ETV Bharat / state

'ರಾಜಕೀಯ ಪಕ್ಷಗಳ ವಿರುದ್ಧವೂ ಮಾನಹಾನಿ ಪ್ರಕರಣ': ರಾಜಕಾರಣಿಗಳ ಪ್ರಕರಣಗಳ ಬಗ್ಗೆ 2024ರಲ್ಲಿ ಹೈಕೋರ್ಟ್​ ಆದೇಶಗಳು - HIGH COURT ORDERS IN 2024

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿದ ಆರೋಪದಡಿ ಬಂಧನಕ್ಕೊಳಗಾದ ಎಂಎಲ್​ಸಿ ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ ಸೇರಿದಂತೆ 2024ರಲ್ಲಿ ರಾಜಕಾರಣಿಗಳ ಕುರಿತ ಪ್ರಕರಣಗಳಲ್ಲಿ ನೀಡಿರುವ ಪ್ರಮುಖ ತೀರ್ಪುಗಳ ಸಂಕ್ಷಿಪ್ತ ಮಾಹಿತಿ.

HIGH COURT ORDERS IN 2024  KARNATAKA HIGH COURT  2024ರಲ್ಲಿ ಹೈಕೋರ್ಟ್​ನ ಆದೇಶಗಳು  BENGALURU  YEAR ENDER STORY ON JUDGMENTS
ಹೈಕೋರ್ಟ್ (ETV Bharat)
author img

By ETV Bharat Karnataka Team

Published : 12 hours ago

ಬೆಂಗಳೂರು: ಪ್ರಸಕ್ತ ಕ್ಯಾಲೆಂಡರ್ ವರ್ಷ ಮುಕ್ತಾಯವಾಗುತ್ತಿದ್ದು, 2025ನೇ ವಸಂತಕ್ಕೆ ಪದಾರ್ಪಣೆ ಮಾಡುತ್ತಿದ್ದೇವೆ. 2024ರಲ್ಲಿ ರಾಜಕಾರಣಿಗಳ ಕುರಿತಂತೆ ರಾಜ್ಯ ಹೈಕೋರ್ಟ್ ಹೊರಡಿದ್ದ ಮಹತ್ವದ ಆದೇಶಗಳು ಇಲ್ಲಿವೆ.

ಹೈಕೋರ್ಟ್​ ಆದೇಶಗಳ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ.

  • ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ನಿವೇಶನ ಪಡೆದ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಮುಖ್ಯಮಂತ್ರಿಗೆ ತಮ್ಮ ಪತ್ನಿಯ ಜೀವನದಲ್ಲಿ ಏನು ನಡೆಯುತ್ತಿದೆ ಎಂಬುದರ ಕುರಿತು ಅರಿವಿಲ್ಲದಿರಲು ಸಾಧ್ಯವಿಲ್ಲ ಎಂದು ಹೈಕೋರ್ಟ ಅಭಿಪ್ರಾಯಪಟ್ಟಿತ್ತು.
  • ಕೆ.ಎಸ್​.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು. ಅಲ್ಲದೆ, 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿತ್ತು.
  • ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮಿರಿ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಸಿಬಿಐ ಮತ್ತು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದ ಹೈಕೋರ್ಟ್ ಏಕಸದಸ್ಯ ಪೀಠ.
  • ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಫೋಕ್ಸೋ ಕಾಯಿದೆಯಡಿ ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯಕ್ಕೆ ಖುದ್ದು ಹಾಜರಾತಿಯಿಂದ ವಿನಾಯತಿ ನೀಡಿದ್ದ ಹೈಕೋರ್ಟ್.
  • ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿದ ಆರೋಪದ ಮೇಲೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿತ್ತು. 'ಜನಪ್ರತಿನಿಧಿಗಳಾಗಿ ಆರೋಪಿ, ದೂರುದಾರರ ವರ್ತನೆ ರಾಜ್ಯದ ಜನತೆಯ ದುರದೃಷ್ಟಕರ' ಎಂದು ನ್ಯಾಯಪೀಠ ಹೇಳಿತ್ತು.
  • ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಗಳು ನಿರ್ದೇಶಕಿಯಾಗಿರುವ ಕಂಪನಿ ವಿರುದ್ಧ ತನಿಖೆಗೆ ಆದೇಶಿಸಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಹೈಕೋರ್ಟ್.
  • ಚುನಾವಣೆಗಳಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ವಿರುದ್ಧದ ರದ್ದಾಗಿರುವ ಪ್ರಕರಣಗಳ ಮಾಹಿತಿಯನ್ನೂ ಉಲ್ಲೇಖಿಸಬೇಕು ಎಂದು ಹೈಕೋರ್ಟ್​ ಆದೇಶ.
  • ವ್ಯಕ್ತಿಗಳು ಮಾತ್ರವಲ್ಲದೇ ರಾಜಕೀಯ ಪಕ್ಷಗಳ ವಿರುದ್ಧವೂ ಮಾನಹಾನಿ ಪ್ರಕರಣ ದಾಖಲಿಸಬಹುದು ಎಂದು ಅಭಿಪ್ರಾಯಪಟ್ಟು ಮಹತ್ವದ ಆದೇಶ ನೀಡಿದ್ದ ಹೈಕೋರ್ಟ್​.
  • ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಮತ ಚಲಾವಣೆಗೆ ಧಾರವಾಡ ಪ್ರವೇಶಿಸಲು ಅವಕಾಶ ನೀಡಿದ್ದ ಹೈಕೋರ್ಟ್.
  • ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರರಿಗೆ ಪ್ರಭಾವ ನೀಡಿದ ಆರೋಪದಲ್ಲಿ ನಡ್ಡಾ ವಿರುದ್ಧದ ಎಫ್‌ಐಆರ್ ರದ್ದುಪಡಿಸಿದ ಹೈಕೋರ್ಟ್.
  • ಹಾವೇರಿ ರೈತ ಆತ್ಮಹತ್ಯೆ ಕುರಿತು ಸುಳ್ಳುಸುದ್ದಿ ಹಂಚಿಕೊಂಡ ಆರೋಪದಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ ರದ್ದುಗೊಳಿಸಿದ್ದ ಹೈಕೋರ್ಟ್.
  • ಹಿಂದೂ ಧರ್ಮದ ಕುರಿತ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ದಾಖಲಾದ ಪ್ರಕರಣ ರದ್ದು ಮಾಡಿ ಆದೇಶಿಸಿದ್ದ ಹೈಕೋರ್ಟ್.
  • ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಬಿಜೆಪಿ ಮುಖಂಡ ಯತ್ನಾಳ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ್ದ ಹೈಕೋರ್ಟ್.
  • ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಗೆ ಸ್ಪರ್ಧೆ ಮಾಡಿದ ಆರೋಪದ ಮೇಲೆ ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಣೆ.
  • ಮದುವೆ ಆಹ್ವಾನ ಪತ್ರಿಕೆಯಲ್ಲಿ ನರೇಂದ್ರ ಮೋದಿ ಪರ ಮತಯಾಚನೆ ಆರೋಪದ ಮೇಲೆ ವರನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್.
  • ಹಾಸನದ ಸಂಸದರಾಗಿದ್ದ ಆರೋಪಿ ಪ್ರಜ್ವಲ್ ರೇವಣ್ಣರಿಂದ ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಲಾದ ನಿರೀಕ್ಷಣಾ ಜಾಮೀನಿನ ಮೇಲಿನ ಷರತ್ತುಗಳನ್ನು ಸಡಿಲಿಸಿದ ಹೈಕೋರ್ಟ್.
  • ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಂದ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ವಶಪಡಿಸಿಕೊಂಡಿದ್ದ ಚಿನ್ನಾಭರಣಗಳ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವುದಕ್ಕೆ ತಡೆ ನೀಡಿರುವ ಹೈಕೋರ್ಟ್.
  • ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆಯ ಹಿನ್ನೆಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಗೆ ಮಹಿಳಾ ಆಯೋಗ ಜಾರಿಗೊಳಿಸಿದ್ದ ನೋಟಿಸ್​ಗೆ ಹೈಕೋರ್ಟ್ ತಡೆಯಾಜ್ಞೆ.
  • ರಾಜಕೀಯ ಪಕ್ಷಗಳ ಚುನಾವಣಾಪೂರ್ವ ಭರವಸೆಗಳು ಮತದಾರರನ್ನು ಭ್ರಷ್ಟಗೊಳಿಸಿದಂತಲ್ಲಎಂದು ಅಭಿಪ್ರಾಯಪಟ್ಟು ಸಚಿವ ಜಮೀರ್ ಖಾನ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್.
  • ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗಿದ್ದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧ ಆರೋಪಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್.
  • ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿಗೆ ಸಂಬಂಧ ಕಲ್ಪಿಸಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿತ್ತು.

ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿಯಲ್ಲಿ ಮೃತ ಹೆಣ್ಣು ಮಕ್ಕಳಿಗೂ ಸಮಾನ ಪಾಲು: 2024ರಲ್ಲಿ ಹೈಕೋರ್ಟ್​ನ ಪ್ರಮುಖ ತೀರ್ಪುಗಳು

ಇದನ್ನೂ ಓದಿ: ಮಾಸಿಕ 6 ಲಕ್ಷ ಜೀವನಾಂಶ- ಪತ್ನಿಯ ಬೇಡಿಕೆಗೆ ’ಹೈ’ ಆಕ್ಷೇಪ; ವೈವಾಹಿಕ ಸುಖಭೋಗಕ್ಕೆ ಅಡ್ಡಿಪಡಿಸುವುದು ಕ್ರೌರ್ಯಕ್ಕೆ ಸಮ; ಹೈಕೋರ್ಟ್​ ತೀರ್ಪುಗಳಿವು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.