ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಫಯಾಜ್ ಕೊಂಡುನಾಯ್ಕನನ್ನು ಮತ್ತೆ 14 ದಿನಗಳವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಹೆಚ್ಚಿನ ತನಿಖೆಗಾಗಿ ಫಯಾಜ್‌ನನ್ನು ಸ್ಥಳೀಯ ಒಂದನೇ ಹೆಚ್ಚುವರಿ ದಿವಾಣಿ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಅನುಮತಿ ಮೇರೆಗೆ ಬುಧವಾರದಿಂದ ಏ. 30ರ ವರೆಗೆ ಆರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದರು. ಮಂಗಳವಾರ ಬಂಧಿತ ಫಯಾಜ್‌ನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗದ ವಶಕ್ಕೆ ಒಪ್ಪಿಸಿದರು. ನ್ಯಾಯಾಲಯವು 14 ದಿನಗಳ ಕಾಲ ಫಯಾಜ್‌ನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.
ಇದನ್ನೂ ಓದಿ: ನೇಹಾ ಹತ್ಯೆ ಪ್ರಕರಣ: ಡಿಎನ್ಎ ಪರೀಕ್ಷೆಗಾಗಿ ಫಯಾಜ್‌ನನ್ನು ನ್ಯಾಯಾಲಯಕ್ಕೆ ಕರೆತಂದ ಸಿಐಡಿ ಅಧಿಕಾರಿಗಳು - Neha Murder Case