ETV Bharat / state

ತುಮಕೂರು: ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದು ನರ್ಸ್ ದಾರುಣ ಸಾವು - Nurse dies of electrocution

ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಹರಿದುಬಿದ್ದು ನರ್ಸ್ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

Etv Bharat
Etv Bharat
author img

By ETV Bharat Karnataka Team

Published : Mar 23, 2024, 11:03 AM IST

ತುಮಕೂರು: ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟೆ ಮೂಲದ ಲಕ್ಷ್ಮೀ ಬಾಯಿ ಜಾಧವ್ (36) ಮೃತ ನರ್ಸ್.

ಲಕ್ಷ್ಮೀ ಬಾಯಿ ಜಾಧವ್ ಅವರು ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕುಣಿಗಲ್ ಪಟ್ಟಣದಲ್ಲಿ ವಾಸವಿದ್ದ ಲಕ್ಷ್ಮೀಬಾಯಿ, ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮಣ್ ಜೊತೆ ಬೈಕ್​​ನಲ್ಲಿ ಬರುತ್ತಿದ್ದರು. ಈ ವೇಳೆ ದಾರಿಯಲ್ಲಿ ಹಾದು ಹೋಗಿದ್ದ ಕೇಬಲ್ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಲಕ್ಷ್ಮಣ್​ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ಲಕ್ಷ್ಮಣ್​​ ಅವರನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗಷ್ಟೇ ಮೃತ ಲಕ್ಷ್ಮೀಬಾಯಿಗೆ ಮದುವೆ ನಿಶ್ಚಯವಾಗಿತ್ತು. ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಷ್ಯಾದಲ್ಲಿ ಉಗ್ರರ ಅಟ್ಟಹಾಸಕ್ಕೆ 60 ಜನ ಬಲಿ, 145 ಮಂದಿಗೆ ಗಾಯ; ದಾಳಿ ಹೊಣೆ ಹೊತ್ತ ಐಸಿಸ್​ - TERRORIST ATTACK IN RUSSIA

ETV Bharat Logo

Copyright © 2024 Ushodaya Enterprises Pvt. Ltd., All Rights Reserved.