ETV Bharat / state

ಶಿವಮೊಗ್ಗ: ಇತ್ತೀಚಿಗೆ ಜೈಲಿನಿಂದ ಹೊರಬಂದ ವ್ಯಕ್ತಿಗೆ ಕ್ರಿಕೆಟ್ ಬ್ಯಾಟ್, ವಿಕೆಟ್​ನಿಂದ ಹೊಡೆದು ಹತ್ಯೆ - Murder

ಸೆರೆವಾಸ ಅನುಭವಿಸಿ ಇತ್ತೀಚಿಗಷ್ಟೇ ಹೊರಬಂದಿದ್ದ ವ್ಯಕ್ತಿಯ ತಲೆಗೆ ಕ್ರಿಕೆಟ್ ಬ್ಯಾಟ್, ವಿಕೆಟ್​ನಿಂದ ಹೊಡೆದು ಹತ್ಯೆಗೈದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

hivamogga  Murder Case in Shivamogga  criminal activity  Kote Police
ಸಂಗ್ರಹ ಚಿತ್ರ
author img

By ETV Bharat Karnataka Team

Published : Apr 21, 2024, 1:07 PM IST

ಶಿವಮೊಗ್ಗ: ರಸ್ತೆಯಲ್ಲಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ನಿಂತಿದ್ದ ವ್ಯಕ್ತಿಯ ಮೇಲೆ ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್​ನಿಂದ ಹೊಡೆದು ಕೊಂದು ಹಾಕಿರುವ ಘಟನೆ ಬಾಪೂಜಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಸಮೀಪ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸುರೇಶ್ ಅಲಿಯಾಸ್ ಸೂರಿ(45) ಎಂದು ಗುರುತಿಸಲಾಗಿದೆ.

ಇಬ್ಬರು ದುಷ್ಕರ್ಮಿಗಳು ಹಿಂದಿನಿಂದ ಬಂದು ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಸುರೇಶ್ ರಸ್ತೆಯಲ್ಲಿಯೇ ಬಿದ್ದು ಒದ್ದಾಡಿದ್ದಾರೆ. ತಲೆಯಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಈ ಹಿಂದೆ ಸುರೇಶ್ ಅಪರಾಧ ಕೃತ್ಯದಲ್ಲಿ ಭಾಗಿಯಾದ್ದ ಕಾರಣಕ್ಕೆ ಕಾರಾಗೃಹ ವಾಸ ಅನುಭವಿಸಿ, ಹೊರಬಂದು ಕೇವಲ 20 ದಿನಗಳಾಗಿತ್ತು. ಈ ಕೊಲೆ ಪ್ರಕರಣ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸುರೇಶ್ ಕೊಲೆ ವೈಯಕ್ತಿಕ ದ್ವೇಷದಿಂದ ನಡೆದಿರಬಹುದು ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇತ್ತೀಚಿನ ಹತ್ಯೆ ಪ್ರಕರಣ: ಸ್ನೇಹಿತನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಹೆಣ್ಣೂರು ಠಾಣಾ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಕಿಶೋರ್, ವೆಂಕಟರಾಜು, ನಿರ್ಮಲ್ ಹಾಗೂ ಸಂತೋಷ್ ಎಂಬವರನ್ನು ಬಂಧಿಸಲಾಗಿದೆ. ಏ.18 ರಂದು ರಾತ್ರಿ ಹೆಣ್ಣೂರು ಠಾಣಾ ವ್ಯಾಪ್ತಿಯ ಬೃಂದಾವನ ಲೇಔಟ್​​ನಲ್ಲಿ ಕೀರ್ತಿ (26) ಯುವಕನನ್ನು ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಮದ್ಯದ ಅಮಲಿನಲ್ಲಿ ನಿಂದಿಸಿದ ಸ್ನೇಹಿತನ ಹತ್ಯೆ, ಐವರ ಬಂಧನ - Murder Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.