ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಮುಂಜಾನೆ ನಡೆದಿದೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಲೋಕನಾಥ್ ಆರೋಪಿಯಾಗಿದ್ದು, ಮಮತಾ ಕೊಲೆಗೀಡಾದವರು.
ಮಮತಾಗೆ ಚಾಕುವಿನಿಂದ ಇರಿದಿದ್ದನ್ನು ಕಂಡ ತಕ್ಷಣ ಪೊಲೀಸರು ಹಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಮತಾ ಮೃತಪಟ್ಟಿದ್ದಾರೆ. ಪೊಲೀಸರು ಆರೋಪಿ ಕಾನ್ಸ್ಟೇಬಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ ಇಂದು ಮುಂಜಾನೆ ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಬಂದಿದ್ದ ಪತ್ನಿಯ ಮೇಲೆ ಸಿಟ್ಟಿಗೆದ್ದ ಲೋಕನಾಥ್ ಈ ದುಷ್ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬೆಳೆ ಖರೀದಿಸಿ ಹಣ ನೀಡದ ಮಧ್ಯವರ್ತಿಗಳು: ಬಳ್ಳಾರಿಯ ನಾಲ್ವರು ರೈತರಿಂದ ಆತ್ಮಹತ್ಯೆ ಯತ್ನ - Farmers Attempt Suicide