ETV Bharat / state

ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ ಯತ್ನ, ಪ್ರಕರಣ ದಾಖಲು - SUSPECTED RAPE ON A GIRL - SUSPECTED RAPE ON A GIRL

ಬೆಂಗಳೂರಿನಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದ್ದಾರೆ.

WOMAN RAPED IN BENGALURU  SEXUALLY ASSAULTED CASE  BENGALURU  POLICE INVESTIGATION ON RAPE
ಬೆಂಗಳೂರಿನಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿರುವ ಶಂಕೆ (ETV Bharat)
author img

By ETV Bharat Karnataka Team

Published : Aug 18, 2024, 11:35 AM IST

Updated : Aug 18, 2024, 1:11 PM IST

ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್​ ಗುಪ್ತಾ ಹೇಳಿಕೆ (ETV Bharat)

ಬೆಂಗಳೂರು : ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು & ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಮೇಲೆ ಕಾಮುಕರು ಅಟ್ಟಹಾಸ ಮೆರೆದಿರುವ ಘಟನೆ ವರದಿಯಾಗಿದೆ. ತಡರಾತ್ರಿ ಹೆಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಆನೇಕಲ್‌ನಲ್ಲಿರುವ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿ, ಶನಿವಾರ ತಡರಾತ್ರಿ ಸ್ನೇಹಿತರೊಂದಿಗೆ ಕೋರಮಂಗಲದ ಪಬ್‍ವೊಂದಕ್ಕೆ ಬಂದಿದ್ದಳು. ವಾಪಸ್ ಸ್ನೇಹಿತನ ಕಾರಿನಲ್ಲಿ ಹೋಗುವಾಗ ವೇಳೆ ಎಂಪೈರ್ ಜಂಕ್ಷನ್ ಬಳಿ ಕಾರು ಮತ್ತು ಆಟೋ ನಡುವೆ ಅಪಘಾತವಾಗಿದೆ. ಈ ವೇಳೆ ಆಟೋ ಚಾಲಕರೊಂದಿಗೆ ವಾಗ್ವಾದವಾದಾಗ ಯುವತಿ ತಾನೇ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದಳು. ಆದರೆ, ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಭಯದಿಂದ ಯುವತಿ ಸ್ಥಳದಿಂದ ನಡೆದುಕೊಂಡೇ ತೆರಳಿದ್ದಳು.

ಸ್ವಲ್ಪ ದೂರ ಹೋದ ಬಳಿಕ ದ್ವಿಚಕ್ರ ವಾಹನ ಸವಾರನೊಬ್ಬನ ಬಳಿ ಲಿಫ್ಟ್ ಕೇಳಿದ್ದಾಳೆ. ಆತ ಆಕೆಯನ್ನ ಬೊಮ್ಮನಹಳ್ಳಿ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ‌. ಈ ಸಂದರ್ಭದಲ್ಲಿ ಯುವತಿ ತನ್ನ ಮೊಬೈಲ್ ಫೋನ್‌ನಲ್ಲಿ ಎಸ್ಓಎಸ್ ಬಟನ್ ಒತ್ತಿದ್ದರಿಂದ ಆಕೆಯ ತಂದೆ ಹಾಗೂ ಸ್ನೇಹಿತರಿಗೆ ಅಲರ್ಟ್ ಕಾಲ್ ತಲುಪಿದೆ. ಬಳಿಕ ಆಕೆಯ ಸ್ನೇಹಿತರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಅರೆ ಪ್ರಜ್ಞಾವಸ್ಥೆಯಲ್ಲಿ ಯುವತಿ ತನ್ನ ಸ್ನೇಹಿತರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವಾಗಿರುವುದನ್ನ ತಿಳಿದ ಆಸ್ಪತ್ರೆಯ ವೈದ್ಯರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

ಪೊಲೀಸರು ಹೇಳಿದ್ದು ಹೀಗೆ: ತಡರಾತ್ರಿ ಸುಮಾರು 1.30ರ ಸಮಯದಲ್ಲಿ ಘಟನೆ ನಡೆದಿದ್ದು, ಯುವತಿ ದ್ವಿಚಕ್ರ ವಾಹನ ಸವಾರನೊಬ್ಬನಿಂದ ಲಿಫ್ಟ್ ಪಡೆದುಕೊಂಡಿದ್ದಾಳೆ. ಆ ಸಂದರ್ಭದಲ್ಲಿ ಬೈಕ್ ಸವಾರ ಆಕೆಯನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಆಕೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಘಟನೆ ಸಂಬಂಧ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್​ ಗುಪ್ತಾ ತಿಳಿಸಿದ್ದಾರೆ.

ಓದಿ: ತಂದೆ-ತಾಯಿ ಸಾವು, ಮನೆಯಿಂದ ಹೊರ ಹಾಕಿದ ಕುಟುಂಬ: ಬಾಲಕಿ ಮೇಲೆ ಬಸ್​ನಲ್ಲಿ ಐವರಿಂದ ಸಾಮೂಹಿಕ ಅತ್ಯಾಚಾರ - GANG RAPE IN BUS

Last Updated : Aug 18, 2024, 1:11 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.