ETV Bharat / state

ಕೊಪ್ಪಳ: ಗುಟ್ಕಾ ತಂದುಕೊಡದ ಕಾರಣಕ್ಕೆ ಬಾಲಕಿಯ ಕೊಲೆ; ಆರೋಪಿ ಬಂಧನ - KOPPAL CRIME - KOPPAL CRIME

ಗುಟ್ಕಾ ತಂದುಕೊಡದ ಕಾರಣಕ್ಕೆ ಬಾಲಕಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ
ಬಂಧಿತ ಆರೋಪಿ (ETV Bharat)
author img

By ETV Bharat Karnataka Team

Published : Jun 16, 2024, 10:15 PM IST

ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ನಡೆದಿದ್ದ ಅನುಶ್ರೀ ಮಡಿವಾಳರ ಎಂಬ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಲಿಂಗಯ್ಯ ನಾಯ್ಕಲ್‌ ಬಂಧಿತ ಆರೋಪಿ. ಗುಟ್ಕಾ ತಂದುಕೊಡದ ಕಾರಣಕ್ಕೆ ಆರೋಪಿ ಬಾಲಿಕಿಯನ್ನು ಕೊಲೆ ಮಾಡಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ಬಹಿರಂಗವಾಗಿದೆ.

ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾತನಾಡಿ, ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ 7ನೇ ವಾರ್ಡ್‌ನ ರಾಘವೇಂದ್ರ ಮಡಿವಾಳರ ಅವರ ಪುತ್ರಿ ಅನುಶ್ರೀ ಏಪ್ರಿಲ್ 19ರಂದು ಮಧ್ಯಾಹ್ನ ಕಾಣೆಯಾಗಿದ್ದಳು. ಎರಡು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಳು. ಬಾಲಕಿಯ ಮನೆ ಪಕ್ಕದಲ್ಲಿಯೇ ವಾಸವಾಗಿದ್ದ ಆರೋಪಿ, ಅನುಶ್ರೀಯಿಂದ ಗುಟ್ಕಾ ತರಿಸಿಕೊಂಡಿದ್ದ. ಅದೇ ದಿನ ಮತ್ತೊಂದು ಸಲ ಗುಟ್ಕಾ ತಂದುಕೊಡುವಂತೆ ಹೇಳಿದಾಗ ಇದಕ್ಕೆ ಅನುಶ್ರೀ ಒಪ್ಪಿರಲಿಲ್ಲ. ಇದೇ ಸಿಟ್ಟಿಗೆ ಆರೋಪಿ ಪಕ್ಕದಲ್ಲಿದ್ದ ಕಟ್ಟಿಗೆಯಿಂದ ಬಾಲಕಿಯ ತಲೆಗೆ ಜೋರಾಗಿ ಹೊಡೆದಿದ್ದರಿಂದ ಅನುಶ್ರೀ ಮೃತಪಟ್ಟಿದ್ದಾಳೆ ಎಂದು ತಿಳಿಸಿದರು.

ಈ ಸವಾಲಿನ ಪ್ರಕರಣವನ್ನು ನಮ್ಮ ತಂಡದವರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ. ಆರೋಪಿ ಬಗ್ಗೆ ತಿಳಿಸಿದವರಿಗೆ ರೂ. 25 ಸಾವಿರ ಬಹುಮಾನ ಘೋಷಿಸಲಾಗಿತ್ತು. ಈಗ ಅದನ್ನು ನಮ್ಮ ಸಿಬ್ಬಂದಿಗೆ ಕೊಡಲಾಗುವುದು. ಆರೋಪಿ ಕೃತ್ಯಕ್ಕೆ ಬಳಸಿದ ಕೋಲು, ಮುಚ್ಚಿಟ್ಟಿದ್ದ ಬಾಲಕಿಯ ಚಪ್ಪಲಿ ಮತ್ತು ಮೃತದೇಹ ಕಾಣದಂತೆ ಅಡ್ಡಲಾಗಿ ಇರಿಸಿದ್ದ ನೀರಿನ ಸ್ಟೀಲ್ ಟ್ಯಾಂಕ್‌ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದರು.

ಘಟನೆ ನಡೆದ ದಿನ ಹಾಗೂ ತನಿಖೆ ಸಲುವಾಗಿ ಪೊಲೀಸರು ಅನೇಕ ಬಾರಿ ಕಿನ್ನಾಳಕ್ಕೆ ತೆರಳಿದ್ದಾಗ ಅವರ ಎದುರೇ ಆರೋಪಿ ಓಡಾಡಿದ್ದ. ಪೊಲೀಸರೇ ಬಂದು ನನ್ನನ್ನು ಬಂಧಿಸಲಿ, ಪ್ರಶ್ನಿಸಲಿ ಎಂದು ಗಟ್ಟಿಗನಾಗಿಯೇ ಇದ್ದ. ಒಂದು ಸಲ ಪೊಲೀಸರು ಠಾಣೆಗೆ ಕರೆದು ವಿಚಾರಣೆ ಮಾಡಿದ್ದರೂ ಆರೋಪ ದೃಢಪಟ್ಟಿರಲಿಲ್ಲ. ಜನನಿಬಿಡ ಪ್ರದೇಶದಲ್ಲಿಯೇ ಈ ಘಟನೆ ನಡೆದಿದ್ದರೂ ಆರೋಪಿಯನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಿನ ಕೆಲಸವಾಗಿತ್ತು. ಇದಕ್ಕಾಗಿ ವಿಶೇಷ ತಂಡವನ್ನೂ ರಚಿಸಲಾಗಿತ್ತು ಎಂದು ತಿಳಿಸಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಕೇಸ್; ಆರೋಪಿ ನಕಲಿ ವೈದ್ಯನಿಂದ ಭ್ರೂಣ ಹತ್ಯೆ - FETICIDE CASE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.