ETV Bharat / state

ಬೀದರ್​: ಟ್ರಕ್ - ಪಿಕ್​ ಅಪ್​ ವಾಹನದ ನಡುವೆ ಮುಖಾಮುಖಿ ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು - ಭೀಕರ ರಸ್ತೆ ಅಪಘಾತ

ಬೀದರ್​ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಂತ್ಯಕ್ರಿಯೆ ಮುಗಿಸಿ ಬರುವಾಗ ಈ ದುರ್ಘಟನೆ ನಡೆದಿದೆ.

Accident
ರಸ್ತೆ ಅಪಘಾತ
author img

By ETV Bharat Karnataka Team

Published : Feb 28, 2024, 10:16 AM IST

ಬೀದರ್ : ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೀದರ್ ನ ಬ್ರೀಮ್ಸ್ (ಜಿಲ್ಲಾಸ್ಪತ್ರೆ)ಗೆ ದಾಖಲಿಸಲಾಗಿದೆ. ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿಜಾವ 4:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಮೃತಪಟ್ಟಿರುವ ಎಲ್ಲಾ ದುರ್ದೈವಿಗಳು ಮಹಾರಾಷ್ಟ್ರದ ಉದಗೀರ್ ಮೂಲದವರು ಎಂದು ತಿಳಿದುಬಂದಿದೆ. ದಸ್ತ್ ಗಿರ್ ದಾವಲಸಾಬ್ (36), ರಸೀದಾ ಶೇಕ್ (41), ಪಿಕ್​ ವಾಹನ​ ಚಾಲಕ ವಲಿ (31) ಅಮಾಮ್ ಶೇಕ್ (51) ಎಂದು ಗುರುತಿಸಲಾಗಿದೆ.

ಮೃತಪಟ್ಟಿದ್ದ ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿ ಉದಗೀರ್ ನಿಂದ ಹೈದರಾಬಾದ್ ಕಡೆ ಹೋಗುತ್ತಿದ್ದ ವೇಳೆ 14 ಜನರಿದ್ದ ಪಿಕ್​ ಅಪ್​ ವಾಹನ ಮತ್ತು ಲಾರಿ ಮಧ್ಯೆ ಅಪಘಾತ ನಡೆದಿದೆ. ಪಿಕ್​ಅಪ್​ ವಾಹನದಲ್ಲಿ 6 ಜನ ಮಹಿಳೆಯರು, 5 ಜನ ಪುರುಷರು ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಚೆನ್ನಬಸವಣ್ಣ ಲಂಗೋಟಿ ಅವರು ಭೇಟಿ ನೀಡಿ ಪರಿಶೀಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.