ಹಾವೇರಿ: ಯುವಕನೊಬ್ಬ ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಟ್ಟಿಹಳ್ಳಿ ತಾಲೂಕಿನ ಕೆಂಚಾಯಿಕೊಪ್ಪ ಗ್ರಾಮದಲ್ಲಿ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನ ಶಾಹಿದುಲ್ಲಾ ಅಂಗರಗಟ್ಟಿ ಎಂದು ಗುರುತಿಸಲಾಗಿದೆ.
ವಿಷಯ ಬಹಿರಂಗವಾಗುತ್ತಿದ್ದಂತೆ ಆರೋಪಿ ಶಾಹಿದುಲ್ಲಾ ಪರಾರಿಯಾಗಿದ್ದಾನೆ. ಮಾಸೂರು ಗ್ರಾಮದಿಂದ ಸಂತೆ ಮಾಡಿಕೊಂಡು ಊರಿಗೆ ತೆರಳುತ್ತಿದ್ದ ಮಹಿಳೆಯಗೆ ಆರೋಪಿ ಡ್ರಾಪ್ ಕೊಡುವ ನೆಪದಲ್ಲಿ, ಬೈಕ್ ಹತ್ತಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.