ETV Bharat / state

ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಯುವಕ ಸಾವು: ಇಬ್ಬರ ಸ್ಥಿತಿ ಗಂಭೀರ - young man died - YOUNG MAN DIED

ಕೆಂಗೇರಿ ಸಮೀಪದ ಕೊಮ್ಮಘಟ್ಟ ಸರ್ಕಲ್​ನಲ್ಲಿನ ಗುಂಡಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗುಂಡಿಗೆ ಬಿದ್ದು ಯುವಕ ಸಾವು
ಗುಂಡಿಗೆ ಬಿದ್ದು ಯುವಕ ಸಾವು
author img

By ETV Bharat Karnataka Team

Published : Apr 15, 2024, 6:31 AM IST

Updated : Apr 15, 2024, 6:23 PM IST

ಬೆಂಗಳೂರು : ಜಲಮಂಡಳಿಯಿಂದ ತೋಡಲಾಗಿದ್ದ ಗುಂಡಿಗೆ ಬಿದ್ದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಕೆಂಗೇರಿ ಸಮೀಪದ ಕೊಮ್ಮಘಟ್ಟ ಸರ್ಕಲ್​ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಸದ್ದಾಂ ಹುಸೇನ್ (20) ಸಾವನ್ನಪ್ಪಿದ ದುದೈರ್ವಿ. ದುರಂತದಲ್ಲಿ ಉಮ್ರಾನ್ ಪಾಷಾ ಹಾಗೂ ಮುಬಾರಕ್ ಪಾಷಾ ಎಂಬುವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆಂಗೇರಿ ಸಂಚಾರ‌ ಪೊಲೀಸರು ತಿಳಿಸಿದ್ದಾರೆ.

ಮೂವರು ಸ್ನೇಹಿತರಾಗಿದ್ದು ಜೆ. ಜೆ ನಗರ ನಿವಾಸಿಗಳಾಗಿದ್ದಾರೆ. ನಿನ್ನೆ ರಾತ್ರಿ ಸುಮಾರು 9 ಗಂಟೆ ವೇಳೆಗೆ ಸದ್ದಾಂ ಹುಸೇನ್ ತನ್ನ ಇನ್ನಿಬ್ಬರನ್ನ‌ ಕೂರಿಸಿಕೊಂಡು ಬೈಕ್​ನಲ್ಲಿ ಬರುವಾಗ ಕೊಮ್ಮಘಟ್ಟ ಬಳಿ ಜಲಮಂಡಳಿಯು ಪೈಪ್ ಕಾಮಗಾರಿಗಾಗಿ ತೋಡಿದ್ದ ಸುಮಾರು 10 ಅಡಿ ಗುಂಡಿಗೆ ಬೈಕ್ ಸಮೇತ ಬಿದ್ದಿದ್ದಾರೆ. ಪರಿಣಾಮ ಸದ್ದಾಂ ಹುಸೇನ್ ಸಾವನ್ನಪ್ಪಿದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಸ್ಥಳೀಯರ ನೆರವಿನಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕೆಂಗೇರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ‌, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೈಪ್​ಲೈನ್ ಕಾಮಗಾರಿ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಯಾವುದೇ ಬ್ಯಾರಿಕೇಡ್ ಅಥವಾ ಸೂಚನಾ ಫಲಕ ಅಳವಡಿಸದಿರುವುದು ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸದ್ಯ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಬಿ. ಹದ್ದಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಒಂದು ವರ್ಷದ‌ ಹಿಂದೆ ಇದೇ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಸಂದರ್ಭದಲ್ಲಿ ಉಲ್ಲಾಳ ಕೆರೆ ಬಳಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದರು.

ಇದನ್ನೂ ಓದಿ : ಚಲಿಸುತ್ತಿದ್ದ ರೈಲಿನಿಂದ ಜಿಗಿದು ಯುವಕ ಸಾವು : ಬಿದ್ದ ರಭಸಕ್ಕೆ ಕಾರಿನ ಗಾಜು ಪುಡಿ - ಪುಡಿ

Last Updated : Apr 15, 2024, 6:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.