ಬೀದರ್ : ಇಲ್ಲಿನ ಜೆಸ್ಕಾಂ ಕಚೇರಿಯಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಟಿಸಿ ಸುಟ್ಟು ಭಸ್ಮವಾಗಿವೆ. ನಗರದ ಹೃದಯ ಭಾಗದಲ್ಲಿರುವ ಕೆಇಬಿ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಹೀಗಾಗಿ ಸ್ಟೋರ್ ರೂಮ್ ಹೊತ್ತಿ ಉರಿದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಸ್ಟೋರ್ ಪಕ್ಕದಲ್ಲೇ ನಿಂತಿದ್ದ ಕಚೇರಿ ಸಿಬ್ಬಂದಿಯ ವಾಹನಗಳು ಸುಟ್ಟು ಕರಕಲಾಗಿವೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟರು.
ಹೆಚ್ಚಿನ ಸಹಾಯಕ್ಕೆ ವಾಯುನೆಲೆಯ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಆತಂಕದ ವಾತಾವರಣವಿದೆ. ಸ್ಥಳಕ್ಕೆ ಜೆಸ್ಕಾಂ ಇಇ ರಮೇಶ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.