ETV Bharat / state

ವಿಶ್ವ ಮಟ್ಟದ ವೃತ್ತಿಪರ ಕೌಶಲ್ಯಗಳ ಸ್ಪರ್ಧೆಗೆ ಆಯ್ಕೆ; ಫ್ರಾನ್ಸ್​ಗೆ ತೆರಳಲಿದ್ದಾರೆ ರಾಜ್ಯದ 9 ವಿದ್ಯಾರ್ಥಿಗಳು - World Level Skills Competition - WORLD LEVEL SKILLS COMPETITION

ಫ್ರಾನ್ಸ್​ನ ಲಿಯೋನ್​ನಲ್ಲಿ ನಡೆಯಲಿರುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ತೆರಳುವ ವಿದ್ಯಾರ್ಥಿಗಳಿಗೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪಾಟೀಲ್​ ಶುಭಕೋರಿ, ರಾಜ್ಯ ಹಾಗೂ ದೇಶಕ್ಕೆ ಹೆಸರು ತರುವಂತೆ ಹುರಿದುಂಬಿಸಿದರು.

9 students from Karnataka for World Level Vocational Skills Competition in France
ವಿಶ್ವ ಮಟ್ಟದ ವೃತ್ತಿಪರ ಕೌಶಲ್ಯಗಳ ಸ್ಪರ್ಧೆಗೆ ರಾಜ್ಯದ 9 ವಿದ್ಯಾರ್ಥಿಗಳು (ETV Bharat)
author img

By ETV Bharat Karnataka Team

Published : Aug 28, 2024, 8:26 PM IST

ಬೆಂಗಳೂರು: ಫ್ರಾನ್ಸ್​ನ ಲಿಯೋನ್‌ನಲ್ಲಿ ನಡೆಯಲಿರುವ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕೌಶಲಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿ (ಕೆಎಸ್​ಡಿಸಿ) ರಾಜ್ಯದ 9 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದೆ. ಫ್ರಾನ್ಸ್​ಗೆ ತೆರಳುವ ಮುನ್ನ ಭೇಟಿಯಾದ ವಿದ್ಯಾರ್ಥಿಗಳಿಗೆ ವಿಧಾನಸೌಧದಲ್ಲಿ ಇಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಶುಭಕೋರಿದರು.

2024 ಸೆಪ್ಟೆಂಬರ್ 10 ರಿಂದ 15ರ ವರೆಗೆ ಫ್ರಾನ್ಸ್​ನ ಲಿಯೋನ್​ನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ವೃತ್ತಿಪರ ಕೌಶಲಗಳ "ಒಲಂಪಿಕ್​" ಎಂದೇ ಬಣ್ಣಿಸಲಾಗುತ್ತದೆ. ಇದು ವಿಭಿನ್ನ ಕೌಶಲ್ಯ ಸ್ಪರ್ಧೆಗಳು ನಡೆಯುವ ವಿಶ್ವದ ಅತಿ ದೊಡ್ದ ಕಾರ್ಯಕ್ರಮವಾಗಿದೆ. 22 ವರ್ಷದ ಒಳಗಿನ ಸುಮಾರು 1000 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು, ತಮ್ಮ ವೃತ್ತಿಪರ ಕೌಶಲ್ಯ ಪ್ರದರ್ಶಿಸಲಿದ್ದಾರೆ.

9 students from Karnataka for World Level Vocational Skills Competition in France
ವಿಶ್ವ ಮಟ್ಟದ ವೃತ್ತಿಪರ ಕೌಶಲ್ಯಗಳ ಸ್ಪರ್ಧೆಗೆ ರಾಜ್ಯದ 9 ವಿದ್ಯಾರ್ಥಿಗಳು (ETV Bharat)

ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿಯು ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಆಶ್ರಯದಲ್ಲಿ ಕರ್ನಾಟಕದ ಕೌಶಲಪೂರ್ಣ ಅಭ್ಯರ್ಥಿಗಳಿಗೆ ತಮ್ಮ ಕೌಶಲಗಳನ್ನು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಿ ಬಹುಮಾನಗಳನ್ನು ಗೆಲ್ಲುವ ಅವಕಾಶಗಳನ್ನು ಕಲ್ಪಿಸಿದೆ.

ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್​, "ಈ ಅವಕಾಶವನ್ನು ಬಳಸಿಕೊಂಡು ನಿಮ್ಮ ಕೌಶಲ್ಯಗಳನ್ನು ಅತ್ಯುತ್ತಮವಾಗಿ ಪ್ರದರ್ಶಿಸಿ ಪ್ರಶಸ್ತಿಗಳನ್ನು ಪಡೆದು ರಾಜ್ಯ ಹಾಗೂ ದೇಶಕ್ಕೆ ಹೆಸರು ತನ್ನಿ" ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ರಾಜ್ಯದ 9 ವಿದ್ಯಾರ್ಥಿಗಳು ರಾಜ್ಯದ ವಿವಿಧ ಭಾಗಗಳಲ್ಲಿ ಐಟಿಐ, ಡಿಪ್ಲೊಮೋ ಹಾಗೂ ಇಂಜಿನಿಯರಿಂಗ್ ಕೋರ್ಸ್​ಗಳನ್ನು ಮಾಡುತ್ತಿದ್ದಾರೆ.

ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಮಂಡಳಿ (ಎನ್​ಎಸ್​ಡಿಸಿ) ಯು ಭಾರತ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ತರಬೇತಿ ನೀಡಿ ವಿಶ್ವ ಕೌಶಲ್ಯ ಸ್ಪರ್ಧೆಗೆ ತಯಾರಿ ಮಾಡುವ ಸ್ಪರ್ಧೆ ಆಯೋಜಿಸುತ್ತಾ ಬಂದಿದೆ. ನವದೆಹಲಿಯಲ್ಲಿ 2024 ಮೇ 15 ರಿಂದ 19ರ ವರೆಗೆ ಆಯೋಜಿಸಿದ್ದ ರಾಷ್ಟಮಟ್ಟದ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ ಎರಡನೇ ಸ್ಥಾನ ಪಡೆದಿತ್ತು. ಕೆಎಸ್‌ಡಿಸಿ ಅಧ್ಯಕ್ಷೆ ಕಾಂತಾ ನಾಯಕ್, ಕರ್ನಾಟಕ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ವಿ. ರಮಣಾ ರೆಡ್ಡಿ, ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ಕನಗವಳ್ಳಿ, ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕರು ವೈ.ಕೆ. ದಿನೇಶ್ ಕುಮಾರ್, ಎನ್‌ಎಸ್‌ಡಿಸಿ ಸಲಹೆಗಾರ ವೇಣುಗೋಪಾಲ್ ಈ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ: ಶುಕ್ರವಾರ ಜವಾಹರಲಾಲ್​ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಣೆ; ಮಕ್ಕಳಿಗೆ ಉಚಿತ ಸ್ಪರ್ಧೆ - National Space Day

ETV Bharat Logo

Copyright © 2025 Ushodaya Enterprises Pvt. Ltd., All Rights Reserved.