ETV Bharat / state

ದಾವಣಗೆರೆ: ಪತ್ನಿಯ ಶೀಲ ಶಂಕಿಸಿ ಕೊಲೆ, ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಚಿಕಿತ್ಸೆ ಫಲಿಸದೇ ಸಾವು - HUSBAND SUICIDE - HUSBAND SUICIDE

ಅನೈತಿಕ ಸಂಬಂಧ ಶಂಕಿಸಿ ಪತ್ನಿಯ ಕೊಲೆ ಮಾಡಿ ನಂತರ, ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

husband suicide  immoral relationship  Davanagere
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Aug 3, 2024, 2:50 PM IST

ದಾವಣಗೆರೆ: ಅನೈತಿಕ ಸಂಬಂಧ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿ ಸಾವನ್ನಪ್ಪಿದ್ದಾನೆ. ಶಿಕ್ಷಕಿಯಾಗಿದ್ದ ಪತ್ನಿ ನಾಗಮ್ಮ ಮಲಗಿರುವಾಗಲೇ ಕತ್ತು ಕೊಯ್ದು ಕೊಲೆ ಮಾಡಿದ್ದ ಪತಿ ಸತ್ಯಪ್ಪ ನಂತರ ತಾನು ಆತ್ಮಹತ್ಯೆಗೆ ಯತ್ನಿಸಿದ್ದನು. ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥನಾಗಿದ್ದ ಪತಿ ಸತ್ಯಪ್ಪನನ್ನು ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪತಿ ಸತ್ಯಪ್ಪ ನಿನ್ನೆ (ಶುಕ್ರವಾರ) ಸಾವನ್ನಪ್ಪಿದ್ದಾನೆ.

ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ‌ ಕೊಲೆ ಪ್ರಕರಣ ನಡೆದಿತ್ತು. ಗೌರಿಪುರ ಗ್ರಾಮದ ಶಿಕ್ಷಕಿ ನಾಗಮ್ಮ (58) ಪತಿಯಿಂದಲೇ ಕೊಲೆಯಾದವರು. ಸತ್ಯಪ್ಪ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾಗ ಸಂಬಂಧಿಕರು ಗಮನಿಸಿ ಆಸ್ಪತ್ರೆಗೆ ರವಾನಿಸಿದ್ದರು. ಮೃತ ಶಿಕ್ಷಕಿ ನಾಗಮ್ಮ ಜಗಳೂರು ತಾಲೂಕಿನ ಸಂತೆಮುದ್ದಾಪುರ ಗ್ರಾಮದಲ್ಲಿ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಅನ್ಯ ಪುರುಷನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆಂದು ಶಂಕಿಸಿ ಪತಿ ಸತ್ಯಪ್ಪ ಅನುಮಾನಗೊಂಡು ರಾತ್ರಿ ಮಲಗಿದ್ದ ವೇಳೆ ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದನು. ಅಲ್ಲದೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದನು. ತೀವ್ರ ಅಸ್ವಸ್ಥನಾಗಿದ್ದ ಹಿನ್ನೆಲೆ ಸತ್ಯಪ್ಪನನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.‌ ಚಿಕಿತ್ಸೆ ಫಲಕಾರಿಯಾಗದೆ ಸತ್ಯಪ್ಪ ಮೃತಪಟ್ಟಿದ್ದಾನೆ. ಇಬ್ಬರನ್ನು ಕಳೆದುಕೊಂಡ ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಯಾದಗಿರಿ: ಪಿಎಸ್ಐ ಪರಶುರಾಮ್ ಹೃದಯಾಘಾತದಿಂದ ಸಾವು - PSI died of heart attack

ETV Bharat Logo

Copyright © 2025 Ushodaya Enterprises Pvt. Ltd., All Rights Reserved.