ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ 7:30ರ ಸುಮಾರಿಗೆ ನಡೆದಿದೆ. ಮನವರ್ತ್ ಕಾವಲಿನಲ್ಲಿರುವ ಅಪಾರ್ಟ್‌ಮೆಂಟ್‌ವೊಂದರ ನಿವಾಸಿ ಸಂಜಿತ್(25) ಆತ್ಮಹತ್ಯೆಗೆ ಯತ್ನಿಸಿರುವ ಯುವಕ. ಗಂಭೀರವಾಗಿ ಗಾಯಗೊಂಡಿರುವ ಸಂಜಿತ್ನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಪದವಿ ವ್ಯಾಸಂಗ ಮಾಡಿರುವ ಸಂಜಿತ್, ಇತ್ತೀಚೆಗೆ ಮಾನಸಿಕ ಖಿನ್ನತೆಗೊಳಗಾಗಿದ್ದು, ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಸೋಮವಾರ ರಾತ್ರಿ 7.30ರ ಸುಮಾರಿಗೆ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಕೆಳಗೆ ಜಿಗಿದಿದ್ದ ಸಂಜಿತ್, ಬಾಳೆಗಿಡಗಳ ಮೇಲೆ ಬಿದ್ದು ಬಳಿಕ ನೆಲಕ್ಕೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾನೆ. ಜೋರಾದ ಶಬ್ದ ಕೇಳಿದ ಅಪಾರ್ಟ್‌ಮೆಂಟ್ ನಿವಾಸಿಗಳು ಹೊರಗೆ ಬಂದು ನೋಡಿದಾಗ, ಸಂಜಿತ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಆತನ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳೀಯರ ಸಹಾಯದಿಂದ ಆತನನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತೀಚೆಗೆ ಸಂಜಿತ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ತಿಳಿದು ಬಂದಿದ್ದು, ಆತನಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ತಲಘಟ್ಟಪುರ ಠಾಣಾ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಪಿಯು ಫಲಿತಾಂಶದ ಕುರಿತು ಗಲಾಟೆ, ಪರಸ್ಪರ ಚಾಕು ಇರಿತ; ಮಗಳು ಸಾವು, ತಾಯಿ ಗಂಭೀರ - Daughter Stabbed To Death
ಇದನ್ನೂ ಓದಿ: ಬಿಹಾರದಲ್ಲಿ ಮದುವೆಗೆ ಹೊರಟ ಆರು ಮಂದಿ ದುರ್ಮರಣ: ಕೇರಳದಲ್ಲಿ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ - 11 people died