ETV Bharat / state

ಒಂದು ದಿನವಾದರೂ ನನ್ನನ್ನು ಜೈಲಿಗೆ ಕಳಿಸಲು ಸಿದ್ದರಾಮಯ್ಯ ಪಟಾಲಂ ಸಂಚು: ಹೆಚ್​ಡಿಕೆ - H D Kumaraswamy

ಸಿದ್ದರಾಮಯ್ಯ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Oct 1, 2024, 8:10 PM IST

ಬೆಂಗಳೂರು/ನವದೆಹಲಿ: "ಈ ಹಿಂದೆ ಇದೇ ಸಿದ್ದರಾಮಯ್ಯನವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳುಹಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡಾ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ" ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತನಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನ ಜೈಲಿಗೆ ಕಳುಹಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್​ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗಿದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಎಂದು ಚರ್ಚಿಸಿದ್ದಾರೆ " ಎಂದು ಅವರು ತಿಳಿಸಿದರು.

"ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ" ಎಂದರು.

"ಕಳೆದ ಮೂರ್ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. 80 ಕೋಟಿ ರೂ ಗುಳುಂ ಮಾಡಿರೋ ಪ್ರಕರಣದಲ್ಲಿ ಏನಾಯಿತು? ಎಸ್​ಐಟಿ ಯಾರನ್ನೋ ಬಂಧಿಸಿದ್ದರು. ಯಾರೋ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸಿದಿರಿ. ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡುವುದಕ್ಕೆ ಅವಕಾಶ ಕೇಳಿ ಪತ್ರ ಬರೆದು, ಒಂದು ಖಾಸಗಿ ಚಾನೆಲ್​ಗೆ ಲೀಕ್ ಮಾಡಿರುವ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡಿದ್ದೇನೆ" ಎಂದು ತಿಳಿಸಿದರು.

"ನಾನು ಆ ಪೊಲೀಸ್​ ಅಧಿಕಾರಿಯ ಉದ್ಧಟತನವನ್ನು ಖಂಡಿಸಿದ್ದೆ. ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನುಬಾಹಿರ ಚಟುವಟಿಕೆ ಮಾಡುವವರ ಜೊತೆ ಅವರ ನೇರ ನಂಟಿದೆ. ಸಮಾಜದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ?. ಕ್ರಿಮಿನಲ್ ಪ್ರಕರಣದಲ್ಲಿ ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ" ಎಂದು ಹೇಳಿದರು.

"ಅಧಿಕಾರಿಗಳು ಸಿಎಂ ಬಳಿ ಬಂದು ನೀವು ಕ್ರಿಮಿನಲ್ ಸಿಎಂ ಅಂದ್ರೆ ಏನು ಮಾಡುತ್ತೀರಿ?. ಶನಿವಾರ ಕಚೇರಿ ರಜೆ ಇದ್ದರೂ ಸಹ ಸಹೋದ್ಯೋಗಿಗಳಿಗೆ ಪತ್ರ ಬರೆಯುವ ನೆಲದಲ್ಲಿ ನನ್ನ ಬಗ್ಗೆ ಅಶ್ಲೀಲ ಭಾಷೆ ಬಳಕೆ ಮಾಡಿದ್ದಾರೆ. ಅದು ಕಚೇರಿ ಮೆಮೊ ಅಲ್ಲ, ಅದರಲ್ಲಿ ಸೀಲ್ ಇಲ್ಲ, ಆ ಇಲಾಖೆಯ ಎಂಬ್ಲಂ ಇಲ್ಲ. ಇಂಥ ಅಧಿಕಾರಿಗಳು ಸರ್ಕಾರವನ್ನು ಮೆಚ್ಚಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಾರೆ. ಅದಕ್ಕಾಗಿ ಸಲುವಾಗಿ ಜಾಮೀನು ತೆಗೆದುಕೊಂಡೆ. ಆ ಅಧಿಕಾರಿ ಮೇಲೆಯೂ ಪ್ರಕರಣ ಇದೆ. ಅವರು ಆರೋಪಿ ನಂಬರ್ 2. ಹೈಕೋರ್ಟ್​ನಲ್ಲಿ ತನಿಖೆಗೆ ಸ್ಟೇ ತಗೊಂಡಿದ್ದಾರೆ. ನಾನು ಬರೀ ಜಾಮೀನು ತಗೊಂಡಿದ್ದೇನೆ. ಸ್ಟೇ ತೆಗೆದುಕೊಂಡಿಲ್ಲ" ಎಂದು ಸ್ವಷ್ಟಪಡಿಸಿದರು.

"ಗೃಹ ಸಚಿವ ಡಾ.ಪರಮೇಶ್ವರ್ ಅವರು ಶಬ್ದಪಂಡಿತರು. ನನ್ನ ಹೆಸರು ಉಲ್ಲೇಖಿಸಿಲ್ಲ ಅಂತಾರೆ. ಸಿಎಂ ಮೇಲೂ ಆರೋಪ ಇದೆ, ನಾಳೆ ಬೆಳಗ್ಗೆ ಬಂದು ನಿಮ್ಮ ಅಧಿಕಾರಿ ನಿಮ್ಮನ್ನು ಕ್ರಿಮಿನಲ್ ಮುಖ್ಯಮಂತ್ರಿ ಅಂತಾ ಕರೆದರೆ ಏನು ಮಾಡುತ್ತೀರಿ. ನನ್ನ ವಿರುದ್ಧ ಬರೆದ ಪತ್ರ ಹೇಗೆ ಹಂಚಲಾಯಿತು?. ನನ್ನ ವಿರುದ್ಧ ಸಿಎಂ ಕಚೇರಿಯಿಂದ ಸೋಮವಾರ ರಾತ್ರಿ ಮತ್ತೊಂದು ಪತ್ರ ದಾಖಲೆಗಳು ಹೋಗಿವೆ. ಪತ್ರದಲ್ಲಿ ಉಲ್ಲೇಖಿಸಿರುವ ಕಿಶೋರ್ ಕುಮಾರ್ ಅವರನ್ನು ಇವರು ಎಲ್ಲಿಗೆ ಕರೆಸಿಕೊಂಡಿದ್ದರು" ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮುಡಾ ಸೈಟ್‌ ವಾಪಸ್‌: ರಾಜಕೀಯ ತೇಜೋವಧೆ ಮನಗಂಡು ಪತ್ನಿಯಿಂದ ಸ್ವತಂತ್ರ ತೀರ್ಮಾನ- ಸಿಎಂ - CM Siddaramaiah

ETV Bharat Logo

Copyright © 2024 Ushodaya Enterprises Pvt. Ltd., All Rights Reserved.