ETV Bharat / state

ಅಪ್ರಾಪ್ತರ ಬಳಸಿ ಬಡ್ಡಿ ವ್ಯವಹಾರ, ಓರ್ವನಿಗೆ ಚಾಕು ಇರಿತ: ಎಚ್ಚರಿಕೆ ನೀಡಿದ ಕಮಿಷನರ್ - Stabbing Case

ಬಾಲಕನನ್ನು ಮನೆಯಿಂದ ಹೊರಗೆ ಕರೆಸಿಕೊಂಡ ಗುಂಪು ಚಾಕುವಿನಿಂದ ಹಲ್ಲೆ ಮಾಡಿ ಗಾಯಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವರನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿ ಪೊಲೀಸರು ತಿಳಿಸಿದ್ದಾರೆ.

ಹುಬ್ಬಳ್ಳಿ
ಹುಬ್ಬಳ್ಳಿ (ETV Bharat)
author img

By ETV Bharat Karnataka Team

Published : Aug 19, 2024, 6:54 PM IST

ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ (ETV Bharat)

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಅಪ್ರಾಪ್ತನ ಮೇಲೆ ಚಾಕು ಇರಿದ ಘಟನೆ ಹುಬ್ಬಳ್ಳಿಯಲ್ಲಿಂದು ನಡೆದಿದೆ. ನಗರದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೇಲೆ ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್​ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ 10ನೇ ತರಗತಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, "ವಿಚಾರಣೆ ವೇಳೆ ಹತ್ತು ಸಾವಿರ ಸಾಲದ ಬಡ್ಡಿ ವಿಚಾರವಾಗಿ ಹಲ್ಲೆ ನಡೆಸಿರುವ ವಿಚಾರ ತಿಳಿದುಬಂದಿದೆ. ಈ ಮೊದಲು ಹಲ್ಲೆಗೆ ಒಳಗಾದ ಬಾಲಕನನ್ನು 10-12 ಜನರ ಗುಂಪು ಒತ್ತಾಯಪೂರ್ವಕವಾಗಿ ಕರೆದೊಯ್ದು ಮನಬಂದಂತೆ ಥಳಿಸಿ ಬಡ್ಡಿ, ಅಸಲು ಕೊಡುವಂತೆ ಪೀಡಿಸಿದ್ದಾರೆ. ಆಗ ಬಾಲಕನ ಪೋಷಕರನ್ನು ಕರೆಸಿ ವಿಷಯ ಗಮನಕ್ಕೆ ತಂದಿದ್ದಾರೆ. ಅಷ್ಟೇ ಅಲ್ಲದೇ ಬಾಲಕನನ್ನು ಬಿಟ್ಟು ಕಳಿಸಿದ್ದಾರೆ. ಸ್ವಲ್ಪ ಸಮಯದ ಬಳಿಕ ಮತ್ತೆ ಬಾಲಕನನ್ನು ಕರೆಸಿಕೊಂಡು ಚಾಕುವಿನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲ್ಲೆ ನಡೆಸಿದ ಆರೋಪಿ ಹಾಗೂ ಮತ್ತೆ ಕೆಲವರನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ" ಎಂದು ತಿಳಿಸಿದರು.

ಬಡ್ಡಿ ವ್ಯವಹಾರ ಮಾಡುವವರಿಗೆ ಎಚ್ಚರಿಕೆ ನೀಡಿದ ಕಮಿಷನರ್: "ನಗರದಲ್ಲಿ ಅಪ್ರಾಪ್ತರನ್ನು ಗುರಿಯಾಗಿಸಿಕೊಂಡು ಬಡ್ಡಿ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಅಪ್ರಾಪ್ತರನ್ನು ಬಳಸಿಕೊಂಡು, ಅವರಿಂದಲೇ ಬಡ್ಡಿ ಹಣ ವಸೂಲಿ ಮಾಡುತ್ತಿದ್ದಾರೆ. ಪೊಲೀಸ್ ಕಮಿಷನರೇಟ್ ಈ ಕುರಿತು ಗಂಭೀರವಾಗಿ ತೆಗೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಬಡ್ಡಿಕುಳಗಳ ಹೆಡೆಮುರಿ ಕಟ್ಟಲಾಗುವುದು. ಈಗಾಗಲೇ ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ‌‌. ಯಾರೇ ಮೀಟರ್ ಬಡ್ಡಿ, ವಾರದ ಬಡ್ಡಿ, ತಿಂಗಳ ಬಡ್ಡಿ ವ್ಯವಹಾರ ಮಾಡುತ್ತಿದ್ದರೆ ಅವುಗಳನ್ನು ಬಂದ್ ಮಾಡಬೇಕು. ಇಲ್ಲವಾದರೇ ಅಂತವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ರೌಡಿಶೀಟರ್ ಗ್ಯಾಂಗ್​ಗಳ ನಡುವೆ ಹೊಡೆದಾಟ: ಆರೋಪಿ ಬಂಧನ‌ ವೇಳೆ ಪೊಲೀಸ್ ಫೈರಿಂಗ್ - Police Firing

ETV Bharat Logo

Copyright © 2024 Ushodaya Enterprises Pvt. Ltd., All Rights Reserved.