ETV Bharat / state

ದಕ್ಷಿಣ ಕನ್ನಡ: ಸಿಡಿಲು ಬಡಿದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವು - laborer was died by lightning

ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಕಡಬದ ಇಚ್ಲಂಪಾಡಿಯಲ್ಲಿ ನಡೆದಿದೆ.

ಸಿಡಿಲು ಬಡಿದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವು
ಸಿಡಿಲು ಬಡಿದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವು (ETV Bharat)
author img

By ETV Bharat Karnataka Team

Published : May 11, 2024, 9:17 PM IST

ಕಡಬ: ಸಿಡಿಲು ಬಡಿದು ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಚೈನ್‌ಪುರ್ ಗುಲೌರಾ ಮೂಲದ ಶ್ರೀಕಿಶುನ್ ಎಂದು ಗುರುತಿಸಲಾಗಿದೆ. ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನದಿ ಬದಿಯಲ್ಲಿ ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕರು ಇದ್ದ ಶೆಡ್​ಗೆ ಸಿಡಿಲು ಬಡಿದ ವೇಳೆ ಈ ದುರಂತ ಸಂಭವಿಸಿದೆ. ಮತ್ತಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.

ಸಿಡಿಲು ಬಡಿದು ನವ ವಿವಾಹಿತ ಸಾವು: ಇತ್ತೀಚಿಗೆ, ಮಳೆ ಬಂದ ಕಾರಣ ಮನೆ ಮುಂದೆ ಒಣ ಹಾಕಿದ್ದ ಅಡಕೆ ತೆಗೆಯುವ ವೇಳೆ ಸಿಡಿಲು ಬಡಿದು 10 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿತ್ತು. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತರು.

ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿತ್ತು. ಈ ವೇಳೆ, ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಕೆಯನ್ನು ಸೋಮಸುಂದರ್ ಅವರು ತೆಗೆಯುವ ವೇಳೆ ಸಿಡಿಲು ಬಡಿದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದು, 10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.

ಸಿಡಿಲಿಗೆ ಮಹಿಳೆ ಬಲಿ: ಮತ್ತೊಂದೆಡೆ, ಸಿಡಿಲು ಬಡಿದು ರೈತ ಮಹಿಳೆ ಹಾಗೂ ಶ್ವಾನ ಬಲಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸಪೂರ ಗ್ರಾಮದಲ್ಲಿ ಇತ್ತೀಚಿಗೆ ನಡೆದಿದೆ. ಜೋರು ಮಳೆಯಾಗುತ್ತಿದ್ದರಿಂದ ಸ್ವಪ್ನಾ(48) ಮತ್ತು ಅವರು ಸಾಕಿದ್ದ ಶ್ವಾನದೊಂದಿಗೆ ಮರದ ಕೆಳಗೆ ಆಶ್ರಯಪಡೆದಿದ್ದರು. ಈ ವೇಳೆ ಸಿಡಿಲು ಬಡಿದು ಸ್ವಪ್ನಾ ಮತ್ತು ಶ್ವಾನ ಸ್ಥಳದಲ್ಲೇ ಸಾವನ್ನಪ್ಪಿದ್ದರು. ತುಸು ದೂರದಲ್ಲಿದ್ದ ಮಗ ಜ್ಞಾನೇಶ್ವರ್​ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆ ಸಂಬಂಧ ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭಾರಿ ಮಳೆ: ಹೊಸಕೋಟೆಯಲ್ಲಿ ಸಿಡಿಲಿಗೆ ಮಹಿಳೆ, 20ಕ್ಕೂ ಹೆಚ್ಚು ಮೇಕೆಗಳು ಬಲಿ - Hosakote Rain

ETV Bharat Logo

Copyright © 2024 Ushodaya Enterprises Pvt. Ltd., All Rights Reserved.