ETV Bharat / state

ರಾಜ್ಯದ 14 ಕ್ಷೇತ್ರಗಳ ಪ್ರಮುಖ ಅಭ್ಯರ್ಥಿಗಳ ಮೇಲಿರುವ ಕ್ರಿಮಿನಲ್ ಮೊಕದ್ದಮೆಗಳೇನು? - Criminal Cases

author img

By ETV Bharat Karnataka Team

Published : Apr 6, 2024, 7:09 PM IST

ರಾಜ್ಯದಲ್ಲಿ ಲೋಕಸಭೆ ಚುನಾವಣೆ ರಂಗೇರಿದ್ದು, ರಾಜ್ಯದ 14 ಕ್ಷೇತ್ರಗಳ ಪ್ರಮುಖ ಅಭ್ಯರ್ಥಿಗಳ ಮೇಲಿರುವ ಕ್ರಿಮಿನಲ್ ಮೊಕದ್ದಮೆಗಳು ಯಾವುವು ಎಂಬುದರ ಮಾಹಿತಿ ಇಲ್ಲಿದೆ.

CANDIDATES OF 14 CONSTITUENCIES  CRIMINAL CASE REGISTERED  LOK SABHA ELECTION 2024  BENGALURU
ರಾಜ್ಯದ 14 ಕ್ಷೇತ್ರಗಳ ಪ್ರಮುಖ ಅಭ್ಯರ್ಥಿಗಳ ಮೇಲಿರುವ ಕ್ರಿಮಿನಲ್ ಮೊಕದ್ದಮೆಗಳೇನು?

ಬೆಂಗಳೂರು: ರಾಜ್ಯದಲ್ಲಿ ಲೋಕಸಮರ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಮೊದಲ ಹಂತದ 14 ಲೋಕಸಭೆ ಕ್ಷೇತ್ರಗಳಲ್ಲಿ ಮೈತ್ರಿ ಜೆಡಿಎಸ್-ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಅಖಾಡದಲ್ಲಿರುವ ಪ್ರಮುಖ ಅಭ್ಯರ್ಥಿಗಳ ಮೇಲಿರುವ ಪ್ರಕರಣಗಳೆಷ್ಟು ಎಂಬ ವರದಿ ಇಲ್ಲಿದೆ.‌

ಏ.26ಕ್ಕೆ ರಾಜ್ಯದಲ್ಲಿ ಮೊದಲ ಹಂತದ ಲೋಕಸಮರ ಚುನಾವಣೆ ನಡೆಯಲಿದೆ. 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮಾ.28ರಿಂದ ಆರಂಭವಾಗಿ ಏ.4ರ ವರೆಗೆ ನಡೆದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಒಟ್ಟು 358 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಈ ಪೈಕಿ 333 ಪುರುಷರು ಹಾಗೂ 25 ಮಹಿಳೆಯರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಇದರಲ್ಲಿ ಒಟ್ಟು 211 ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನೋಂದಾಯಿತ ಮಾನ್ಯತೆ ಪಡೆಯದ ವಿವಿಧ ಪಕ್ಷಗಳ ಒಟ್ಟು 161 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಏ.8ರಂದು ನಾಮಪತ್ರ ಹಿಪಡೆಯಲು ಕೊನೆಯ ದಿನವಾಗಿದೆ.

ಏ.26ರಂದು ರಾಜ್ಯದಲ್ಲಿ ಉಡುಪಿ - ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ (ಎಸ್‌ಸಿ) ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳು ಅಖಾಡದಲ್ಲಿ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಕಣಕ್ಕಿಳಿದಿರುವ ಪ್ರಮುಖ ಅಭ್ಯರ್ಥಿಗಳ ವಿರುದ್ಧ ದಾಖಲಾಗಿರುವ ಅಪರಾಧ ಪ್ರಕರಣಗಳೇನು ಎಂಬ ವರದಿ ಇಲ್ಲಿದೆ.

