ಬೆಂಗಳೂರು: ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ಅಪರಿಚಿತ ವ್ಯಕ್ತಿಯೋರ್ವ ಹಳಿ ಮೇಲೆ ಜಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗುರುವಾರ ಮಧ್ಯಾಹ್ನ ಸುಮಾರು 2.10 ಗಂಟೆ ವೇಳೆ ಚಲ್ಲಘಟ್ಟದಿಂದ ವೈಟ್ ಫೀಲ್ಡ್ ಕಡೆಗೆ ಹೋಗುವ ಮಾರ್ಗಮಧ್ಯೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ದುರ್ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಯಾರೆಂಬುದು ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಚಂದ್ರಾಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಘಟನೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಕಚೇರಿ ಸೇರಿದಂತೆ ಇನ್ನಿತರ ಕೆಲಸ ಕಾರ್ಯಗಳಿಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ್ದ ಜನರು ಪರಿತಪಿಸಿದರು. ಸೂಕ್ತ ಮಾಹಿತಿ ನೀಡದೆ ಮೆಟ್ರೋ ಸಂಚಾರ ನಿಲ್ಲಿಸಿರುವ ಬಗ್ಗೆ ಮಹಿಳೆಯೊಬ್ಬರು ಅಕ್ರೋಶ ಹೊರಹಾಕಿದರು. ನಡುದಾರಿಯಲ್ಲಿ ಪ್ರಯಾಣಿಕರನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ದೂಷಿಸಿದರು.
ಇದನ್ನೂ ಓದಿ : ಮೆಟ್ರೋ ಸ್ಟೇಷನ್ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಿಂದ ಅಸಭ್ಯ ವರ್ತನೆ ಆರೋಪ; ಮಹಿಳೆಯ ದೂರು