ETV Bharat / state

ಚಿಕ್ಕೋಡಿ: ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಹೋಳಿಗೆ ಊಟ ಹಾಕಿಸಿದ ಅಜ್ಜಿ! - GRANDMOTHER HOLIGE MEALS - GRANDMOTHER HOLIGE MEALS

ವೃದ್ಧೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಮುತ್ತೈದೆಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕಿಸಿದ್ದಾರೆ.

ಹೋಳಿಗೆ ಊಟ ಹಾಕಿಸಿದ ಅಜ್ಜಿ
ಹೋಳಿಗೆ ಊಟ ಹಾಕಿಸಿದ ಅಜ್ಜಿ (ETV Bharat)
author img

By ETV Bharat Karnataka Team

Published : Aug 25, 2024, 1:13 PM IST

Updated : Aug 25, 2024, 2:09 PM IST

ಹೋಳಿಗೆ ಊಟ ಹಾಕಿಸಿದ ಅಜ್ಜಿ (ETV Bharat)

ಚಿಕ್ಕೋಡಿ(ಬೆಳಗಾವಿ): ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಅಜ್ಜಿಯೊಬ್ಬರು ಮುತ್ತೈದೆಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕಿಸಿದ ಘಟನೆ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದಿದೆ.

ಹೌದು, ಬೆಳಗಾವಿ ಜಿಲ್ಲೆಯ ಸುಟ್ಟಟ್ಟಿ ಗ್ರಾಮದ ವೃದ್ಧೆ ಅಕ್ಕಾತಾಯಿ ಲಂಗೋಟಿ ಗ್ರಾಮದೇವತೆಯ ದೇವಸ್ಥಾನದಲ್ಲಿ 25 ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮದ ಜೊತೆಗೆ ಹೋಳಿಗೆ ಊಟವನ್ನು ಹಾಕಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳಿತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದಾರೆ.

ಊಟ ಹಾಕಿಸಿದ ವೃದ್ಧೆ ಅಕ್ಕಾತಾಯಿ ಲಂಗೋಟಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆ ಹಣದಿಂದ ನಮಗೆಲ್ಲ, ಬಹಳ ಅನುಕೂಲವಾಗುತ್ತಿದೆ. ನನಗೆ 10 ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿದೆ. ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು. ಈ ಕಾರಣಕ್ಕಾಗಿ ದೇವರಲ್ಲಿ ಪ್ರಾರ್ಥಿಸಿಕೊಂಡು, ಮುತ್ತೈದೆಯರಿಗೆ ಹೋಳಿಗೆ ಊಟ ಹಾಕಿಸಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಅದ್ಧೂರಿ ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಸಿಲಿಕಾನ್ ಸಿಟಿ ಸಜ್ಜು: ಇಸ್ಕಾನ್ ದೇವಾಲಯದಲ್ಲಿ ವಿಶೇಷ ಪೂಜೆ - shri krishna janmashtami

Last Updated : Aug 25, 2024, 2:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.