ETV Bharat / state

ಶಿವಮೊಗ್ಗ: ವಿದ್ಯುತ್ ಪ್ರವಹಿಸಿ ಯುವಕ ಸಾವು - man died by electrocution - MAN DIED BY ELECTROCUTION

ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

Harish
ಹರೀಶ್ (ETV Bharat)
author img

By ETV Bharat Karnataka Team

Published : May 16, 2024, 9:10 PM IST

ಶಿವಮೊಗ್ಗ: ಸಾಗರ ತಾಲೂಕು ಆನಂದಪುರ ಸಮೀಪದ ಕೊರಲಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಕೊರಲಿಕೊಪ್ಪ ಗ್ರಾಮದ ಹರೀಶ್ (30) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಹರೀಶ್ ಇಂದು ಮಧ್ಯಾಹ್ನ ಮನೆಯಲ್ಲಿ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ನೇಹಿತರೊಂದಿಗೆ ಇಂದು ತಿರುಪತಿ ದೇವಸ್ಥಾನಕ್ಕೆ ಹೊರಟಿದ್ದ ಹರೀಶ್ ಮನೆ ಮುಂದೆ ವಿದ್ಯುತ್ ಗ್ರೌಂಡಿಂಗ್ ಆಗಿರುವುದನ್ನು ಗಮನಿಸದೇ ಬಟ್ಟೆ ಒಣಗಿಸಲು ಹೋಗಿ ಮೃತಪಟ್ಟಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆನಂದಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ತುಮಕೂರು: ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದು ನರ್ಸ್ ದಾರುಣ ಸಾವು - Nurse Dies Of Electrocution

ETV Bharat Logo

Copyright © 2025 Ushodaya Enterprises Pvt. Ltd., All Rights Reserved.