1. ಬೆಂಗಳೂರು ಕೇಂದ್ರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಮೇಲೆ ಎರಡು ಪ್ರಕರಣಗಳಿವೆ. ಕಾನೂನುಬಾಹಿರವಾಗಿ ಗುಂಪುಗೂಡಿರುವುದು, ಸಾರ್ವಜನಿಕರಿಗೆ ಅಡಚಣೆ, ಪರವಾನಿಗೆ ಇಲ್ಲದೆ ಪ್ರತಿಭಟನೆಗೆ ಸಂಬಂಧಿಸಿದಂತೆ ಒಂದು ಎಫ್ಐಆರ್​ ದಾಖಲಾಗಿದೆ. ಇನ್ನು 2014, 2019ರ ಚುನಾವಣೆ ವೇಳೆ ಸಲ್ಲಿಸಿದ ಆಸ್ತಿ ವಿವರದಲ್ಲಿ ಕೆಲ ಚರಾಸ್ತಿ ಮಾಹಿತಿ ಬಹಿರಂಗ ಪಡಿಸಿಲ್ಲ ಎಂದು ಖಾಸಗಿ ದೂರು ದಾಖಲಾಗಿದೆ. ಎರಡೂ ಪ್ರಕರಣಗಳ ಸಂಬಂಧ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ವಿರುದ್ಧ ಸಿಕಂದರಾಬಾದ್​ನಲ್ಲಿ 1 ಪ್ರಕರಣ ದಾಖಲಾಗಿದೆ. ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿದ್ದರ ಸಂಬಂಧ ಪ್ರಕರಣ ದಾಖಲಾಗಿದೆ ಎಂಬ ಬಗ್ಗೆ ಅಫಿಡವಿಟ್​ನಲ್ಲಿ ತಿಳಿಸಿದ್ದಾರೆ.

2. ಬೆಂಗಳೂರು ಉತ್ತರ ಕ್ಷೇತ್ರ: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೀವ್ ಗೌಡ ವಿರುದ್ಧ ಯಾವುದೇ ಪ್ರಕರಣಗಳಿಲ್ಲ ಎಂದು ತಮ್ಮ ಅಫಿಡವಿಟ್​​ನಲ್ಲಿ ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ 4 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಇ.ಡಿ. ದಾಖಲಿಸಿರುವ ಪಿಎಂಎಲ್​ಎ ಕಾಯ್ದೆ ಪ್ರಕರಣ. ಶೆಲ್ ಕಂಪನಿಯೊಂದರಲ್ಲಿ ಹಣ ಹೂಡಿಕೆ ಆರೋಪದಡಿ ಇ.ಡಿ. ಕರಂದ್ಲಾಜೆ ವಿರುದ್ಧ ಕೇಸ್​ ದಾಖಲಿಸಿದೆ. ಉಳಿದಂತೆ ದ್ವೇಷ ಭಾಷಣ, ಬೇರೆ ರಾಜ್ಯದ ವಿರುದ್ಧ ದ್ವೇಷ ಭಾಷಣ, ಮಾನನಷ್ಟ ಪ್ರಕರಣ ಸೇರಿ ಒಟ್ಟು ನಾಲ್ಕು ಮೊಕದ್ದಮೆಗಳು ದಾಖಲಾಗಿವೆ.

3. ಬೆಂಗಳೂರು ಗ್ರಾಮಾಂತರ ಕ್ಷೇತ್ರ: ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಡಾ.ಸಿ.ಎನ್. ಮಂಜುನಾಥ್ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲ. ಇತ್ತ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತಮ್ಮ ವಿರುದ್ಧ 3 ಎಫ್ಐಆರ್ ದಾಖಲಾಗಿರುವುದಾಗಿ ಹೇಳಿಕೊಂಡಿದ್ದಾರೆ. ಈ ಮೂರು ಪ್ರಕರಣಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ, ಮೇಕೆದಾಟು ಪಾದಯಾತ್ರೆ ವೇಳೆ ಎರಡು ಪ್ರಕರಣಗಳು ಸೇರಿವೆ.

