ETV Bharat / state

ಮಾರಕಾಸ್ತ್ರ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್; ಆರೋಪಿ ಬಂಧನ - ಮಾರಕಾಸ್ತ್ರ ಹಿಡಿದು ವೀಡಿಯೋ ಅಪ್ಲೋಡ್

ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುತ್ತಿದ್ದ ಯುವಕನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಆರೋಪಿ ಬಂಧನ

author img

By ETV Bharat Karnataka Team

Published : Jan 21, 2024, 1:20 PM IST

ಬೆಂಗಳೂರು: ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಶಾಂಕ್ (26) ಬಂಧಿತ ಯುವಕ.

ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುತ್ತಿದ್ದ ಆರೋಪದಡಿ ಈತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯಲ್ಲಿ ಆರೋಪಿಯ ವಿರುದ್ಧ ಮೇಲೆ 7 ಪ್ರಕರಣಗಳಿರುವುದು ಬೆಳಕಿಗೆ ಬಂದಿದೆ. 2015ರಲ್ಲಿ ಹುಳಿಮಾವು ಹಾಗೂ 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಗಳಲ್ಲಿ ತಲಾ ಒಂದೊಂದು ಹತ್ಯೆ ಪ್ರಕರಣಗಳು, ರಾಜಾಜಿನಗರ, ತಿಲಕನಗರ ಠಾಣಾ ವ್ಯಾಪ್ತಿಗಳಲ್ಲಿ ಒಂದೊಂದು ಕೊಲೆ ಯತ್ನ ಪ್ರಕರಣ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಅಪಹರಣ, ಕೊಲೆಯತ್ನ ಪ್ರಕರಣ ಹಾಗೂ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಒಂದು ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಏಳು ಪ್ರಕರಣಗಳಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಎಂ ವಿರುದ್ಧ ಅವಹೇಳನಕಾರಿ ಆಡಿಯೋ ಅಪ್ಲೋಡ್: ಕಳೆದ ನವೆಂಬರ್​ನಲ್ಲಿ ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರೊಬ್ಬರು ಸಿಎಂ ವಿರುದ್ಧ ಅವಹೇಳನಕಾರಿ ಆಡಿಯೋ ಹರಿಬಿಟ್ಟಿದ್ದರು. ಬಳಿಕ ಅವರ ಮೇಲೆ ಎಫ್​ಐಆರ್​ ದಾಖಲಾಗಿತ್ತು. ಇದಕ್ಕೂ ಹಿಂದೆ ಸಿಎಂ, ಡಿಸಿಎಂ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇವರ ವಿರುದ್ಧ ಬೆಂಗಳೂರಿನ ವೈಟ್‌ಫೀಲ್ಡ್ ಸೆನ್ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿ ಬಂಧನ: ಚಿಕ್ಕಮಗಳೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಕಾಲಿಗೆ ಗುಂಡೆಟ್ಟು ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ, ಜ.13 ರಂದು ಶನಿವಾರ ರಾತ್ರಿ ಪೊಲೀಸರ ಕಣ್ಣು ತಪ್ಪಿಸಿ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಮತ್ತೆ ಜನವರಿ 16 ರಂದು ಆರೋಪಿಯನ್ನು ಬಂಧಿಸುವಲ್ಲಿ ಬಾಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದರು.

ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಪೂರ್ಣೇಶ್ ಬಾಳೆಹೊನ್ನೂರಿನ ಖಾಂಡ್ಯದ ಬ್ರಿಡ್ಜ್ ಬಳಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದನು. ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಪೂರ್ಣೇಶ್ ಪೊಲೀಸರ ಮೇಲೆ ಲಾಂಗ್ ಬೀಸಿದ್ದ ವೇಳೆ ಗುಂಡೇಟು ತಿಂದು ಆಸ್ಪತ್ರೆಗೆ ದಾಖಲಾಗಿದ್ದನು. ಆರೋಪಿಯ ಬಂಧನಕ್ಕಾಗಿ ಎಸ್ಪಿ ವಿಕ್ರಂ ಅಮಟೆ ಏಳು ತಂಡವನ್ನು ರಚನೆ ಮಾಡಿ ಶೋಧ ಕಾರ್ಯವನ್ನು ಪ್ರಾರಂಭಿಸಿದ್ದರು. ಬಾಳೆಹೊನ್ನೂರು ಠಾಣೆ ಪಿಎಸ್​ಐ ದಿಲೀಪ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೆರೆಹಿಡಿಯಲಾಗಿತ್ತು.

ಇದನ್ನೂ ಓದಿ: ಚಿಕ್ಕಮಗಳೂರು: ಗುಂಡು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ರೌಡಿಶೀಟರ್ ಆಸ್ಪತ್ರೆಯಿಂದ ಎಸ್ಕೇಪ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.