಪೊಲೀಸರು, ಸದ್ಯ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರ ಸಹಿತ ಒಟ್ಟು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಮಾರಾಮಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಐವರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.