ವಿಜಯನಗರ: ಬೀಗರ ಊಟ ಮಾಡಿದ ಬಳಿಕ 96 ಜನರು ವಾಂತಿ, ಭೇದಿಯಿಂದ ಅಸ್ವಸ್ಥರಾದ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಶಿಂಗ್ರಿಹಳ್ಳಿಯಲ್ಲಿ ನಡೆದಿದೆ. ವಿವಾಹ ಸಮಾರಂಭದ ಬಳಿಕ ಶನಿವಾರ ರಾತ್ರಿ ಊಟ ಸೇವಿಸಿ ಮಲಗಿದ್ದವರಲ್ಲಿ ತಡರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥರಾಗಿರುವ 96 ಜನರು ದಾವಣಗೆರೆಯ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ 22 ಮಕ್ಕಳಿದ್ದಾರೆ.
ಆಸ್ಪತ್ರೆಗೆ ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಂಕರನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಎಲ್ಲರ ಆರೋಗ್ಯವೂ ಸ್ಥಿರವಾಗಿದೆ ಎಂದು ಎಂದು ಡಿಹೆಚ್ಒ ಶಂಕರನಾಯ್ಕ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ದೊಡ್ಡಬಳ್ಳಾಪುರ: ಹಾವು ಕಡಿತದಿಂದ 7 ವರ್ಷದ ಬಾಲಕಿ ಸಾವು - snake bite