ಶಿವಮೊಗ್ಗ: ರೌಡಿಶೀಟರ್ ಓರ್ವನನ್ನು ಮುಸುಕು ಧರಿಸಿದ್ದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ರಾಜೇಶ್ ಶೆಟ್ಟಿ(39) ಕೊಲೆಯಾದ ರೌಡಿಶೀಟರ್. ರಾಜೇಶ್ ಶೆಟ್ಟಿ 14 ವರ್ಷಗಳ ಹಿಂದೆ ಬಸವನಗುಡಿ ಬಡಾವಣೆಯಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಆರೋಪಿಯಾಗಿದ್ದ. ನಂತರ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ.
ಕೆಲ ದಿನಗಳ ಹಿಂದೆ ಮೃತಪಟ್ಟಿದ್ದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ನಿವಾಸಿ ಪುರುಷೋತ್ತಮ ಎಂಬುವವರ ಅಂತಿಮ ದರ್ಶನಕ್ಕೆ ರಾಜೇಶ್ ಶೆಟ್ಟಿ ತೆರಳಿದ್ದ, ಈ ವೇಳೆ ಅದೇ ಏರಿಯಾದ ವಿನಯ್ ಎಂಬಾತನ ಜೊತೆ ಕಿರಿಕ್ ಮಾಡಿಕೊಂಡಿದ್ದ. ಈ ವಿಚಾರಕ್ಕೆ ಕೊಲೆ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿ, "ಬೊಮ್ಮನಕಟ್ಟೆಯಲ್ಲಿ ರಾಜೇಶ್ ಎಂಬಾತನ ಕೊಲೆಯಾಗಿದೆ. ಆರೋಪಿ ಕುರಿತು ಮಾಹಿತಿ ಲಭ್ಯವಾಗಿದೆ. ಆತನ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿದೆ. ವೈಯಕ್ತಿಕ ಕಾರಣಕ್ಕೆ ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ" ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ಪಾಲಿಕೆಗೆ ಸಚಿವ ಬೈರತಿ ಸುರೇಶ್ ದಿಢೀರ್ ಭೇಟಿ: ಸಮಸ್ಯೆ ಬಗೆಹರಿಸದ ಅಧಿಕಾರಿ ಸಸ್ಪೆಂಡ್!