ಬೆಂಗಳೂರು: ಪಾನಮತ್ತರಾಗಿ ವಾಹನ ಚಾಲನೆ ಮಾಡುವವರು ಹಾಗೂ ಅತಿವೇಗದ ಚಾಲನೆ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. 60,903 ವಾಹನ ಚಾಲಕರನ್ನು ತಪಾಸಣೆ ನಡೆಸಿ ಒಟ್ಟೂ 769 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಆರೋಪಿತ ಚಾಲಕರ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸುವಂತೆ ಸಾರಿಗೆ ಇಲಾಖೆಗೆ ಪತ್ರ ಬರೆಯಲಾಗುವುದು. ಅದೇ ರೀತಿ ನಗರದಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದ 241 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 2.41 ಲಕ್ಷ ರೂ ದಂಡ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ವಾರ್ಷಿಕ ಸಂಚಾರ ಉಲ್ಲಂಘನೆ ಪ್ರಕರಣಗಳು, ಅಪಘಾತ ಹಾಗೂ ಮೃತರ ಅಂಕಿ ಅಂಶ ಹೀಗಿದೆ!
ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪಾನಮತ್ತರಾಗಿ ವಾಹನ ಚಲಾಯಿಸುವವರು ಹಾಗೂ ಅತಿವೇಗದ ವಾಹನ ಚಾಲನೆಯ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿಯೂ ಸಂಚಾರ ಪೊಲೀಸ್ ಇಲಾಖೆಯಿಂದ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮೃತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ₹8 ಕೋಟಿ ಮೌಲ್ಯದ ಜಮೀನು ಕಬಳಿಸಲು ಯತ್ನ: ಮೂವರು ಅರೆಸ್ಟ್