4. ಬೆಂಗಳೂರು ದಕ್ಷಿಣ ಕ್ಷೇತ್ರ: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ ಒಟ್ಟು 6 ಪ್ರಕರಣಗಳನ್ನು ಹೊಂದಿದ್ದಾರೆ.‌ ಇದರಲ್ಲಿ ನಿಂದನೆ, ಪ್ರತಿಭಟನೆ, ಕರ್ತವ್ಯಕ್ಕೆ ಅಡ್ಡಿ, ಸಾರ್ಜಜನಿಕ ಆಸ್ತಿ ಹಾನಿಗೆ ಸಂಬಂಧಿಸಿ ಆರು ಪ್ರಕರಣಗಳು ಸೇರಿವೆ.

ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ 3 ಕೇಸ್ ಗಳು ಇವೆ. ಇದರಲ್ಲಿ ದ್ವೇಷ ಭಾಷಣ ಸಂಬಂಧ ಎರಡು ಪ್ರಕರಣ ಕರ್ನಾಟಕದಲ್ಲಿ ದಾಖಲಾಗಿದ್ದರೆ, ದಿಲ್ಲಿಯಲ್ಲಿ ಪ್ರತಿಭಟನೆ ಸಂಬಂಧ ಪ್ರಕರಣ ದಾಖಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ನೀಡಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್​​ನಲ್ಲಿ ತಿಳಿಸಿದ್ದಾರೆ.

5. ಚಾಮರಾಜನಗರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಮೇಲೆ ಯಾವುದೇ ಪ್ರಕರಣಗಳು ಇಲ್ಲ. ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ವಿರುದ್ಧ ಪ್ರಚಾರದ ವೇಳೆ ಮಜ್ಜಿಗೆ ವಿತರಿಸಿದ ಸಂಬಂಧ 1 ಮೊಕದ್ದಮೆ ದಾಖಲಾಗಿದೆ.

6. ಚಿಕ್ಕಬಳ್ಳಾಪುರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಒಂದು ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್. ರಕ್ಷಾ ರಾಮಯ್ಯ ಪ್ರತಿಭಟನೆಗೆ ಸಂಬಂಧಿಸಿದಂತೆ 1 ಪ್ರಕರಣ ಹೊಂದಿದ್ದಾರೆ.

7. ಚಿತ್ರದುರ್ಗ ಕ್ಷೇತ್ರ: ಕಾರಜೋಳ ಅವರಿಗೆ ಯಾವುದೇ ಪ್ರಕರಣ ಇಲ್ಲ. ಅದೇ ರೀತಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ವಿರುದ್ಧವೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಮ್ಮ ಅಫಿಡವಿಟ್​​ನಲ್ಲಿ ತಿಳಿಸಿದ್ದಾರೆ.

8. ದಕ್ಷಿಣ ಕನ್ನಡ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ವಿರುದ್ಧ ಒಂದು ಪ್ರಕರಣ ದಾಖಲಾಗಿದೆ.‌ ನಂಜನಗೂಡಿನಲ್ಲಿ ಪೋಸ್ಟರ್, ಕರಪತ್ರ ಪ್ರಚಾರಕ್ಕೆ ನಿರ್ಬಂಧ ಸಂಬಂಧ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಅವರ ವಿರುದ್ಧ ಮೊಕದ್ದಮೆಯೊಂದು ದಾಖಲಾಗಿದೆ. ಇತ್ತ ಕಾಂಗ್ರೆಸ್ ಅಭ್ಯರ್ಥಿ ಆರ್. ಪದ್ಮರಾಜ್ ತಮ್ಮ ವಿರುದ್ಧ ಯಾವುದೇ ಪ್ರಕರಣ ಹೊಂದಿಲ್ಲ ಎಂದು ತಿಳಿಸಿದ್ದಾರೆ.

