ETV Bharat / state

ಕಿರುಕುಳ ಆರೋಪ : ಮುಖ್ಯಮಂತ್ರಿ, ಸಾರಿಗೆ ಸಚಿವರಿಗೆ ಪತ್ರ ಬರೆದ ನಿರ್ವಾಹಕಿ

ಕೆಎಸ್‌ಆರ್‌ಟಿಸಿಯಲ್ಲಿ ಮಹಿಳಾ ನಿರ್ವಾಹಕರಿಗೆ ಹಗಲು ರಾತ್ರಿಯೆನ್ನದೆ ಕೆಲಸ ಮಾಡುವಂತೆ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಕೆಎಸ್‌ಆರ್‌ಟಿಸಿ
ಕೆಎಸ್‌ಆರ್‌ಟಿಸಿ
author img

By ETV Bharat Karnataka Team

Published : Mar 17, 2024, 10:27 PM IST

ಬೆಂಗಳೂರು : ಸಮಸ್ಯೆ ಇದೆ ಎಂದು ಹೇಳಿಕೊಂಡರೂ ಹೆಚ್ಚಿನ ಕೆಲಸ ಕೊಟ್ಟು ಅಧಿಕಾರಿಗಳು ಮಹಿಳಾ ನಿರ್ವಾಹಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ದೀಪಾಂಜಲಿ ನಗರದ ಕೆಎಸ್‌ಆರ್‌ಟಿಸಿ ಡಿಪೋ 5ರ ನಿರ್ವಾಹಕಿಯೊಬ್ಬರು ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾರೆ.

ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆಯನ್ನು ಆರಂಭಿಸಲಾಗಿದ್ದು, ಈ ಸಲುವಾಗಿ ಕೆಎಸ್‌ಆರ್‌ಟಿಸಿಯಲ್ಲಿ ಮಹಿಳಾ ನಿರ್ವಾಹಕರಿಗೆ ಹಗಲು ರಾತ್ರಿಯೆನ್ನದೆ ಕೆಲಸ ಮಾಡುವಂತೆ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ತಿಂಗಳ ಋತುಚಕ್ರದ ಸಮಸ್ಯೆ ಇದ್ದರೂ ಡ್ಯೂಟಿ ಮಾಡಿ ಎಂದು ಹೇಳುತ್ತಾರೆ ಎಂದು ದೀಪಾಂಜಲಿ ನಗರದ ಡಿಪೋ 5ರ ನಿರ್ವಾಹಕಿಯೊಬ್ಬರು ಆರೋಪಿಸಿದ್ದಾರೆ.

ಅಧಿಕಾರಿಗಳ ಕಿರುಕುಳದ ಕುರಿತಂತೆ ಸಿಟಿಎಂ ಅವರ ಗಮನಕ್ಕೆ ತಂದರೆ ದರ್ಪದ ಮಾತುಗಳನ್ನಾಡುತ್ತಾರೆ ಎಂದು ಮಹಿಳಾ ಕಂಡಕ್ಟರ್ ಆರೋಪಿಸಿದ್ದು, ಅಧಿಕಾರಿಗಳ ಕಿರುಕುಳದ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಪತ್ರ ಬರೆದಿದ್ದಾರೆ.

ದೀಪಾಂಜಲಿ ನಗರದ ಡಿಪೋ 5ರ 44 ಜನರ ಸಹಿ ಹಾಕಿ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದಾರೆ. ಕಿರುಕುಳದ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರುವ ಹಿನ್ನೆಲೆ ಮಹಿಳಾ ನಿರ್ವಾಹಕಿಗೆ ಡ್ಯೂಟಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಡಿಪೋ ಮ್ಯಾನೇಜರ್ ಬೇಗ ಬಂದರೂ ಲೇಟ್ ಆಗಿ ಡ್ಯೂಟಿ ನೀಡುತ್ತಿದ್ದಾರೆ. ಎಷ್ಟೇ ತಡವಾದರೂ ಕೆಲಸ ಮುಗಿಸಿ ಮನೆಗೆ ಹೋಗುವಂತೆ ಕಿರುಕುಳ ನೀಡುತ್ತಾರೆ. ಡಿಪೋದ ಇತರ ಅಧಿಕಾರಿಗಳ ಗಮನಕ್ಕೂ ತಂದರೂ ಅವರಿಂದಲೂ ಹಿಂಸೆಯಾಗುತ್ತಿದೆ. ಅಧಿಕಾರಿಗಳ ಈ ಟಾರ್ಚರ್‌ಗೆ ರೋಸಿ ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದೇನೆ. ನಾನು ಸೇರಿ 44 ಸಿಬ್ಬಂದಿ ಸಹಿ ಹಾಕಿದ್ದೇವೆ ಎಂದು ವಿಡಿಯೋದಲ್ಲಿ ಮಹಿಳಾ ಕಂಡಕ್ಟರ್ ಹೇಳಿದ್ದಾರೆ.

ಪತ್ರದಲ್ಲಿ ಏನಿದೆ? : ಬೆಳಗ್ಗೆಯಿಂದ ಸಂಜೆವರೆಗೂ ಡ್ಯೂಟಿ ನೀಡದೆ ಸುಮ್ಮನೆ ರಜೆ ಎಂದು ಬರೆಯುತ್ತಿದ್ದಾರೆ. ತಡವಾಗಿ ಗಾಡಿ ಕೊಟ್ಟು ಪೂರ್ತಿ ಕಿಲೋ ಮೀಟರ್ ಮಾಡಬೇಕು ಎಂದು ಹೇಳುತ್ತಾರೆ. ಈ ಕುರಿತು ಡಿಪೋ ಮ್ಯಾನೇಜರ್‌ರನ್ನು ಕೇಳಿದರೆ ಬಾಯಿಗೆ ಬಂದ ಹಾಗೆ ಬೈಯುತ್ತಾರೆ. ಘಟಕದಲ್ಲಿ ಸುಮ್ಮನೆ ಮೂರು ನಾಲ್ಕು ದಿನ ಕೂರಿಸಿಕೊಂಡು ರಜೆ ಅರ್ಜಿ ಬರೆಸಿಕೊಳ್ಳುತ್ತಿದ್ದಾರೆ. ಮಹಿಳೆಯರಿಗೆ ತೊಂದರೆ ಇದೆ ಅಂದರೂ, ತಡವಾಗಿ ಗಾಡಿಕೊಟ್ಟು ಟ್ರಿಪ್ ಪೂರ್ತಿ ಮಾಡಲು ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

44 ಜನರ ಸಹಿ : ಡಿಪೋ 5ರ 44 ಜನರು ಸಹಿ ಹಾಕಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ನೀಡಲಾಗಿದೆ. ಇನ್ನು ಕಂಡಕ್ಟರ್ ಅವರು ಈ ಹಿಂದೆ ಸಿಎಂಗೆ ಜನಸ್ಪಂದನ ಕಾರ್ಯಕ್ರಮದಲ್ಲಿ ದೂರು ನೀಡಿದ್ದರು.

ಇದನ್ನೂ ಓದಿ : ನಮ್ಮ ಮೆಟ್ರೋ ಅಧಿಕಾರಿಯಿಂದ ಮಹಿಳಾ ಸೆಕ್ಯೂರಿಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.