ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆಂದು ಬಂದಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಶಾಲಾ ಕೊಠಡಿಯಲ್ಲಿಯೇ ಕೂಡಿಹಾಕಿ ಬಲವಂತದಿಂದ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಾವೂರ ನಿವಾಸಿ ಜಯಂತ ಬಂಧಿತ . ಡಿ.14ರಂದು ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವಿತ್ತು. ಅಂದು ಕಾರ್ಯಕ್ರಮ ನೋಡಲು ಮನೆಯವರೊಂದಿಗೆ ಯುವತಿ ಶಾಲೆಗೆ ಬಂದಿದ್ದಳು. ಈ ವೇಳೆ ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಯುವತಿಯನ್ನು ಕೂಡಿ ಹಾಕಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.
ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ಗ್ರಾಮಾಂತರ ಎಸ್.ಐ. ಹರೀಶ್ ಹಾಗೂ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದನ್ನೂ ಓದಿ: ಬೆಂಗಳೂರು: ಪಾರ್ಟಿಗೆ ಕರೆದೊಯ್ದು ಪರಸ್ಪರ ಗೆಳತಿಯರ ಬದಲಾವಣೆ, ಸಹಕರಿಸದಿದ್ದಾಗ ಅತ್ಯಾಚಾರ; ಇಬ್ಬರ ಬಂಧನ - RAPE CASE