9. ಹಾಸನ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧ ಯಾವುದೇ ಪ್ರಕರಣ ಇಲ್ಲ ಎಂದು ಅಫಿಡವಿಟ್​​ನಲ್ಲಿ ತಿಳಿಸಿದ್ದಾರೆ. ಇನ್ನು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿರುದ್ಧ ಬೀಟೆ ಮರಗಳ ಅಕ್ರಮ ಸಾಗಾಟ ಸಂಬಂಧ ಅರಣ್ಯ ಕಾಯ್ದೆಯಡಿ ಪ್ರಕರಣವೊಂದು ದಾಖಲಾಗಿದೆ.

10. ಕೋಲಾರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್ ವಿರುದ್ಧ ಒಂದು ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದೆ ಎಂದು ತಿಳಿಸಿದ್ದಾರೆ. ಇತ್ತ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಸಂಬಂಧ 1 ಪ್ರಕರಣ ಇದೆ ಎಂದು ಬಹಿರಂಗ ಪಡಿಸಿದ್ದಾರೆ.

11. ಮಂಡ್ಯ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮ ವಿರುದ್ಧ 3 ಗಂಭೀರ ಸ್ವರೂಪದ ಪ್ರಕರಣವನ್ನು ಹೊಂದಿದ್ದಾರೆ. ಎರಡು ಅಕ್ರಮ ಗಣಿಗಾರಿಕೆ ಆರೋಪ ಸಂಬಂಧಿತ ಪ್ರಕರಣ ಹಾಗೂ ಡಿನೋಟಿಫಿಕೇಷನ್ ಸಂಬಂಧ ಒಂದು ಪ್ರಕರಣವಾಗಿದೆ. ಇತ್ತ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ತಮ್ಮ ವಿರುದ್ಧ ಯಾವುದೇ ಮೊಕದ್ದಮೆ ಇಲ್ಲ ಎಂದು ಅಫಿಡವಿಟ್​​ನಲ್ಲಿ ತಿಳಿಸಿದ್ದಾರೆ.

12. ಮೈಸೂರು ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಯಧುವೀರ್ ಒಡೆಯರ್ ತಮ್ಮ ವಿರುದ್ಧ ಯಾವುದೇ ಪ್ರಕರಣ ಹೊಂದಿಲ್ಲ.‌ ಇತ್ತ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ವಿರುದ್ಧ 4 ಎಫ್ಐಆರ್​ಗಳು ಇವೆ. ಈ ಪೈಕಿ ಮೂರು ಮಾನನಷ್ಟ ಮೊಕದ್ದಮೆಗಳಾಗಿವೆ.‌

13. ತುಮಕೂರು ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ತಮ್ಮ ವಿರುದ್ಧ ಯಾವುದೇ ಕೇಸುಗಳು ಇಲ್ಲ ಎಂದು ಅಫಿಡವಿಟ್​ನಲ್ಲಿ ತಿಳಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಮ್ಮ ವಿರುದ್ಧ ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆಯಡಿ ಲೋಕಾಯುಕ್ತದಲ್ಲಿ ಪ್ರಕರಣ ಇದೆ ಎಂದು ಅಫಿಡವಿಟ್​​ನಲ್ಲಿ ತಿಳಿಸಿದ್ದಾರೆ.

14. ಉಡುಪಿ-ಚಿಕ್ಕಮಗಳೂರು ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ತಮ್ಮ ವಿರುದ್ಧ ಯಾವುದೇ ಪ್ರಕರಣಗಳನ್ನು ಹೊಂದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ವಿರುದ್ಧವೂ ಯಾವುದೇ ಮೊಕದ್ದಮೆ ದಾಖಲಾಗಿಲ್ಲ ಎಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.

ಓದಿ: ಮೈಸೂರು - ಕೊಡಗು ಲೋಕಸಭಾ ಚುನಾವಣೆ: ಕ್ಷೇತ್ರದಲ್ಲಿ ಬಿಜೆಪಿ - ಕಾಂಗ್ರೆಸ್ ನಡುವೆ ನೇರ ಫೈಟ್ - Lok Sabha Election

ETV Bharat Logo

Copyright © 2024 Ushodaya Enterprises Pvt. Ltd., All Rights Reserved.