ETV Bharat / state

"ಹೋರಾಟ ಮನೋಭಾವನೆ ಬೆಳೆಸಿಕೊಂಡ ಮಹಿಳೆ ಮಾತ್ರ ಮುಂದುವರೆಯಲು ಸಾಧ್ಯ": ಡಾ.ನಾಗಲಕ್ಷ್ಮೀ ಚೌದರಿ - Dr Nagalakshmi Chowdhary

author img

By ETV Bharat Karnataka Team

Published : Aug 28, 2024, 11:05 AM IST

ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆ ಯಾವುದೇ ಭಯ ಇಲ್ಲದೇ ಹೋರಾಟ ಮಾಡಲು ಮುಂದಾಗಬೇಕು. ಹೋರಾಟದ ಮನೋಭಾವನೆ ಬೆಳೆಸಿಕೊಂಡ ಮಹಿಳೆ ಮಾತ್ರ ಮುಂದುವರೆಯಲು ಸಾಧ್ಯ ಎಂದು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಹೇಳಿದ್ದಾರೆ.

ಡಾ.ನಾಗಲಕ್ಷ್ಮೀ ಚೌದರಿ
ಡಾ.ನಾಗಲಕ್ಷ್ಮೀ ಚೌದರಿ (ETV Bharat)
ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಸಂದರ್ಶನ (ETV Bharat)

ಬಾಗಲಕೋಟೆ: "ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆ ಯಾವುದೇ ಭಯ ಇಲ್ಲದೇ ಹೋರಾಟ ಮಾಡಲು ಮುಂದಾಗಬೇಕು" ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

ಅವರು ಬಾಗಲಕೋಟೆ ಜಿಲ್ಲೆಯ ಪ್ರವಾಸ ಸಂದರ್ಭದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡುತ್ತಾ "ಹೋರಾಟದ ಮನೋಭಾವನೆ ಬೆಳೆಸಿಕೊಂಡ ಮಹಿಳೆ ಮಾತ್ರ ಮುಂದುವರೆಯಲು ಸಾಧ್ಯ. ಯಾರೇ ಆಗಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆ ನೇರವಾಗಿ ನನಗೆ ಸಂಪರ್ಕ ಮಾಡಿ. ಪರಿಹಾರ ಕಂಡುಕೊಳ್ಳಬೇಕು" ಎಂದು ತಿಳಿಸಿದರು.

ನಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ "ಮಹಿಳೆಯರಿಗೆ ಹಾಗೂ ಹೆಣ್ಣು ಮಕ್ಕಳಿಗೆ ಭದ್ರತೆ ನೀಡುವ ವ್ಯವಸ್ಥೆಯನ್ನು ಆದ್ಯತೆ ಮೇರೆಗೆ ಮಾಡಬೇಕು. ಮಹಿಳೆಯರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್ಚಿನ ಗಮನ ನೀಡಬೇಕು. ಸ್ಥಳಿಯ ಪೊಲೀಸ್ ಠಾಣೆಗಳಿಗೆ ಮಹಿಳೆಯರು ಭೇಟಿ ನೀಡಿದ ಸಂದರ್ಭದಲ್ಲಿ ನೊಂದ ಜೀವಗಳಿಗೆ ಸರಿಯಾಗಿ ಸ್ಪಂದಿಸುವ ಮೂಲಕ ಮಹಿಳಾ ಸ್ನೇಹಿ ಪೊಲೀಸ್​ ಠಾಣೆಗಳು ಆಗುವಂತಹ ವ್ಯವಸ್ಥೆಯಾಗಬೇಕು" ಎಂದರು.

"ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ ಅಲ್ಪ ಸಂಖ್ಯಾತರ ಮತ್ತು ಖಾಸಗಿ ಮಹಿಳಾ ವಸತಿ ನಿಲಯಯಗಳಲ್ಲಿ ಶಿಷ್ಠಾಚಾರದಂತೆ ಭದ್ರತೆ ಒದಗಿಸುವ ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು. ಸುರಕ್ಷತೆ ಹಿತದೃಷ್ಟಿಯಿಂದ ಸಿಸಿ ಟಿವಿ ಇರುವುದು ಹಾಗೂ ವಾರ್ಡನ್‍ಗಳು ಮೊಬೈಲ್ ಆ್ಯಪ್​ ಬಳಸುವ ಕಾರ್ಯವಾಗಬೇಕು. ಸ್ಟ್ಯಾಂಡರ್ಡ್​​ ಪ್ರೋಟೋಕಾಲ್​ ಅನುಸರಿಸಲೇಬೇಕು. ಇಲ್ಲದಿದ್ದಲ್ಲಿ ಅಂತಹ ವಸತಿ ನಿಲಯಗಳ ಮೇಲೆ ಕ್ರಮ ಕೈಗೊಳ್ಳುವ ಕಾರ್ಯವಾಗಬೇಕು" ಎಂದು ತಿಳಿಸಿದರು.

"ಮಹಿಳೆಯರ ಸಹಾಯಕ್ಕಾಗಿ ಇರುವ ಸಹಾಯವಾಣಿ ಸಂಖ್ಯೆ ಮತ್ತು ಆ್ಯಪ್​ಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು. ಉನ್ನತ ಮಟ್ಟದ ಶಿಕ್ಷಣ ಪಡೆಯುತ್ತಿರುವ ಹೆಣ್ಣು ಮಕ್ಕಳಲ್ಲಿ ಕೂಡ ಇವುಗಳ ಕುರಿತು ಮಾಹಿತಿ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಮೆಡಿಕಲ್​, ಇಂಜಿನಿಯರಿಂಗ್​ ಕಾಲೇಜು, ವಿಶ್ವವಿದ್ಯಾಲಯ, ಶಾಲಾ ಕಾಲೇಜು ಏನೇ ಇರಲಿ ಅಲ್ಲಿ ಹೆಲ್ಪ್​ಲೈನ್​​ ಬಗ್ಗೆ ಜಾಗೃತಿ ಮೂಡಿಸಿ ಸ್ನೇಹಮಯ ವಾತಾವರಣ ಸೃಷ್ಠಿಸಿಸಬೇಕು. ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯ ಇನ್ನೂ ಕಂಡು ಬರುತ್ತಿಲ್ಲ. ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಎಲ್ಲಿ ಶೌಚಾಲಯ ನಿರ್ಮಾಣವಾಗಿಲ್ಲವೋ ಅಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಕಾರ್ಯ ಮಾಡಬೇಕು. ಹೆಣ್ಣು ಮಕ್ಕಳು ಕಾಣೆಯಾದಲ್ಲಿ ಟಾಸ್ಕ್ ಫೋರ್ಸ್ ರಚಿಸಿ ಕಾರ್ಯನಿರ್ವಹಿಸಿರಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್​, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಜಮಖಂಡಿ ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕ ಪ್ರಭಾಕರ ಕೆ.ಇದ್ದರು.

ಇದನ್ನೂ ಓದಿ: ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್ ವಿರುದ್ಧ ದೂರು ದಾಖಲಿಸಿದ ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ - Case Registered Against Ranjith

ETV Bharat Logo

Copyright © 2024 Ushodaya Enterprises Pvt. Ltd., All Rights Reserved.