ETV Bharat / state

ಪಶು ಸಂಗೋಪನೆ ಕ್ಷೇತ್ರಕ್ಕೆ ಬಜೆಟ್​ನಲ್ಲಿ ಮಹತ್ವದ ಕೊಡುಗೆ - State Budget

15ನೇ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಪಶುಸಂಗೋಪನೆ ಇಲಾಖೆಗೆ ಮಹತ್ವದ ಕೊಡುಗೆಗಳನ್ನು ಕೊಟ್ಟಿದ್ದಾರೆ. ಯಾವೆಲ್ಲ ಯೋಜನೆಗಳಿಗೆ ಎಷ್ಟು ಅನುದಾನ ಮೀಸಲಿಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ ಓದಿ.

ರಾಜ್ಯ ಬಜೆಟ್​ 2024  ಸಿಎಂ ಸಿದ್ದರಾಮಯ್ಯ ಬಜೆಟ್​ ಕರ್ನಾಟಕ ಬಜೆಟ್ 2024  State Budget  Karnataka Budget 2024
ಪಶುಸಂಗೋಪನೆ ಕ್ಷೇತ್ರಕ್ಕೆ ಬಜೆಟ್​ನಲ್ಲಿ ಮಹತ್ವದ ಕೊಡುಗೆ
author img

By ETV Bharat Karnataka Team

Published : Feb 16, 2024, 1:39 PM IST

Updated : Feb 16, 2024, 1:46 PM IST

ಬೆಂಗಳೂರು: 15ನೇ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಶುಸಂಗೋಪನೆ ಕ್ಷೇತ್ರಕ್ಕೆ ವಿಶೇಷ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.

  • ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಿ 10,000 ಫಲಾನುಭವಿಗಳಿಗೆ ಸಹಾಯಧನ ನೀಡಲಾಗಿದೆ.
  • ಅಮೃತ ಮಹಲ್, ಹಳ್ಳಿಕಾರ್, ಖಿಲಾರಿ ರಾಸುಗಳನ್ನು ಸಂವರ್ಧನೆ ಮಾಡಿ ಉತ್ಕೃಷ್ಟ ಕರುಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿದೆ.
  • ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6ರ ಬಡ್ಡಿ ಸಹಾಯಧನ.
  • ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ಪಾಲಿಕ್ಲಿನಿಕ್​ಗಳನ್ನು ತಾಲೂಕು ಹಂತಕ್ಕೆ ವಿಸ್ತರಿಸಲು ಕ್ರಮ. ಪ್ರಥಮ ಹಂತದಲ್ಲಿ ರಾಜ್ಯದ ಆಯ್ದ 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್​ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ.ಗಳ ಅನುದಾನ ಮೀಸಲಿಡಲಾಗಿದೆ.
  • ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.
  • ಕುರಿ/ ಮೇಕೆ ಸಾಕಾಣಿಕೆ, ವಲಸೆ ಹೋಗುವ ಕುರಿಗಾರರ ಹಿತರಕ್ಷಣೆಗಾಗಿ ವಲಸೆ ಕುರಿಗಾಹಿಗಳ ಮತ್ತು ಸ್ವತ್ತುಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ ಜಾರಿಗೊಳಿಸಲಾಗುವುದು.
  • ಸಂಚಾರಿ ಕುರಿಗಾಹಿಗಳು ಇರುವ ಜಾಗದಲ್ಲೇ ಅವರ ಕುರಿ, ಮೇಕೆಗಳಿಗೆ ಸರ್ಕಾರಿ ವೈದ್ಯರಿಂದ ಲಸಿಕೆ.
  • ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಲು ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
  • ಸಂಚಾರಿ ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಆದ್ಯತೆ ನೀಡಿ ವಿದ್ಯಾರ್ಥಿ ವೇತನ ವ್ಯವಸ್ಥೆ.
  • ಪುತ್ತೂರಿನಲ್ಲಿ ಪ್ರಸಕ್ತ ವರ್ಷದಿಂದ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭ ಮಾಡುವ ನಿರ್ಧಾರ ಪ್ರಕಟಿಸಲಾಗಿದೆ.

ರೇಷ್ಮೆ ಇಲಾಖೆಗೆ ಹೆಚ್ಚಿನ ಒತ್ತು:

  • ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ ಮೊದಲ ಹಂತದ ಹೈಟೆಕ್​ ಮಾರುಕಟ್ಟೆ ಅಭಿವೃದ್ಧಿಗೆ 150 ಕೋಟಿ ರೂ. ನೀಡಲಾಗಿದ್ದು, ಎರಡನೇ ಹಂತದಲ್ಲಿ 250 ಕೋಟಿ ರೂ. ಗಳಲ್ಲಿ ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿ ಪ್ರಾರಂಭ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಹೇಳಲಾಗಿದೆ.
  • ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹಧನ ನೀಡಲು ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ವಾರ್ಷಿಕ 12 ಕೋಟಿ ರೂ. ಅನದಾನ.
  • ಬೈವೋಲ್ಟ್​ ರೇಷ್ಮೆಗೂಡುಗಳಿಗ ಪ್ರೋತ್ಸಾಹದನವನ್ನು 10 ರೂ.ಗಳಿಂದ 30 ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರಿಂದ ಆದಾಯ ಕೊರತೆಯ ಬಜೆಟ್ ಮಂಡನೆ: 1,05,246 ಕೋಟಿ ರೂ. ಸಾಲದ ಮೊರೆ

Last Updated : Feb 16, 2024, 1:46 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.