ETV Bharat / state

ತುಮಕೂರು : ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಕುಸಿದು ಬಿದ್ದು ಸಾವು, ಮತ್ತೋರ್ವ ಅಸ್ವಸ್ಥ - STUDENT DIED - STUDENT DIED

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟಿದ್ದರೆ, ಮತ್ತೋರ್ವ ವಿದ್ಯಾರ್ಥಿ ಅಸ್ವಸ್ಥಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು
ತುಮಕೂರು
author img

By ETV Bharat Karnataka Team

Published : Mar 26, 2024, 4:58 PM IST

ತುಮಕೂರು : ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಅಲ್ಲದೇ ಮತ್ತೊಂದು ಪರೀಕ್ಷಾ ಕೇಂದ್ರದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದಿದೆ.

ಮೋಹನ್ ಕುಮಾರ್ (16) ಮೃತ ವಿದ್ಯಾರ್ಥಿ. ಮತ್ತೊಬ್ಬ ವಿದ್ಯಾರ್ಥಿ ರೋಹಿತ್ ಎಂಬಾತ ಅಸ್ವಸ್ಥಗೊಂಡಿದ್ದಾನೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕರಾಪುರ ನಿವಾಸಿ ಮೋಹನ್ ಕುಮಾರ್ ತುರುವೇಕೆರೆ ತಾಲೂಕಿನ ಲೋಕಮ್ಮನಹಳ್ಳಿ ಗೇಟ್ ಕಂಚಿರಾಯ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.

ಸೋಮವಾರ ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯ ಸರಸ್ವತಿ ಬಾಲಿಕಾ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ವೇಳೆ ಅಸ್ವಸ್ಥಗೊಂಡಿದ್ದ. ತುರುವೇಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್​ನಲ್ಲಿಯೇ ಮೃತಪಟ್ಟಿದ್ದಾನೆ ಎಂದು ತುರುವೇಕೆರೆ ಬಿಇಒ ಸೋಮಶೇಖರ್ ಅವರು ತಿಳಿಸಿದ್ದಾರೆ.

ರೋಹಿತ್ ಎಂಬ ವಿದ್ಯಾರ್ಥಿ ತುರುವೇಕೆರೆ ಹುಲ್ಲಿಕೆರೆಯ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ದಿಢೀರ್ ಅಸ್ವಸ್ಥಗೊಂಡಿದ್ದ. ಆತನಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ವಾಪಸ್ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು ಬಿಇಒ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ: ಪರೀಕ್ಷೆಯ ದಿನವೇ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಆತ್ಮಹತ್ಯೆ - SSLC STUDENT SUICIDE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.