ETV Bharat / state

ಉಡುಪಿ: ಹಣ ವಾಪಸ್​ ನೀಡದ್ದಕ್ಕೆ ಸ್ನೇಹಿತನ ಕೊಲೆ

ಹಣದ ವಿಚಾರಕ್ಕೆ ತನ್ನ ಸ್ನೇಹಿತನನ್ನೇ ಕೊಲೆಗೈದ ಆರೋಪಿ ಬಳಿಕ ಪೊಲೀಸರಿಗೆ ಶರಣಾದ ಘಟನೆ ಉಡುಪಿಯಲ್ಲಿ ನಡೆದಿದೆ.

Inspection by police at the scene
ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ (ETV Bharat)
author img

By ETV Bharat Karnataka Team

Published : Oct 22, 2024, 6:51 PM IST

Updated : Oct 22, 2024, 8:25 PM IST

ಉಡುಪಿ: ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ಕೊಲೆಗೈದ ಘಟನೆ ಇಲ್ಲಿನ ಹಳೆ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಕಟ್ಟಡದ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ನಡೆದಿದೆ.

ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಕೊಲೆಯಾದವರು. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ.

ಎಸ್ಪಿ ಡಾ.ಅರುಣ್ ಕೆ. (ETV Bharat)

ಘಟನಾ ಸ್ಥಳಕ್ಕೆ ಎಸ್ಪಿ ಡಾ.ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ್ದಾರೆ.

ಎಸ್ಪಿ ಡಾ.ಅರುಣ್ ಕೆ. ಈ ಬಗ್ಗೆ ಮಾಹಿತಿ ನೀಡಿ, "ಇಂದು ಬೆಳಗ್ಗೆ ಕೊಲೆ ನಡೆದಿದೆ. ಸದ್ಯಕ್ಕಿರುವ ಮಾಹಿತಿ ಪ್ರಕಾರ ದಿನೇಶ್​ ಶೆಟ್ಟಿ ಎಂಬವರು ಪ್ರಶಾಂತ್​ ಶೆಟ್ಟಿಗೆ ಹಣ ನೀಡಿದ್ದರು. ಅದನ್ನು ವಾಪಸ್​ ಕೇಳಿದ್ದು, ಕೊಡದೇ ಇದ್ದ ಕಾರಣಕ್ಕೆ ಕೊಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಆರೋಪಿ ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಮುಂದೆ ದೂರು ಪಡೆದು, ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ತನಿಖೆಯ ಬಳಿಕ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು" ಎಂದು ತಿಳಿಸಿದರು.

ಇದನ್ನೂ ಓದಿ: ಮೈಸೂರು: ವ್ಯಕ್ತಿಯ ಕತ್ತು ಕೊಯ್ದು ಕೊಲೆ; ವಾಮಾಚಾರದ ಶಂಕೆ

Last Updated : Oct 22, 2024, 8:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.