ಬೆಳಗಾವಿ: ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ನಿಂದನೆ ಮಾಡಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಮೂಲದ ನರಸಿಂಹಮೂರ್ತಿ (38) ಬಂಧಿತ ಆರೋಪಿ. ಸಾಮಾಜಿಕ ಜಾಲತಾಣಗಳಲ್ಲಿ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಹಲವು ಸಚಿವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಸತೀಶ ಜಾರಕಿಹೊಳಿ ಅವರ ಆಪ್ತ ವಿಜಯ ತಳವಾರ ಎಂಬವರು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಮಾರ್ಕೆಟ್ ಠಾಣೆ ಪೊಲೀಸರು ನರಸಿಂಹ ಮೂರ್ತಿ ಅವರನ್ನು ಬುಧವಾರ ತುಮಕೂರಿನಲ್ಲಿ ಬಂಧಿಸಿ ಬೆಳಗಾವಿಗೆ ಕರೆತಂದಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸತೀಶ ಜಾರಕಿಹೊಳಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ನರಸಿಂಹಮೂರ್ತಿ ಅವರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇಲ್ಲದಿದ್ದರೆ ಅವರನ್ನು ನಾವು ಸುಮ್ಮನೇ ಬಿಡುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಮಾರ್ಕೆಟ್ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು.
ಇದನ್ನೂ ಓದಿ: ಗುಣಮಟ್ಟ ಹೊಂದಿಲ್ಲದ ಐವಿ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