ETV Bharat / state

ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು: ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರ ಮರ್ಡರ್​ - hubballi murder - HUBBALLI MURDER

ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಕೊಲೆಯ ಪ್ರಕರಣಗಳಿಂದ ವಾಣಿಜ್ಯ ನಗರಿ ಹುಬ್ಬಳ್ಳಿ ಜನರು ಬೆಚ್ಚಿಬಿದ್ದಿದ್ದರು. ಇದೀಗ ಮತ್ತೊಂದು ಕೊಲೆ ಪ್ರಕರಣ ನಡೆದಿದೆ. ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರ ಆಕಾಶ ಕೊಲೆಯಾಗಿದೆ.

Hubballi Murder
ಕೊಲೆಯಾದ ಯುವಕ (ETV Bharat)
author img

By ETV Bharat Karnataka Team

Published : Jun 22, 2024, 9:04 PM IST

Updated : Jun 22, 2024, 11:02 PM IST

ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಪೊಲೀಸ್​ ಆಯುಕ್ತರು (ETV Bharat)

ಹುಬ್ಬಳ್ಳಿ: ಉತ್ತರ ಕರ್ನಾಟಕದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಯುವಕನನ್ನು ಕೊಲೆ ಮಾಡಿರುವ ಘಟನೆ ಇಲ್ಲಿನ ಲೋಹಿಯಾ ನಗರದಲ್ಲಿ ನಡೆದಿದೆ. ಆಕಾಶ್ ಮಠಪತಿ (26) ಕೊಲೆಯಾದ ಯುವಕ. ಮೃತ ಯುವಕ ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರನಾಗಿದ್ದಾನೆ.

ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಸಿಪಿ ಕುಶಾಲ್ ಚೌಕ್ಸೆ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಸುರೇಶ್ ಯಳ್ಳೂರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶನಿವಾರ ಸಂಜೆ ಕೆಲ ಯುವಕರ ಜೊತೆಗೆ ಲೋಹಿಯಾನಗರದ ಕೆರೆಯ ಬಳಿ ಹೋಗಿದ್ದ ಸಂದರ್ಭದಲ್ಲಿ ತಲೆಗೆ ಏಟಾಗಿ ಅಸ್ವಸ್ಥ ರೀತಿಯಲ್ಲಿ ಬಿದ್ದಿದ್ದ ಎಂದು ತಿಳಿದು ಬಂದಿದೆ. ಅಸ್ವಸ್ಥಗೊಂಡಿದ್ದ ಆಕಾಶನನ್ನು ಸ್ಥಳೀಯರ ಮಾಹಿತಿ ಮೇರೆಗೆ ಕುಟುಂಬಸ್ಥರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ. ಆದರೆ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆ ಸಾವನ್ನಪ್ಪಿದ್ದಾನೆ ಎಂದು ಕಿಮ್ಸ್ ವೈದ್ಯರು ಮಾಹಿತಿ ನೀಡಿದ್ದಾರೆ.

ಘಟನೆ ನೋಡಿದರೆ ಕೊಲೆಯ ಶಂಕೆ ವ್ಯಕ್ತವಾಗಿದೆ. ಆಕಾಶ ತಾಯಿ ಹಾಗೂ ತಂದೆ ಶೇಖರಯ್ಯಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗನನ್ನು ಆತನ ಸ್ನೇಹಿತರೇ ಕೊಲೆ ಮಾಡಿದ್ದಾರೆ ಆರೋಪಿಸಿದ್ದಾರೆ. ಹತ್ಯೆ ಮಾಡಿದವರು ಯಾರು? ಘಟನೆ ಕಾರಣ ಏನು ಎಂಬುದನ್ನು ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ.

ಕಮೀಷನರ್ ಪ್ರತಿಕ್ರಿಯೆ: ''ಪ್ರಾಥಮಿಕ ತನಿಖೆಯಲ್ಲಿ ಆಕಾಶ ಮಠಪತಿ ತಲೆಗೆ ಗಾಯವಾಗಿರೋದು ತಿಳಿದು ಬಂದಿದೆ. ಬೇರೆ ಕಡೆಗೆ ಗಾಯವಾಗಿಲ್ಲ. ಆಕಾಶ ತಂದೆ ಶೇಖರಯ್ಯಾ ಮಠಪತಿ ಅವರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ಆಕಾಶ ಸ್ನೇಹಿತರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ'' ಎಂದು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಹೇಳಿದರು.

ನಗರದಲ್ಲಿ ಕಿಮ್ಸ್​ಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಶೇಖರಯ್ಯಾ ಮಠಪತಿ ಅವರು ಆಕಾಶನ ಆರು ಜನರ ಸ್ನೇಹಿತರ ಮೇಲೆ ಆರೋಪ ಮಾಡಿದ್ದಾರೆ. ನಾವು ಎಲ್ಲಾ ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ. ಆಕಾಶ ತಂದೆ ಯಾರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೋ ಅವರನ್ನು ಕರೆದು ವಿಚಾರಣೆ ನಡೆಸಲಾಗುವುದು'' ಎಂದರು.

ಮೃತನ ತಾಯಿ ಅನ್ನಪೂರ್ಣ ಮಾತನಾಡಿ, ''ನಾವು ನಮ್ಮ‌ ಮಗ ಕೆಲಸಕ್ಕೆ ಹೋಗಿದ್ದಾನೆ ಎಂದು ತಿಳಿದುಕೊಂಡಿದ್ದೆವು. ಆದ್ರೆ ಎರಡು ಗಂಟೆಗೆ ಫೋನ್ ಸ್ವಿಚ್ ಆಫ್ ಆಗಿದೆ. ಗಿರಿನಗರದ ಕಡೆ ಕರೆದುಕೊಂಡು ಹೋಗಿ ತಲೆಗೆ ಹೊಡೆದು‌ ಕೊಲೆ ಮಾಡಿದ್ದಾರೆ‌. ಕೊಲೆ ಹಿಂದೆ ನಾಲ್ಕೈದು ಜನ ಇದ್ದಾರೆ'' ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಸೇರಿದ ದರ್ಶನ್: ವಿಚಾರಣಾಧೀನ ಕೈದಿ ನಂಬರ್ 6106 - Actor Darshan sent to jail

ಇದನ್ನೂ ಓದಿ: ನೇಹಾ, ಅಂಜಲಿ ಹತ್ಯೆ ಮಾದರಿಯಲ್ಲಿ ಯುವತಿಗೆ ಕೊಲೆ ಬೆದರಿಕೆ: ಬೆಳಗಾವಿಯಲ್ಲಿ ಪಾಗಲ್ ಪ್ರೇಮಿ ಅರೆಸ್ಟ್​ - MURDER THREAT TO YOUNG GIRL

Last Updated : Jun 22, 2024, 11:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.