ETV Bharat / state

ಹೊನ್ನಾವರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅಡಿಗಲ್ಲು: ಬಂಗಾರಮಕ್ಕಿ ವೀರಾಂಜನೇಯ ಸಂಸ್ಥಾನದಿಂದ ಮಹತ್ವದ ನಿರ್ಧಾರ! - super specialty hospital - SUPER SPECIALTY HOSPITAL

ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ಹೊನ್ನಾವರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಮುಂದಾಗಲಾಗಿದೆ.

Super Specialty Hospital
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (ETV Bharat)
author img

By ETV Bharat Karnataka Team

Published : May 10, 2024, 3:33 PM IST

ಶ್ರೀ ಮಾರುತಿ ಗುರೂಜಿ (ETV Bharat)

ಕಾರವಾರ (ಉತ್ತರ ಕನ್ನಡ) : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅನ್ನೋದು ಉತ್ತರಕನ್ನಡ ಜಿಲ್ಲೆಯ ಜನರ ಬಹುದಿನದ ಕನಸು. ಸರ್ಕಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವಂತೆ ಜನರು ನಿರಂತರ ಹೋರಾಟ ಮಾಡುತ್ತಿದ್ದರು. ಆದರೆ, ಅದಕ್ಕಿನ್ನೂ ಸ್ಪಂದನೆ ದೊರಕಿರಲಿಲ್ಲ. ಆದರೆ ಇದೀಗ ಜಿಲ್ಲೆಯ ಪ್ರಸಿದ್ದ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದಲೇ ಜಿಲ್ಲೆಯ ಹೊನ್ನಾವರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಹೊರಟಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ ಕಾರಣ ಹಲವು ಸಾವುಗಳಾಗುತ್ತಿವೆ. ಹೀಗಾಗಿ ಸರ್ಕಾರ ಕಣ್ಣು ತೆರೆಯುವಂತೆ ಜನರು ನಿರಂತರವಾಗಿ ಹೋರಾಟ ಮಾಡುತ್ತಲೆ ಇದ್ದಾರೆ. ಪ್ರತಿ ಚುನಾವಣೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎನ್ನುವುದು ಚುನಾವಣೆಯ ವಿಷಯ ವಸ್ತುವಾದರೂ ಚುನಾವಣೆ ಮುಗಿದ ಮೇಲೆ ಯಾರೂ ಸ್ಪಂದಿಸುತ್ತಿಲ್ಲ.

ಹೀಗಾಗಿ, ಇದೀಗ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದ ಬಂಗಾರಮಕ್ಕಿ ಮಹಾಸಂಸ್ಥಾನದ ಮಾರುತಿ ಗೂರೂಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಜಿಲ್ಲೆಯಲ್ಲಿ ಮಾಡಲು ಮುಂದಾಗಿದ್ದಾರೆ. ಜಿಲ್ಲೆಯ ಹೊನ್ನಾವರದ ಅಳ್ಳಂಕಿ ಗ್ರಾಮದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುತ್ತಿದ್ದು, ಇಂದು ಸುಮಾರು 4 ಎಕರೆ ಜಾಗದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಒಂದೇ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿರಲಿಲ್ಲ. ಜನರು ಏನಾದರು ಅಪಘಾತ ಇನ್ನಿತರ ಗಂಭೀರ ಪರಿಸ್ಥಿತಿಯಲ್ಲಿ ನೆರೆಯ ಉಡುಪಿ, ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಗೋವಾದಲ್ಲಿನ ಆಸ್ಪತ್ರೆಗೆ ತೆರಳಬೇಕು. ರಸ್ತೆ ಮಧ್ಯದಲ್ಲಿಯೇ ಹಲವರು ಪ್ರಾಣ ಬಿಟ್ಟಿದ್ದು ಜನರ ಹೋರಾಟಕ್ಕೆ ಯಾರು ಸ್ಪಂದಿಸಿರಲಿಲ್ಲ. ಸದ್ಯ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ಬೆಂಗಳೂರಿನ ಪ್ರಸಿದ್ದ ಸುದೀಕ್ಷ ಹೆಲ್ತ್ ಕೇರ್ ಪ್ರೈವೇಟ್ ಲಿ. ವತಿಯಿಂದ ಆಸ್ಪತ್ರೆ ನಿರ್ಮಿಸಲು ಮುಂದಾಗಿದೆ.

ಮೊದಲ ಹಂತದಲ್ಲಿ ಸುಮಾರು 150 ಬೆಡ್​ನ ಆಸ್ಪತ್ರೆ ನಿರ್ಮಿಸಿ ನಂತರ ಹಂತ ಹಂತವಾಗಿ ಮೆಡಿಕಲ್ ಕಾಲೇಜು ನಿರ್ಮಿಸುವ ಮೂಲಕ 3 ಸಾವಿರ ಬೆಡ್ ಆಸ್ಪತ್ರೆ, ಏರ್ ಆಂಬ್ಯುಲೆನ್ಸ್ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಆರೋಗ್ಯ ಸೇವೆ ಕೊಡಲು ಚಿಂತನೆ ನಡೆಸಲಾಗಿದೆ ಎಂದು ಬೆಂಗಳೂರಿನ ಸುದೀಕ್ಷಾ ಹೆಲ್ತ್ ಕೇರ್ ಪ್ರೈವೇಟ್ ಲಿ. ನ ಡಾ. ಸುಬ್ರಮ್ಮಣ್ಯ ಶರ್ಮಾ ಹೇಳಿದರು.

ಸದ್ಯ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿದ್ದು, ಒಂದು ವರ್ಷದಲ್ಲಿ ಕಟ್ಟಡ ನಿರ್ಮಾಣ, ಎರಡು ವರ್ಷದಲ್ಲಿ ಆಸ್ಪತ್ರೆ ಸೇವೆ ಪ್ರಾರಂಭಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಇನ್ನು ಜಿಲ್ಲೆಯ ಜನರು ಬೇರೆ ಜಿಲ್ಲೆ, ರಾಜ್ಯಕ್ಕೆ ಆಸ್ಪತ್ರೆಗಾಗಿ ಅಲೆದಾಡುವ ಬದಲು ಜಿಲ್ಲೆಯಲ್ಲಿಯೇ ಎಲ್ಲ ಸೇವೆ ಸಿಗುವ ಮೂಲಕ ಜನರಿಗೆ ಸಹಾಯ ಮಾಡಬೇಕು ಎನ್ನುವುದು ಬಂಗಾರಮಕ್ಕಿ ಮಹಾಸಂಸ್ಥಾನದ ಚಿಂತನೆಯಾಗಿದೆ. ಸರ್ಕಾರ ಇನ್ನೂ ಮಾಡಲಾಗದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಂಗಾರಮಕ್ಕಿ ಮಹಾಸಂಸ್ಥಾನದ ವತಿಯಿಂದ ನಿರ್ಮಾಣ ಮಾಡಲು ಮುಂದಾಗಿರುವುದು ನಿಜಕ್ಕೂ ಮೆಚ್ಚುವಂತದ್ದು.

ಇದನ್ನೂ ಓದಿ : ಕಾರವಾರದ ಜಿಲ್ಲಾಸ್ಪತ್ರೆ ಸೂಪರ್ ಸ್ಪೆಷಾಲಿಟಿಯಾಗಿ ಮೇಲ್ದರ್ಜೆಗೆ : ಸಚಿವ ಶರಣಪ್ರಕಾಶ ಪಾಟೀಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.