ETV Bharat / state

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕೊಲೆ, ಆರೋಪಿ ಪತಿ ಸೆರೆ - Husband Kills Wife - HUSBAND KILLS WIFE

ಪತ್ನಿಯನ್ನು ಕೊಲೆಗೈದ ಪತಿಯನ್ನು ಉಡುಪಿಯ ಕೋಟಾ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ತಾಲೂಕಿನಲ್ಲಿ ಘಟನೆ ನಡೆದಿದೆ.

Kiran Upadhyay Gundmi
ಕೊಲೆ ಆರೋಪಿ ಕಿರಣ್ ಉಪಾಧ್ಯ ಗುಂಡ್ಮಿ ಹಾಗೂ ಜಯಶ್ರೀ (ETV Bharat)
author img

By ETV Bharat Karnataka Team

Published : Aug 23, 2024, 3:22 PM IST

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಮಾಹಿತಿ ನೀಡಿದರು. (ETV Bharat)

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಪತಿ ತನ್ನ ಪತ್ನಿಯನ್ನು ಕೊಲೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪದ ಬಾಡಿಗೆ ಮನೆಯಲ್ಲಿ ಇಂದು ನಡೆದಿದೆ.

ಬೀದರ್‌ ದೊಣಗಪುರ ಮೂಲದ ಜಯಶ್ರೀ (31) ಕೊಲೆಗೀಡಾದ್ದಾರೆ. ಕೊಲೆ ಆರೋಪಿ ಪತಿ ಕಿರಣ್ ಉಪಾಧ್ಯ ಗುಂಡ್ಮಿ(44) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಕಳೆದ ಎರಡು ವರ್ಷಗಳಿಂದ ಸ್ಥಳೀಯ ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಹಿರಿಯ ಪೊಲೀಸರು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಪ್ರತಿಕ್ರಿಯಿಸಿ, "ಗಂಡ, ಹೆಂಡತಿ ನಡುವೆ ಜಗಳವಾಗಿದೆ. ಗಲಾಟೆ ಅಕ್ಕಪಕ್ಕದ ಮನೆಯವರಿಗೂ ಕೇಳಿಸಿದೆ. ಬೆಳಗಿನ ಜಾವ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಗಂಡನೇ ಹೆಂಡತಿಯನ್ನು ಕೊಲೆ ಮಾಡಿರುವುದು ಗೊತ್ತಾಯಿತು. ಈಗಾಗಲೇ ಆರೋಪಿ ಕಿರಣ್‌ನನ್ನು ಅರೆಸ್ಟ್ ಮಾಡಿದ್ದೇವೆ. ಮೃತರ ಪೋಷಕರು ಹಾಗೂ ಸಂಬಂಧಿಕರಿಗೆ ತಿಳಿಸಲಾಗಿದೆ" ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು: ಪತ್ನಿಯನ್ನು ಸ್ಮಶಾನದ ಬಳಿ ಕರೆದೊಯ್ದ ಕಿರಾತಕ; ಹೆಂಡ್ತಿ ಕೊಂದು ಪರಾರಿ - Husband Kills Wife

ETV Bharat Logo

Copyright © 2025 Ushodaya Enterprises Pvt. Ltd., All Rights Reserved.